ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಚಿಂದಿ ಆಯುವವರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯ

ಚಿಂದಿ ಆಯುವ ಇಬ್ಬರು ಪಾನಮತ್ತ ವ್ಯಕ್ತಿಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮಲ್ಲೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ನಡೆದಿದೆ.

ಬೆಂಗಳೂರು: ಚಿಂದಿ ಆಯುವ ಇಬ್ಬರು ಪಾನಮತ್ತ ವ್ಯಕ್ತಿಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮಲ್ಲೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ನಡೆದಿದೆ.

ಸುಮಾರು 35-40 ವರ್ಷದ ವ್ಯಕ್ತಿ ಕೊಲೆಯಾಗಿದ್ದಾನೆ. ಸದ್ಯಕ್ಕೆ ಮೃತನ ಹೆಸರು, ಗುರುತು ಹಾಗೂ ವಿಳಾಸ ಪತ್ತೆಯಾಗಿಲ್ಲ. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.

ಶನಿವಾರ ರಾತ್ರಿ 7.30ರ ಸುಮಾರಿಗೆ ಮಲ್ಲೇಶ್ವರದ ಲಿಂಕ್ ರಸ್ತೆಯಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯ ಬಂಧನಕ್ಕಾಗಿ ಬಲೆ ಬೀಸಿದ್ದಾರೆ.

ಚಿಂದಿ ಆಯುವ ಇಬ್ಬರು ವ್ಯಕ್ತಿಗಳ ನಡುವೆ ಶನಿವಾರ ಮಧ್ಯದ ಅಮಲಿನಲ್ಲಿ ಜಗಳ ಆರಂಭವಾಗಿದೆ. ಜಗಳ ವಿಕೋಪಕ್ಕೆ ತಿರುಗಿ ಒಬ್ಬಾತ ದೊಣ್ಣೆಯಿಂದ ಮತ್ತೊಬ್ಬನ ತಲೆಗೆ ಹಲ್ಲೆಗೈದು ಪರಾರಿಯಾಗಿದ್ದಾನೆ.

ಹಲ್ಲೆಯಿಂದ ತೀವ್ರ ರಕ್ತಸ್ರಾವವಾಗಿ ಆ ವ್ಯಕ್ತಿ ಮೃತಪಟ್ಟಿದ್ದಾನೆ. ಕೊಲೆಗೈದ ವ್ಯಕ್ತಿ ಪರಾರಿಯಾಗಿದ್ದಾನೆ ಯಾವ ವಿಚಾರಕ್ಕೆ ಗಲಾಟೆ ನಡೆದಿದೆ ಎಂಬುದು ಇನ್ನೂ ತಿಳಿದುಬಂದಿದೆ.

ಈ ಸಂಬಂಧ ಮಲ್ಲೇಶ್ವರ ಪೊಲೀಸ್ ಠಾಮೆ ಪೊಲೀಸುರ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

SCROLL FOR NEXT