ಥಳಿತಕ್ಕೊಳಗಾದ ಯುವಕ. 
ರಾಜ್ಯ

ಹುಬ್ಬಳ್ಳಿ: ಯುವಕನ ಬೆತ್ತಲೆಗೊಳಿಸಿ ಮನಬಂದಂತೆ ಥಳಿತ; ವಿಡಿಯೋ ವೈರಲ್

ಯುವಕನ ಬೆತ್ತಲೆಗೊಳಿಸಿದ ಗುಂಪೊಂದು ಮನಬಂದಂತೆ ಥಳಸಿರುವ ಘಟನೆಯೊಂದು ಬೆಂಡಿಗೇರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಹುಬ್ಬಳ್ಳಿ: ಯುವಕನ ಬೆತ್ತಲೆಗೊಳಿಸಿದ ಗುಂಪೊಂದು ಮನಬಂದಂತೆ ಥಳಸಿರುವ ಘಟನೆಯೊಂದು ಬೆಂಡಿಗೇರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಘಟನೆ ಸಂಬಂಧ ಪೊಲೀಸರು ಐವರನ್ನು ಬಂಧನಕ್ಕೊಳಪಡಿಸಿದ್ದಾರೆ.

ಬಂಧಿತರನ್ನು ಪ್ರಜ್ವಲ್, ವಿನಾಯಕ್, ಗಣೇಶ್, ಸಚಿನ್ ಮತ್ತು ಮಂಜುನಾಥ್ ಎಂದು ಗುರ್ತಿಸಲಾಗಿದ್ದು, ಐವರನ್ನು ವಶಕ್ಕೆ ಪಡೆದಿರು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ನಾಲ್ಕು ತಿಂಗಳ ಹಿಂದೆ ಹುಬ್ಬಳ್ಳಿಯ ಸೆಟ್ಲಮೆಂಟ್ ಪ್ರದೇಶದಲ್ಲಿ ಕೃತ್ಯ ನಡೆದಿದೆ ಎನ್ನಲಾಗುತ್ತಿದ್ದು, ಹಲ್ಲೆಗೊಳಗಾದ ಯುವಕ ದೂರು ನೀಡಿಲ್ಲ. ಅಮಾನುಷ ಕೃತ್ಯದ ಹಿನ್ನೆಲೆಯಲ್ಲಿ ಪೊಲೀಸರು ಸ್ವತಃ ತಾವೇ ಪ್ರಕರಣ ದಾಖಲಿಸಿಕೊಳ್ಳಲು ಚಿಂತನೆ ನಡೆಸಿದ್ದಾರೆ.

ಹಲ್ಲೆಗೊಳಗಾದ ಯುವಕ ಇನ್​​ಸ್ಟಾಗ್ರಾಂನಲ್ಲಿ ಬಂಧನಕ್ಕೊಳಗಾಗಿರುವ ಆರೋಪಿಯೊಬ್ಬನ ತಾಯಿಯ ಕುರಿತು ನಿಂದನಾತ್ಮಕ ಪೋಸ್ಟ್ ಹಾಕಿದ್ದು, ಈ ಹಿನ್ನೆಲೆಯಲ್ಲಿ ಬೆತ್ತಲೆಗೊಳಸಿ, ಥಳಿಸಿದ್ದಾರೆಂದು ಹೇಳಲಾಗುತ್ತಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ಯುವಕನಿಗೆ ಥಳಿಸುತ್ತಿದ್ದವರು ಕನ್ನಡ ಮತ್ತು ಮರಾಠಿ ಭಾಷೆಯಲ್ಲಿ ಮಾತನಾಡುತ್ತಿರುವುದು ಕಂಡು ಬಂದಿದೆ.

ಘಟನೆ ಸಂಬಂಧ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಸಂತೋಷ್ ಬಾಬು ಅವರು ಪ್ರತಿಕ್ರಿಯೆ ನೀಡಿ, ಘಟನೆ ನಾಲ್ಕು ತಿಂಗಳ ಹಿಂದೆ ನಡೆದಿದ್ದು, ವಿಷಯ ಪೊಲೀಸರ ಗಮನಕ್ಕೆ ಬಂದ ತಕ್ಷಣ ಕ್ರಮ ಕೈಗೊಳ್ಳಲಾಗಿದೆ. ಬಂಧಿತರ ಹೇಳಿಕೆ ಆಧರಿಸಿ ಇನ್ನಷ್ಟು ಆರೋಪಿಗಳ ಬಂಧನವಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಇದೊಂದು ಅಮಾನವೀಯ ಘಟನೆಯಾಗಿದ್ದು, ಘಟನೆ ಕ್ರಮ ಕೈಗೊಳ್ಳಲಾಗಿದೆ. ಸಂತ್ರಸ್ತ ಯುವಕ ಸಂತ್ರಸ್ತೆ ಧಾರವಾಡ ಮೂಲದವರಾಗಿದ್ದು, ಶೀಘ್ರದಲ್ಲೇ ಆತನನ್ನು ಪತ್ತೆ ಹಚ್ಚಲಾಗುವುದು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!

ರಹಸ್ಯವಾಗಿ ಎಂಗೇಜ್ಮೆಂಟ್ ಮಾಡಿಕೊಂಡ್ರಾ ‘ಧುರಂಧರ್’ ನಟಿ? ಡೈಮಂಡ್ ರಿಂಗ್ ಪ್ರದರ್ಶಿಸಿದ ಆಯೇಷಾ; ಫೋಟೋ ವೈರಲ್

ಬಾಗಲಕೋಟೆ ಬಳಿ ಭೀಕರ ಅಪಘಾತ: ಬೈಕ್‌ಗೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿ; ಸ್ಥಳದಲ್ಲೇ ಇಬ್ಬರು ಸಾವು

ಕೋಲ್ಕತ್ತಾದ ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು, 6 ಜನರಿಗೆ ಗಾಯ-Video

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್