ಹೈಕೋರ್ಟ್ 
ರಾಜ್ಯ

ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಸಿ: ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರವು ತನ್ನ ವ್ಯಾಪ್ತಿಗೆ ಒಳಪಡುವ ಸುಮಾರು 8,000 ಶಾಲೆಗಳನ್ನು ಮತ್ತು ಒಂದು ಲಕ್ಷಕ್ಕೂ ಹೆಚ್ಚು ಶಿಕ್ಷಕರನ್ನು ಹೊಂದಿದೆ. ಕಳೆದ ಮೂರು ತಿಂಗಳಿನಿಂದ ಖಾಲಿ ಇರುವ ಸ್ಥಾನಕ್ಕೆ ವಿಧಾನ ಪರಿಷತ್ತಿನಲ್ಲಿ ಧ್ವನಿ ಎತ್ತುವವರಿಲ್ಲ ಎನ್ನುವಂತಾಗಿದೆ. 

ಬೆಂಗಳೂರು: ವಿಧಾನಸಭಾ ಚುನಾವಣೆಯ ನಂತರ ನೂತನ ಸರ್ಕಾರದಲ್ಲಿ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಯಾವುದೇ ಪ್ರತಿನಿಧಿ ಇಲ್ಲ. ಕರ್ನಾಟಕ ಅಸೋಸಿಯೇಟೆಡ್ ಮ್ಯಾನೇಜ್‌ಮೆಂಟ್ ಆಫ್ ಸ್ಕೂಲ್ಸ್ (KAMS) ಮತ್ತು ಕರ್ನಾಟಕ ಖಾಸಗಿ ಶಾಲೆಗಳ ಆಡಳಿತಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಸಮನ್ವಯ ಸಮಿತಿ (KPMTCC) ಮಧ್ಯಪ್ರವೇಶಿಸುವಂತೆ ಕರ್ನಾಟಕ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿಯನ್ನು ಸಲ್ಲಿಸಿದ್ದು, ನ್ಯಾಯಾಲಯವು ಭಾರತೀಯ ಚುನಾವಣಾ ಆಯೋಗವನ್ನು ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಸಲು ಕೇಳಿದೆ. 

ಈ ಹಿಂದೆ ಪುಟ್ಟಣ್ಣ ಅವರು 2021ರಿಂದ 2027ರವರೆಗೆ ಆರು ವರ್ಷಗಳ ಕಾಲ ಎಂಎಲ್‌ಸಿ ಆಗಿ ಆಯ್ಕೆಯಾಗಿದ್ದರು. 2023ರ ಮಾರ್ಚ್‌ನಲ್ಲಿ ಆ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದರು. ಸರ್ಕಾರ ತಮ್ಮ ಸಮಸ್ಯೆಗಳನ್ನು ಆಲಿಸುತ್ತಿಲ್ಲ ಎಂದು ಕಾರ್ಯಕರ್ತರು ಆರೋಪಿಸುತ್ತಿದ್ದಾರೆ. 

ಬೆಂಗಳೂರು ಶಿಕ್ಷಕರ ಕ್ಷೇತ್ರವು ತನ್ನ ವ್ಯಾಪ್ತಿಗೆ ಒಳಪಡುವ ಸುಮಾರು 8,000 ಶಾಲೆಗಳನ್ನು ಮತ್ತು ಒಂದು ಲಕ್ಷಕ್ಕೂ ಹೆಚ್ಚು ಶಿಕ್ಷಕರನ್ನು ಹೊಂದಿದೆ. ಕಳೆದ ಮೂರು ತಿಂಗಳಿನಿಂದ ಖಾಲಿ ಇರುವ ಸ್ಥಾನಕ್ಕೆ ವಿಧಾನ ಪರಿಷತ್ತಿನಲ್ಲಿ ಧ್ವನಿ ಎತ್ತುವವರಿಲ್ಲ ಎನ್ನುವಂತಾಗಿದೆ. 

ಕಾನೂನಿನ ಪ್ರಕಾರ, ಚುನಾವಣಾ ಆಯೋಗವು ಪ್ರಜಾಪ್ರತಿನಿಧಿ ಕಾಯ್ದೆಯ ಸೆಕ್ಷನ್ 151 ಎ ಅಡಿಯಲ್ಲಿ ಸದರಿ ಹುದ್ದೆಯನ್ನು ಖಾಲಿ ಇರಿಸುವಂತಿಲ್ಲ, ಖಾಲಿಯಿರುವ ದಿನಾಂಕದಿಂದ 6 ತಿಂಗಳೊಳಗೆ ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಹೇಳುತ್ತದೆ. ಇದರಿಂದ ಮತದಾರರ ಹಕ್ಕುಗಳ ಮೇಲೆ ಪರಿಣಾಮ ಬೀರಲಿದೆ. ಕೆಎಎಂಎಸ್‌ನ ಶಶಿಕುಮಾರ್, ಆದಷ್ಟು ಬೇಗ ಚುನಾವಣೆ ನಡೆಸುವುದು ಬಹಳ ಮುಖ್ಯ. ಇಷ್ಟೆಲ್ಲಾ ಪತ್ರಗಳನ್ನು ನೀಡಿ ಆಯೋಗಕ್ಕೆ ಮನವಿ ಮಾಡಿದರೂ ಈ ನಿಟ್ಟಿನಲ್ಲಿ ಕ್ರಮ ಕೈಗೊಂಡಿಲ್ಲ.

ಇತರ ಕ್ಷೇತ್ರಗಳಿಗೆ ಹೋಲಿಸಿದರೆ ಇದು ಅತಿದೊಡ್ಡ ಎಂಎಲ್‌ಸಿ ಕ್ಷೇತ್ರಗಳಲ್ಲಿ ಒಂದಾಗಿದೆ.ನ38 ಎಂಎಲ್‌ಎ ಕ್ಷೇತ್ರಗಳ ಶಿಕ್ಷಕರು ಚುನಾವಣೆಗೆ ಮತ ಚಲಾಯಿಸುತ್ತಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT