ಸಿದ್ದರಾಮಯ್ಯ 
ರಾಜ್ಯ

ಇಂದು ಸಂಜೆ ಅನ್ನ ಭಾಗ್ಯ ಯೋಜನೆಗೆ ಚಾಲನೆ: ಫಲಾನುಭವಿಗಳ ಖಾತೆಗೆ ಸರ್ಕಾರದಿಂದ ಹಣ ಜಮಾವಣೆ

ಇಂದು ಸಂಜೆ 5 ಗಂಟೆಗೆ‌ ಅನ್ನ ಭಾಗ್ಯ  ಯೋಜನೆಗೆ ರಾಜ್ಯ ಸರ್ಕಾರ ಚಾಲನೆ ನೀಡಲಿದೆ. ಇದು ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷಿ 3ನೇ ಗ್ಯಾರಂಟಿ ಯೋಜನೆಯಾಗಿದೆ. ಇದರಲ್ಲಿ ಫಲಾನುಭವಿಗಳ ಅಕೌಂಟ್‌ಗೆ 170 ರೂಪಾಯಿ ಹಣ ಜಮಾವಣೆ ಆಗಲಿದೆ.

ಬೆಂಗಳೂರು: ಇಂದು ಸಂಜೆ 5 ಗಂಟೆಗೆ‌ ಅನ್ನ ಭಾಗ್ಯ  ಯೋಜನೆಗೆ ರಾಜ್ಯ ಸರ್ಕಾರ ಚಾಲನೆ ನೀಡಲಿದೆ. ಇದು ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷಿ 3ನೇ ಗ್ಯಾರಂಟಿ ಯೋಜನೆಯಾಗಿದೆ. ಇದರಲ್ಲಿ ಫಲಾನುಭವಿಗಳ ಅಕೌಂಟ್‌ಗೆ 170 ರೂಪಾಯಿ ಹಣ ಜಮಾವಣೆ ಆಗಲಿದೆ.

ಯೋಜನೆಯ ರೂಪರೇಷೆ ಪ್ರಕಾರ ಸರ್ಕಾರ ಪ್ರತಿ ವ್ಯಕ್ತಿಗೆ 10 ಕಿಲೋ ಅಕ್ಕಿ ನೀಡಬೇಕಿತ್ತು. ಇದರಲ್ಲಿ 5 ಕಿಲೋ ಅಕ್ಕಿಯನ್ನು ಕೇಂದ್ರ ಸರ್ಕಾರ ನೀಡುತ್ತಿದೆ. ಉಳಿದ 5 ಕಿಲೋ ಅಕ್ಕಿ ಲಭ್ಯವಿಲ್ಲದ  ಕಾರಣ ಅಕ್ಕಿ ಬದಲಿಗೆ 1 ಕೆಜಿಗೆ 34 ರೂಪಾಯಿಯಂತೆ 5 ಕಿಲೋ ಅಕ್ಕಿಗೆ 170 ರೂ. ನೀಡಲು ಸರ್ಕಾರ ನಿರ್ಧರಿಸಿದೆ. ಈ ಯೋಜನೆಗೆ ಬಜೆಟ್‌ನಲ್ಲೂ ಸಿಎಂ ಸಿದ್ದರಾಮಯ್ಯ ಹಣ ಮೀಸಲಿಟ್ಟಿದ್ದಾರೆ.

ರಾಜ್ಯದಲ್ಲಿ ಸುಮಾರು 1.29 ಕೋಟಿ ಬಿಪಿಎಲ್‌ ಕಾರ್ಡ್‌ಗಳು ಬಳಕೆಯಲ್ಲಿವೆ. ಬಿಪಿಎಲ್ ಕಾರ್ಡ್‌ ಆಧಾರದಲ್ಲಿ 4.41 ಕೋಟಿ ಫಲಾನುಭವಿಗಳು ಈ ಯೋಜನೆಯನ್ನು ಅವಲಂಬಿಸಿದ್ದಾರೆ. ಇದರಲ್ಲಿ ಪ್ರತಿಯೊಬ್ಬನ ಅಕೌಂಟ್‌ಗೆ ಮಾಸಿಕ 170 ರೂ. ಬರಲಿದೆ.  ಹಣಕಾಸು ಸಚಿವರೂ ಆಗಿರುವ ಸಿಎಂ, 2023-24ನೇ ಹಣಕಾಸು ವರ್ಷಕ್ಕೆ ಬಜೆಟ್‌ನಲ್ಲಿ ತಿಂಗಳಿಗೆ 856.25 ಕೋಟಿ ರೂ.ನಂತೆ 10,275 ಕೋಟಿ ರೂ. ಹಣ ಮೀಸಲಿಟ್ಟಿದ್ದಾರೆ.

ಜುಲೈ 1 ರಂದು ಯೋಜನೆಯನ್ನು ಪ್ರಾರಂಭಿಸುವುದಾಗಿ ಸರ್ಕಾರ ಭರವಸೆ ನೀಡಿತ್ತು. ಆದರೆ ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವಾಲಯ ಮತ್ತು ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯು ಮುಕ್ತ ಮಾರುಕಟ್ಟೆ ಮಾರಾಟ ಯೋಜನೆಯಡಿ ರಾಜ್ಯಗಳಿಗೆ ಅಕ್ಕಿ ಮತ್ತು ಗೋಧಿ ಮಾರಾಟವನ್ನು ಸ್ಥಗಿತಗೊಳಿಸುವ ನೀತಿ ನಿರ್ಧಾರವನ್ನು ತೆಗೆದುಕೊಂಡಿದ್ದರಿಂದ  ಅಡಚಣೆ ಎದುರಾಯಿತು. ಹೀಗಾಗಿ ಇಕ್ಕಟ್ಟಿನಲ್ಲಿ ಸಿಕ್ಕಿರುವ ರಾಜ್ಯ ಸರ್ಕಾರವು ಅಕ್ಕಿ ಸರಬರಾಜು ಖಾತ್ರಿಯಾಗುವವರೆಗೆ ಫಲಾನುಭವಿಗಳಿಗೆ ಅಕ್ಕಿ ಬದಲಿಗೆ ನಗದು ಪಾವತಿಸಲು ನಿರ್ಧರಿಸಿದೆ. ಇದೀಗ  ಸರಕಾರ ಟೆಂಡರ್ ಕರೆದಿದೆ.

ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಕಾಂಗ್ರೆಸ್ ನೀಡಿದ್ದ ಐದು ಭರವಸೆಗಳಲ್ಲಿ, ಸರ್ಕಾರವು ಗೃಹ ಶಕ್ತಿ ಯೋಜನೆ ಪ್ರಾರಂಭಿಸಿದೆ, ಎಲ್ಲಾ  KSRTC ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತವಾಗಿ ಪ್ರಯಾಣಿಸಲು ಅನುವು ಮಾಡಿಕೊಟ್ಟಿದೆ,.

ಪ್ರತಿ ಮನೆಗೆ 200 ಯೂನಿಟ್‌ ಉಚಿತ ವಿದ್ಯುತ್‌, ಹಾಗೂ ಗೃಹ ಲಕ್ಷ್ಮಿ, ಯೋಜನೆಯಡಿ ಪ್ರತಿ ಕುಟುಂಬದ ಯಜಮಾನಿಗೆ ಮಾಸಿಕ 2,000 ರೂ.  ಹಾಗೂ ಯುವ ನಿಧಿ ಯೋಜನೆಯಲ್ಲಿ ನಿರುದ್ಯೋಗಿ ಪದವೀಧರರಿಗೆ 3,000 ರೂ., ಡಿಪ್ಲೊಮಾಗೆ 1,500 ರೂ. ನೀಡಲು ಸರ್ಕಾರ ನಿರ್ಧರಿಸಿದೆ. ಸಿದ್ದರಾಮಯ್ಯ ಅವರು 2023-24ನೇ ಹಣಕಾಸು ವರ್ಷದ ಎಲ್ಲಾ ಐದು ಭರವಸೆಗಳಿಗೆ ಬಜೆಟ್‌ನಲ್ಲಿ 35,410 ಕೋಟಿ ರೂ. ಹಣ ಮೀಸಲಿಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT