ಸಂಗ್ರಹ ಚಿತ್ರ 
ರಾಜ್ಯ

ಅತ್ಯಾಚಾರ ಪ್ರಕರಣ: ವಕೀಲರ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಇಂಟರ್ನ್​ಶಿಪ್‌ಗೆ ಬಂದ ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಂಗಳೂರಿನ ವಕೀಲರೊಬ್ಬರ ವಿರುದ್ಧ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಮತ್ತು ಅದರ ಕುರಿತು ಮಂಗಳೂರಿನ 3ನೇ ಜೆಎಂಎಫ್‌ಸಿ ಕೋರ್ಟ್‌ನಲ್ಲಿ ನಡೆಯುತ್ತಿದ್ದ ವಿಚಾರಣೆ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.

ಬೆಂಗಳೂರು: ಇಂಟರ್ನ್​ಶಿಪ್‌ಗೆ ಬಂದ ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಂಗಳೂರಿನ ವಕೀಲರೊಬ್ಬರ ವಿರುದ್ಧ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಮತ್ತು ಅದರ ಕುರಿತು ಮಂಗಳೂರಿನ 3ನೇ ಜೆಎಂಎಫ್‌ಸಿ ಕೋರ್ಟ್‌ನಲ್ಲಿ ನಡೆಯುತ್ತಿದ್ದ ವಿಚಾರಣೆ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.

ತಮ್ಮ ವಿರುದ್ಧ ದಾಖಲಾಗಿದ್ದ ಆರೋಪ ಪಟ್ಟಿಯನ್ನು ರದ್ದುಪಡಿಸುವಂತೆ ಕೋರಿ ವಕೀಲರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ದೂರುದಾರನ ಪ್ರಾಥಮಿಕ ಅಂಶಗಳು ಮತ್ತು ಸಂತ್ರಸ್ತೆಯ ಹೇಳಿಕೆಗಳನ್ನು ದಾಖಲಿಸಿ, ಆರೋಪ ಪಟ್ಟಿ ರದ್ದುಪಡಿಸಲು ನಿರಾಕರಿಸಿತು.

ಅಲ್ಲದೆ, ಪ್ರಕರಣದಲ್ಲಿ ನ್ಯಾಯಾಲಯವು ಮಧ್ಯಪ್ರವೇಶಿಸಿದಲ್ಲಿ ವಕೀಲರ ಕಚೇರಿಗೆ ಇಂಟರ್ನಿಯಾಗಿ ಪ್ರವೇಶಿಸಿದವರ ಮೇಲಿನ ಭಯಾನಕ ಕೃತ್ಯಗಳನ್ನು ನಿರಾಕರಿಸಿದಂತಾಗಲಿದೆ. ಇದು ವಕೀಲರ ವೃತ್ತಿಯ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಜೊತೆಗೆ, ಅರ್ಜಿದಾರರ ಕೆಟ್ಟ ನಡೆಯನ್ನು ಪ್ರಶಂಸೆ ಮಾಡಿದಂತಾಗಲಿದೆ. ಹೀಗಾಗಿ ಅರ್ಜಿದಾರರು ವಿಚಾರಣೆ ಎದುರಿಸಿ, ಆರೋಪ ಮುಕ್ತರಾಗಿ ಹೊರಬರಬೇಕಾಗಿದೆ. ಈ ನಿಟ್ಟಿನಲ್ಲಿ ಅರ್ಜಿಯನ್ನು ತಿರಸ್ಕರಿಸುತ್ತಿರುವುದಾಗಿ ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿತು.

ಆರೋಪಿಯು ಶಿಕ್ಷಕ ಮತ್ತು ನಂಬಿಕಸ್ಥನ ಸ್ಥಾನದಲ್ಲಿರುತ್ತಾರೆ. ಹೀಗಾಗಿ ಐಪಿಸಿ ಸೆಕ್ಷನ್ 376(2)(ಎಫ್)ರ ಆರೋಪಗಳಿದ್ದು, ಈ ಬಗ್ಗೆ ವಿಚಾರಣೆ ನಡೆಸಿ ಪರಿಶೀಲನೆ ನಡೆಸಬೇಕಾಗುತ್ತದೆ. ಘಟನೆಯ ಸಂಬಂಧ ಅರ್ಜಿದಾರರು ಒಪ್ಪಿಕೊಂಡಿದ್ದರೂ, ಅದೊಂದು ಪ್ರಯತ್ನವಾಗಿದೆ, ಆರೋಪಿಸಿದಂತೆ ಘಟನೆ ನಡೆದಿಲ್ಲ ಎಂದು ವಕೀಲರು ವಾದಿಸಿದ್ದಾರೆ. ಅಲ್ಲದೆ, ಪ್ರಕರಣ ಸಂಬಂಧ ಸಿಸಿಟಿವಿ ದೃಶ್ಯಗಳು ಸೇರಿದಂತೆ ಇತರೆ ಅಗತ್ಯ ಸಾಕ್ಷ್ಯಾಧಾರಗಳನ್ನು ಒದಗಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅರ್ಜಿಯನ್ನು ವಜಾಗೊಳಿಸುತ್ತಿರುವುದಾಗಿ ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನಟ ದೇವರಾಜ್ 2ನೇ ಪುತ್ರ ನಟ ಪ್ರಣಮ್ ನಿಶ್ಚಿತಾರ್ಥ

Nepal Floods: ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಇದೇನಾ ಕಾರಣ? ಉಪಗ್ರಹ ಚಿತ್ರಗಳಲ್ಲಿ ಸ್ಫೋಟಕ ಸುಳಿವು!

'Chhatron Ki Goonj' ಕಾರ್ಯಕ್ರಮದ ವೇಳೆ Rahul Gandhi ಮಾಡಿದ 29 ತಪ್ಪುಗಳ ದಾಖಲೆ ನೀಡಿದ ಜೂಟ್ ಕಿ ಗೂಂಜ್ ವೆಬ್​ಸೈಟ್!

ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ವಿರೋಧ: ಮೇಯರ್ ಮಮ್ದಾನಿ ವಿರುದ್ಧ ಅಮೆರಿಕದ ಖ್ಯಾತ ಗಾಯಕಿ ಕಿಡಿ!