ಕೊಲೆಯಾದ ವೇಣುಗೋಪಾಲ್ ನಾಯಕ್ 
ರಾಜ್ಯ

ಮೈಸೂರು: ಯುವ ಬ್ರಿಗೇಡ್ ಸಂಚಾಲಕ ವೇಣುಗೋಪಾಲ್ ಹತ್ಯೆ; ಆರು ಮಂದಿ ಬಂಧನ

ಜಿಲ್ಲೆಯ ಟಿ. ನರಸೀಪುರದಲ್ಲಿ ಕಳೆದ ಭಾನುವಾರ ನಡೆದಿದ್ದ ಯುವ ಬ್ರಿಗೇಡ್ ಸಂಘಟನೆ ಸಂಚಾಲಕ ವೇಣುಗೋಪಾಲ ನಾಯಕ (31) ಹತ್ಯೆ ಪ್ರಕರಣದ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಮೈಸೂರು: ಜಿಲ್ಲೆಯ ಟಿ. ನರಸೀಪುರದಲ್ಲಿ ಕಳೆದ ಭಾನುವಾರ ನಡೆದಿದ್ದ ಯುವ ಬ್ರಿಗೇಡ್ ಸಂಘಟನೆ ಸಂಚಾಲಕ ವೇಣುಗೋಪಾಲ ನಾಯಕ (31) ಹತ್ಯೆ ಪ್ರಕರಣದ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ ನಾಯಕ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಣಿಕಂಠ, ಸಂದೇಶ, ಅನಿಲ್, ಶಂಕರ್, ಮಂಜು ಹಾಗೂ ಹ್ಯಾರಿಸ್ ಬಂಧಿತ ಆರೋಪಿಗಳು. ಎಲ್ಲರೂ ಸ್ಥಳೀಯರೇ ಆಗಿದ್ದಾರೆ. ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎಂದು ಪೊಲೀಸರು‌ ಮಾಹಿತಿ ನೀಡಿದರು. ಉಳಿದವರ ಪತ್ತೆಗೂ ತಂಡ ರಚನೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೈಸೂರು ಜಿಲ್ಲೆಯ ಟಿ. ನರಸೀಪುರದಲ್ಲಿ ಹನುಮ ಜಯಂತಿ  ವೇಳೆ ಎರಡು ಗುಂಪುಗಳ ನಡುವೆ ನಡೆದ ಜಗಳ ಯುವ ಬ್ರಿಗೇಡ್​  ಕಾರ್ಯಕರ್ತನ ಕೊಲೆಯಲ್ಲಿ ಅಂತ್ಯವಾಗಿದೆ. ಶನಿವಾರ ಪಟ್ಟಣದಲ್ಲಿ ಹನುಮ ಜಯಂತಿ ಮೆರವಣಿಗೆ ನಡೆದಿತ್ತು. ಈ ವೇಳೆ ಎರಡು ಗುಂಪುಗಳ ನಡುವೆ ಜಗಳ ನಡೆದಿತ್ತು. ಮೆರವಣಿಗೆ ವೇಳೆ ಸಂಧಾನ ಮಾಡಿ ಕಳುಹಿಸಲಾಗಿತ್ತು. ಆದರೆ ಭಾನುವಾರ ಮತ್ತೆ ಜಗಳ ನಡೆದಿತ್ತು, ಆ ವೇಳೆ ವೇಣುಗೋಪಾಲ್ ನಾಯಕ್ ಹತ್ಯೆ ಮಾಡಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

SCROLL FOR NEXT