ಸಂಗ್ರಹ ಚಿತ್ರ 
ರಾಜ್ಯ

ಜೈನ ಮುನಿ ಹತ್ಯೆ ಹಿಂದೆ ಇಸಿಸ್ ಕೈವಾಡವಿರುವಂತಿದೆ: ಬಿಜೆಪಿ ಎಂಎಲ್ಸಿ ನಾರಾಯಣಸ್ವಾಮಿ

ಜೈನ ಮುನಿ ಹತ್ಯೆ ಮಾಡಿ 9 ತುಂಡು ಮಾಡಿರುವುದನ್ನು ನೋಡಿದರೆ ಇದಕ್ಕೆ ಇಸಿಸ್ ನಂಟಿದೆಯಾ ಎನ್ನುವ ಅನುಮಾನ ಬರುತ್ತಿದೆ ಎಂದು ಬಿಜೆಪಿ ಎಂಎಲ್ಸಿ ನಾರಾಯಣಸ್ವಾಮಿ ಅವರು ಮಂಗಳವಾರ ಹೇಳಿದರು.

ಬೆಂಗಳೂರು: ಜೈನ ಮುನಿ ಹತ್ಯೆ ಮಾಡಿ 9 ತುಂಡು ಮಾಡಿರುವುದನ್ನು ನೋಡಿದರೆ ಇದಕ್ಕೆ ಇಸಿಸ್ ನಂಟಿದೆಯಾ ಎನ್ನುವ ಅನುಮಾನ ಬರುತ್ತಿದೆ ಎಂದು ಬಿಜೆಪಿ ಎಂಎಲ್ಸಿ ನಾರಾಯಣಸ್ವಾಮಿ ಅವರು ಮಂಗಳವಾರ ಹೇಳಿದರು.

ವಿಧಾನ ಪರಿಷತ್​​ ನಲ್ಲಿ ನಿಯಮ 68ರ ಅಡಿ ನಡೆದ ಚರ್ಚೆ ವೇಳೆ ಮಾತನಾಡಿರುವ ಅವರು, ನಾವು ಇಸಿಸ್ ಭಯೋತ್ಪಾದಕರು ಯಾವ ರೀತಿ ಟಾರ್ಜರ್ ಕೊಡುತ್ತಾರೆ ಎಂದು ಕೇಳಿದ್ದೆವು. ಇಲ್ಲಿ ಜೈನ ಮುನಿ ಹತ್ಯೆ ಮಾಡಿ 9 ತುಂಡು ಮಾಡಿರುವುದನ್ನು ನೋಡಿದರೆ ಇದಕ್ಕೆ ಇಸಿಸ್ ನಂಟಿದೆಯಾ ಎಂಬ ಅನುಮಾನ ಬರುತ್ತಿದೆ ಎಂದು ಹೇಳಿದರು.

ಇಸಿಸ್ ಕೇರಳಕ್ಕೆ ಬಂದಿದೆ. ಕರ್ನಾಟಕ್ಕೂ ಬರಲಿದೆ. ಇದು ಇಸಿಸ್ ಮಾದರಿಯ ಹತ್ಯೆಯಾಗಿದೆ. ಹಾಗಾಗಿ ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದರು.

ಬಳಿಕ ಮಾತನಾಡಿದ ತೇಜಸ್ವಿನಿಗೌಡ ಅವರು, ಕುಕ್ಕರ್ ಬಾಂಬ್, ಶಿವಮೊಗ್ಗ ಘಟನೆ ನಾವು ಲಘುವಾಗಿ ಪರಿಗಣಿಸಿದೆವು. ಆದರೆ, ಎನ್ಐಎ ತನಿಖೆ ನಂತರವೇ ಇದರ ಆಳ ಅಗಲು ಗೊತ್ತಾಯಿತು. ಹಾಗಾಗಿ ಈ ಪ್ರಕರಣವನ್ನೂ ಲಘುವಾಗಿ ಪರಿಗಣಿಸಬಾರದು. ಸರ್ಕಾರದ ಉತ್ತರ ತುಂಬಾ ಜಾಳವಾಗಿದೆ, 6 ಲಕ್ಷ ಹಣಕ್ಕೆ ಮುನಿಯ ಹತ್ಯೆ ಯಾರೂ ನಂಬಲು ಸಾಧ್ಯವಿಲ್ಲ. ಹಾಗಾಗಿ ಸಿಬಿಐಗೆ ಕೊಡಬೇಕು ಎಂದು ಒತ್ತಾಯಿಸಿದರು.

ಬಿಜೆಪಿ ನಿಯೋಗದಿಂದ ಇಂದು ರಾಜ್ಯಪಾಲರ ಭೇಟಿ
ಈ ನಡುವೆ ಬಿಜೆಪಿ ನಿಯೋಗವು ಬುಧವಾರ ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಲಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಕೋರಿ ಮನವಿ ಪತ್ರ ಸಲ್ಲಿಸಲಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT