ಚಿಕ್ಕಬಳ್ಳಾಪುರದಲ್ಲಿ ನಡೆದ ಸರಣಿ ಅಪಘಾತದಲ್ಲಿ ದಂಪತಿ ಸಾವು!
ಸ್ಕೂಟಿ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ರಸ್ತೆಗೆ ಬಿದ್ದಿದ್ದ ಸವಾರರ ಮೇಲೆ ಟೆಂಪೊ ಹರಿದ ಪರಿಣಾಮ ದಂಪತಿ ಸಾವನ್ನಪ್ಪಿದ್ದಾರೆ.
ಚಿಕ್ಕಬಳ್ಳಾಪುರ: ಸ್ಕೂಟಿ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ರಸ್ತೆಗೆ ಬಿದ್ದಿದ್ದ ಸವಾರರ ಮೇಲೆ ಟೆಂಪೊ ಹರಿದ ಪರಿಣಾಮ ದಂಪತಿ ಸಾವನ್ನಪ್ಪಿದ್ದಾರೆ.
ಚಿಂತಾಮಣಿ ತಾಲೂಕಿನ ಕಾಚಹಳ್ಳಿ ಬಳಿ ನಡೆದಿದ್ದು ಘಟನೆಯಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ಮೂವರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದ ನಂತರ ಟೆಂಪೊಗೆ ಬೆಂಕಿ ತಗುಲಿ ಹೊತ್ತಿ ಉರಿದಿದ್ದು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.