ಮಾನವ-ಪ್ರಾಣಿ ಸಂಘರ್ಷ ನಿಯಂತ್ರಣಕ್ಕೆ ಹೈಕೋರ್ಟ್ ಮಾರ್ಗಸೂಚಿ 
ರಾಜ್ಯ

ಮಾನವ-ಪ್ರಾಣಿ ಸಂಘರ್ಷ ನಿಯಂತ್ರಣಕ್ಕೆ ಮಾರ್ಗಸೂಚಿ ಹೊರಡಿಸಿದ ಕರ್ನಾಟಕ ಹೈಕೋರ್ಟ್

ಮಾನವ-ಪ್ರಾಣಿ ಸಂಘರ್ಷ ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕ ಹೈಕೋರ್ಟ್ ಮಾರ್ಗಸೂಚಿ ಹೊರಡಿಸಿದ್ದು, ಪ್ರತಿ ತಾಲ್ಲೂಕಿನಲ್ಲಿ ದೂರುಗಳನ್ನು ಸ್ವೀಕರಿಸಲು ದೂರುಗಳ ಸೆಲ್ ಸ್ಥಾಪಿಸಲು ನಿರ್ದೇಶಿಸಿದೆ.

ಬೆಂಗಳೂರು: ಮಾನವ-ಪ್ರಾಣಿ ಸಂಘರ್ಷ ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕ ಹೈಕೋರ್ಟ್ ಮಾರ್ಗಸೂಚಿ ಹೊರಡಿಸಿದ್ದು, ಪ್ರತಿ ತಾಲ್ಲೂಕಿನಲ್ಲಿ ದೂರುಗಳನ್ನು ಸ್ವೀಕರಿಸಲು ದೂರುಗಳ ಸೆಲ್ ಸ್ಥಾಪಿಸಲು ನಿರ್ದೇಶಿಸಿದೆ.

ಕರ್ನಾಟಕ ಬೆಳೆಗಾರರ ಒಕ್ಕೂಟ ಸಲ್ಲಿಸಿದ್ದ ಅರ್ಜಿಯನ್ನು ವಿಲೇವಾರಿ ಮಾಡುವಾಗ ಕರ್ನಾಟಕ ಹೈಕೋರ್ಟ್ ಮಂಗಳವಾರ ಮಾನವ-ಪ್ರಾಣಿ ಸಂಘರ್ಷವನ್ನು ತಡೆಗಟ್ಟಲು ಮತ್ತು ಅದರಿಂದ ಸಂತ್ರಸ್ತರಿಗೆ ಬೆಂಬಲ ನೀಡಲು ಹಲವು ಮಾರ್ಗಸೂಚಿಗಳನ್ನು ಹೊರಡಿಸಿದೆ. ಈ ಪೈಕಿ, ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಮತ್ತು ನ್ಯಾಯಮೂರ್ತಿ ಎಂಜಿಎಸ್ ಕಮಲ್ ಅವರ ವಿಭಾಗೀಯ ಪೀಠವು ಪ್ರತಿ ತಾಲ್ಲೂಕಿನಲ್ಲಿ ಕಾಡು ಪ್ರಾಣಿಗಳು ಮಾನವನ ಆವಾಸಸ್ಥಾನಕ್ಕೆ ನುಗ್ಗುವ ಬಗ್ಗೆ ದೂರುಗಳನ್ನು ಸ್ವೀಕರಿಸಲು ದೂರುಗಳ ಸೆಲ್ ಸ್ಥಾಪಿಸಲು ನಿರ್ದೇಶಿಸಿದೆ. ಕಾಡಾನೆಗಳ ಓಡಾಟಕ್ಕೆ ಆನೆ ಕಾರಿಡಾರ್‌ಗಳನ್ನು ಸ್ಥಾಪಿಸುವಂತೆಯೂ ಹೈಕೋರ್ಟ್‌ ಮಾರ್ಗಸೂಚಿಯಲ್ಲಿ ನಿರ್ದೇಶನ ನೀಡಿದೆ.

ಮಾನವ-ಪ್ರಾಣಿ ಸಂಘರ್ಷ ತಡೆಯಲು ಅರಣ್ಯ ಇಲಾಖೆಗೆ ಮಾನವ ಸಂಪನ್ಮೂಲ, ವಾಹನ, ಮೂಲಸೌಕರ್ಯ ಸೇರಿದಂತೆ ಸಾಕಷ್ಟು ಸಂಪನ್ಮೂಲಗಳನ್ನು ಒದಗಿಸುವಂತೆಯೂ ರಾಜ್ಯ ಸರ್ಕಾರಕ್ಕೆ ಸೂಚಿಸಲಾಯಿತು. 24/7 ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲು ಮತ್ತು ಕಾಡು ಪ್ರಾಣಿಗಳ ಬೆದರಿಕೆ ಇರುವ ಪ್ರದೇಶಗಳಲ್ಲಿ ಜನರಿಗೆ ಎಚ್ಚರಿಕೆ ಸಂದೇಶಗಳನ್ನು ದೊಡ್ಡ ಪ್ರಮಾಣದಲ್ಲಿ ಕಳುಹಿಸಬೇಕು. ವನ್ಯಜೀವಿಗಳೊಂದಿಗೆ ಸಂಘರ್ಷದಲ್ಲಿ ಗಾಯಗೊಂಡ ಜನರಿಗೆ ಚಿಕಿತ್ಸೆ ನೀಡಲು ನಿಯಂತ್ರಣ ಕೊಠಡಿಗಳನ್ನು ಹತ್ತಿರದ ಆರೋಗ್ಯ ಕೇಂದ್ರಗಳು ಮತ್ತು ಆಸ್ಪತ್ರೆಗಳಿಗೆ ಸಂಪರ್ಕಿಸಬೇಕು. ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಪ್ರತೀ ತ್ರೈಮಾಸಿಕಕ್ಕೆ ಭೇಟಿ ನೀಡಿ ಮಾನವ-ವನ್ಯಜೀವಿ ಸಂಘರ್ಷಕ್ಕೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಚರ್ಚಿಸಬೇಕು ಮತ್ತು ಅಗತ್ಯ ಕ್ರಮಗಳನ್ನು ಪ್ರಾರಂಭಿಸಬೇಕು ಎಂದು ಹೈಕೋರ್ಟ್ ಹೇಳಿದೆ.

ವಲಯ ಅರಣ್ಯಾಧಿಕಾರಿಗಳು ಮತ್ತು ತಹಸೀಲ್ದಾರ್‌ಗಳು ಪ್ರತಿ ಎರಡು ತಿಂಗಳಿಗೊಮ್ಮೆ ಕಡ್ಡಾಯವಾಗಿ ಸಭೆ ನಡೆಸಿ ಈ ವಿಷಯಗಳ ಕುರಿತು ಚರ್ಚಿಸಬೇಕು. ಅಗತ್ಯ ಸಾರ್ವಜನಿಕ ಪ್ರಕಟಣೆಗಳನ್ನು ಹೊರಡಿಸುವ ಮೂಲಕ ಮತ್ತು ಎಲ್ಲಾ ಗ್ರಾಮ ಪಂಚಾಯಿತಿಗಳ ಸೂಚನಾ ಫಲಕಗಳಲ್ಲಿ ಪ್ರಕಟಿಸುವ ಮೂಲಕ ಸಾರ್ವಜನಿಕರಲ್ಲಿ ದೂರು ಕೋಶಗಳನ್ನು ಜನಪ್ರಿಯಗೊಳಿಸುವಂತೆಯೂ ಹೈಕೋರ್ಟ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT