ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ದಿನದ 24 ಗಂಟೆ ಹೋಟೆಲ್ ತೆರೆಯಲು ಶೀಘ್ರದಲ್ಲೇ ಗ್ರೀನ್ ಸಿಗ್ನಲ್!

ಮಹಾನಗರ ಬೆಂಗಳೂರಿನ  ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳು ಶೀಘ್ರದಲ್ಲೇ ದಿನದ 24 ಗಂಟೆಯೂ ತೆರೆದಿರುತ್ತವೆ. ಮಹತ್ವಾಕಾಂಕ್ಷೆಯ ಬ್ರಾಂಡ್ ಬೆಂಗಳೂರು ಕಾರ್ಯಕ್ರಮದಡಿ ಟೆಕ್-ಕ್ಯಾಪಿಟಲ್‌ನ ಇಮೇಜ್  ಹೆಚ್ಚಿಸುವುದು ಇದರ ಗುರಿಯಾಗಿದೆ.

ಬೆಂಗಳೂರು: ಮಹಾನಗರ ಬೆಂಗಳೂರಿನ  ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳು ಶೀಘ್ರದಲ್ಲೇ ದಿನದ 24 ಗಂಟೆಯೂ ತೆರೆದಿರುತ್ತವೆ. ಮಹತ್ವಾಕಾಂಕ್ಷೆಯ ಬ್ರಾಂಡ್ ಬೆಂಗಳೂರು ಕಾರ್ಯಕ್ರಮದಡಿ ಟೆಕ್-ಕ್ಯಾಪಿಟಲ್‌ನ ಇಮೇಜ್  ಹೆಚ್ಚಿಸುವುದು ಇದರ ಗುರಿಯಾಗಿದೆ. ಹೋಟೆಲ್‌ಗಳು ಮತ್ತು ರೆಸ್ಟೊರೆಂಟ್‌ಗಳನ್ನು ದಿನದ 24 ಗಂಟೆ ತೆರೆಯಲು ಅವಕಾಶ ನೀಡಬೇಕು ಎಂಬುದು ಬೃಹತ್ ಬೆಂಗಳೂರು ಹೊಟೇಲ್ ಅಸೋಸಿಯೇಷನ್‌ನ  ಬಹಳ ದಿನಗಳ ಬೇಡಿಕೆ ಬಾಕಿ ಉಳಿದಿದೆ. ಈ ಹಿಂದೆ ಬಿಜೆಪಿ ರಾಜ್ಯ ಸರ್ಕಾರ ಇದನ್ನು ಒಪ್ಪಿಕೊಂಡಿದ್ದರೂ, ಭದ್ರತಾ ಕಾರಣಗಳಿಂದ ಯಾವುದೇ ದೃಢ ನಿರ್ಧಾರ ಕೈಗೊಂಡಿರಲಿಲ್ಲ. 

ಸಂಘದ ಸದಸ್ಯರೊಂದಿಗೆ ಶನಿವಾರ ಸಭೆ ನಡೆಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಪ್ರಸ್ತಾವನೆಗೆ ಒಪ್ಪಿಗೆ ನೀಡಿದರು. ಡಿಸಿಎಂ ಅವರನ್ನು ಭೇಟಿ ಮಾಡಿ ನಗರದಲ್ಲಿ 24 ಗಂಟೆಗಳ ಕಾಲ ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳನ್ನು ತೆರೆಯಲು ಪ್ರಸ್ತಾವನೆ ಸಲ್ಲಿಸಿದ್ದೇವೆ. ಶಿವಕುಮಾರ್ ನಮ್ಮ ಬೇಡಿಕೆ ಆಲಿಸಿದ್ದು, ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದರೆ  ಒಂದು ವಾರ ಅಥವಾ 10 ದಿನಗಳಲ್ಲಿ ಹೋಟೆಲ್‌ಗಳು ಮತ್ತು ರೆಸ್ಟೊರೆಂಟ್‌ಗಳು ದಿನದ 24 ಗಂಟೆ ತೆರೆಯಲು ಅನುಮತಿ ನೀಡುವ ಆದೇಶ ಹೊರಬೀಳಬಹುದುಎಂದು ಸಂಘದ ಅಧ್ಯಕ್ಷ ಪಿಸಿ ರಾವ್ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದರು. 

ಬೆಂಗಳೂರಿನಲ್ಲಿ 24,000 ಕ್ಕೂ ಹೆಚ್ಚು ಸಣ್ಣ ಮತ್ತು ದೊಡ್ಡ ಹೋಟೆಲ್‌ಗಳಿವೆ, ಅವುಗಳಲ್ಲಿ ಶೇ. 10 ರಷ್ಟು ಹೋಟೆಲ್ ಗಳು ದಿನದ 24 ಗಂಟೆ ಕಾರ್ಯನಿರ್ವಹಿಸಲು ಸಿದ್ಧವಾಗಿವೆ. ಇದನ್ನು ಹೊರತುಪಡಿಸಿ, ರಾತ್ರಿ ಸಮಯದಲ್ಲಿ ಮಾತ್ರ ಹೊಸ ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌  ತೆರೆಯಲು ಹಲವರು ಉತ್ಸುಕರಾಗಿದ್ದಾರೆ ಎಂದು ರಾವ್ ಹೇಳಿದರು.

ರಾತ್ರಿ 10 ಗಂಟೆಯ ನಂತರ ಹೋಟೆಲ್‌ಗಳನ್ನು ತೆರೆಯಲು ಪೊಲೀಸರ ವಿರೋಧದ ಕುರಿತು ಮಾತನಾಡಿದ ರಾವ್, ನಮ್ಮ ಬೇಡಿಕೆಯು ರಾತ್ರಿ ಪಾಳಿಯಲ್ಲಿ ಕೆಲಸ ಮಾಡುವ ನೌಕರರು, ಆಟೋ ಮತ್ತು ಕ್ಯಾಬ್ ಚಾಲಕರು ಮತ್ತು ಇತರರಿಗೆ ಸಹಾಯ ಮಾಡಲಿದ್ದು, ಬ್ರಾಂಡ್ ಬೆಂಗಳೂರು ಉಪಕ್ರಮಕ್ಕೆ ಪೂರಕವಾಗಲಿದೆ ಎಂದು ಶಿವಕುಮಾರ್ ಭಾವಿಸಿದ್ದಾರೆ ಎಂದರು. 

ಹೋಟೆಲ್ ಕ್ಷೇತ್ರಕ್ಕೆ ಉದ್ಯಮ ಸ್ಥಾನಮಾನ ಕಲ್ಪಿಸಲು ಕ್ರಮಕೈಗೊಳ್ಳಬೇಕು, ವ್ಯಾಪಾರ ಮತ್ತು ಭಾರತೀಯ ಆಹಾರ ಮತ್ತು ಸುರಕ್ಷತಾ ಮಾನದಂಡಗಳ ಪ್ರಾಧಿಕಾರದಂತಹ ಬಹು ಪರವಾನಗಿಗಳ ಬದಲಿಗೆ, ಹೋಟೆಲ್‌ಗಳನ್ನು ಒಂದೇ ಪರವಾನಗಿಯಲ್ಲಿ ನಡೆಸಲು ಅನುಮತಿಸಬೇಕು ಎಂದು ಸಂಘದ ಸದಸ್ಯರು ಶಿವಕುಮಾರ್ ಅವರನ್ನು ಒತ್ತಾಯಿಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT