ಸಾಂದರ್ಭಿಕ ಚಿತ್ರ 
ರಾಜ್ಯ

ಮಂಗಳೂರು: ನೌಕರನನ್ನು ಸುಟ್ಟು ಕೊಂದ ಆರೋಪದ ಮೇಲೆ ಅಂಗಡಿ ಮಾಲೀಕನ ಬಂಧನ

ಮುಳಿಹಿತ್ಲು ಜಂಕ್ಷನ್‌ನಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ, ತನ್ನ ನೌಕರನನ್ನು ಸುಟ್ಟು ಕೊಂದ ಆರೋಪದ ಮೇಲೆ ಅಂಗಡಿ ಮಾಲೀಕನನ್ನು ಬಂಧಿಸಲಾಗಿದೆ.

ಮಂಗಳೂರು: ಮುಳಿಹಿತ್ಲು ಜಂಕ್ಷನ್‌ನಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ, ತನ್ನ ನೌಕರನನ್ನು ಸುಟ್ಟು ಕೊಂದ ಆರೋಪದ ಮೇಲೆ ಅಂಗಡಿ ಮಾಲೀಕನನ್ನು ಬಂಧಿಸಲಾಗಿದೆ.

ಪಾಂಡೇಶ್ವರದ ನಿವಾಸಿ ಮತ್ತು ಮಶುಪಾ ಜನರಲ್ ಸ್ಟೋರ್‌ನ ಮಾಲೀಕ ತೌಸೀಫ್ ಹಸನ್ (32) ತನ್ನ ನೌಕರ ಘಜ್ನಾನ್ ಅಲಿಯಾಸ್ ಝರು ಅವರನ್ನು ಕೊಲ್ಲುವ ಉದ್ದೇಶದಿಂದ ಅಂಗಡಿಯಲ್ಲಿಯೇ ಉದ್ದೇಶಪೂರ್ವಕವಾಗಿ ಬೆಂಕಿ ಹಚ್ಚಿದ ಆರೋಪಿಯಾಗಿದ್ದಾರೆ.

ಶನಿವಾರ ಬೆಳಗ್ಗೆ 8.30ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಂದು ಮಧ್ಯಾಹ್ನದ ಸುಮಾರಿಗೆ ತೌಸೀಫ್ ಸಾರ್ವಜನಿಕರಿಗೆ ಹಾಗೂ ಪೊಲೀಸರಿಗೆ ಘಜ್ನಾನ್ ವಿದ್ಯುತ್ ಸ್ಪರ್ಶದಿಂದ ಸಾವಿಗೀಡಾಗಿದ್ದಾನೆ ಎಂದು ಹೇಳಿ ತನಿಖಾಧಿಕಾರಿಗಳನ್ನು ದಾರಿತಪ್ಪಿಸಲು ಯತ್ನಿಸಿದ್ದರು.

ಘಟನೆಯ ನಂತರ ಘಜ್ನಾನ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಆ ವೇಳೆಗಾಗಲೇ ಆತ ಮೃತಪಟ್ಟಿರುವುದಾಗಿ ವೆನ್ಲಾಕ್ ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿ ಘೋಷಿಸಿದರು. 

ಆದರೆ, ನಗರದ ದಕ್ಷಿಣ ಪೊಲೀಸರು ನಡೆಸಿದ ಪ್ರಾಥಮಿಕ ತನಿಖೆಯಿಂದ ಅಪರಾಧದ ನಿಜ ಸ್ವರೂಪ ಬಯಲಾಗಿದೆ. ತನಿಖೆಯ ನಂತರ ತೌಸೀಫ್ ಹಸನ್ ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT