ಕೊಲೆಯಾದ ವೇಣುಗೋಪಾಲ್ ನಾಯಕ್ 
ರಾಜ್ಯ

ಮೈಸೂರು: ಹನುಮ ಜಯಂತಿ ವೇಳೆ ಗುಂಪು ಘರ್ಷಣೆ; ಯುವ ಬ್ರಿಗೇಡ್​ ಕಾರ್ಯಕರ್ತನ ಬರ್ಬರ ಹತ್ಯೆ

ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ಹನುಮ ಜಯಂತಿ ವೇಳೆ ಗುಂಪು ಘರ್ಷಣೆ ನಡೆದಿದ್ದು, ಈ ವೇಳೆ ಯುವ ಬ್ರಿಗೇಡ್ ಕಾರ್ಯಕರ್ತನನ್ನು ಬರ್ಬರ ಹತ್ಯೆ ಮಾಡಲಾಗಿದೆ.

ಮೈಸೂರು: ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ಹನುಮ ಜಯಂತಿ ವೇಳೆ ಗುಂಪು ಘರ್ಷಣೆ ನಡೆದಿದ್ದು, ಈ ವೇಳೆ ಯುವ ಬ್ರಿಗೇಡ್ ಕಾರ್ಯಕರ್ತನನ್ನು ಬರ್ಬರ ಹತ್ಯೆ ಮಾಡಲಾಗಿದೆ.

ಈ ಘಟನೆ ಮೈಸೂರಿನ ತಿ.ನರಸೀಪುರ ಪಟ್ಟಣದ ಹೊರ ವಲಯದಲ್ಲಿ ನಡೆದಿದೆ. ವೇಣುಗೋಪಾಲ್ ನಾಯಕ್ ಕೊಲೆಯಾದ ಯುವಕ.  ಕ್ಷುಲ್ಲಕ ಕಾರಣಕ್ಕೆ  ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.

ಮೃತ ಯುವಕ ವೇಣುಗೋಪಾಲ್ ಯುವಬ್ರಿಗೇಡ್​ನ ಕಾರ್ಯಕರ್ತನಾಗಿದ್ದು, ನರಸೀಪುರ ಪಟ್ಟಣದ ಶ್ರೀರಾಂಪುರ ಕಾಲೋನಿ ನಿವಾಸಿಯಾಗಿದ್ದಾನೆ, ನಿನ್ನೆ ನಡೆದ ಹನುಮ ಜಯಂತಿ ವೇಳೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ಉಂಟಾಗಿತ್ತು, ಈ ವೇಳೆ ಎರಡು ಗುಂಪುಗಳ ನಡುವೆ ಮದ್ಯಸ್ತಿಕೆ ವಹಿಸಿ ಸಮಾಧಾನ ಪಡಿಸಲಾಗಿತ್ತು.

ತಿ.ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ಮೃತ ದೇಹ ರವಾನೆ ಮಾಡಲಾಗಿದ್ದು, ಪೊಲೀಸರು ಘಟನಾ ಸ್ಥಳದಲ್ಲಿಯೇ ಮೊಕ್ಕಾಂ ಹೂಡಿದ್ದಾರೆ. ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಯುವ ಬ್ರಿಗೇಡ್ ಕಾರ್ಯಕರ್ತನ ಕೊಲೆಯಾದ ಹಿನ್ನೆಲೆಯಲ್ಲಿ ತಾಲೂಕು ಆಸ್ಪತ್ರೆಗೆ ಯುವ ಬ್ರಿಗೇಡ್‌ ಮುಖಂಡ ಚಕ್ರವರ್ತಿ ಸೂಲಿಬೆಲೆ ಭೇಟಿ ನೀಡಿದ್ದು, ಮೃತ ಯುವಕನ ಅಂತಿಮ ದರ್ಶನ ಪಡೆದಿದ್ದಾರೆ. ಮೃತ ಯುವಕನ ವೇಣುಗೋಪಾಲ್ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.   

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!