ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಒಂದು ತಿಂಗಳು ಪೂರೈಸಿದ 'ಶಕ್ತಿ' ಯೋಜನೆ; 4 ಬಸ್ ನಿಗಮಗಳ ಸಿಬ್ಬಿಂದಿಗೆ ಧನ್ಯವಾದ ತಿಳಿಸಿದ ಸಚಿವ ರಾಮಲಿಂಗಾ ರೆಡ್ಡಿ

ಕರ್ನಾಟಕ ಕಾಂಗ್ರೆಸ್ ಚುನಾವಣೆ ಸಮಯದಲ್ಲಿ ನೀಡಿದ್ದ 5 ಗ್ಯಾರಂಟಿಗಳ ಪೈಕಿ ಮೊದಲು ಜಾರಿಗೆ ಬಂದಿದ್ದು 'ಶಕ್ತಿ' ಯೋಜನೆ. ಸಾಮಾನ್ಯ ಸರ್ಕಾರಿ ಬಸ್‌ಗಳಲ್ಲಿ ಶೂನ್ಯ ದರದ ಟಿಕೆಟ್ ಪಡೆದು ಮಹಿಳೆಯರು ಉಚಿತವಾಗಿ ಸಂಚಾರ ನಡೆಸುವ ಯೋಜನೆ ಇದಾಗಿದೆ.

ಸಂಗ್ರಹ ಚಿತ್ರ
Manjula VN
Updated On : 12 Jul 2023, 12:11 pm

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಚುನಾವಣೆ ಸಮಯದಲ್ಲಿ ನೀಡಿದ್ದ 5 ಗ್ಯಾರಂಟಿಗಳ ಪೈಕಿ ಮೊದಲು ಜಾರಿಗೆ ಬಂದಿದ್ದು 'ಶಕ್ತಿ' ಯೋಜನೆ. ಸಾಮಾನ್ಯ ಸರ್ಕಾರಿ ಬಸ್‌ಗಳಲ್ಲಿ ಶೂನ್ಯ ದರದ ಟಿಕೆಟ್ ಪಡೆದು ಮಹಿಳೆಯರು ಉಚಿತವಾಗಿ ಸಂಚಾರ ನಡೆಸುವ ಯೋಜನೆ ಇದಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಜೂನ್ 11ರಂದು 'ಶಕ್ತಿ' ಯೋಜನೆಗೆ ಚಾಲನೆ ನೀಡಿದ್ದರು. ಯೋಜನೆ ಒಂದು ತಿಂಗಳು ಪೂರೈಸಿದ್ದು, ಹಲವು ಟೀಕೆಗಳ ನಡುವೆಯೂ ಯೋಜನೆ ಯಶಸ್ವಿಯಾಗಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರು, ಈ ಯೋಜನೆಯು ರಸ್ತೆ ಸಾರಿಗೆ ನಿಗಮದ ಚಟುವಟಿಕೆಗಳಲ್ಲಿ ಗಮನಾರ್ಹ ಬದಲಾವಣೆಗಳನ್ನು ತಂದಿದೆ. ಯೋಜನೆ ಯಶಸ್ವಿಗೊಳಿಸಿದ 4 ಬಸ್ ನಿಗಮಗಳ ಸಿಬ್ಬಂದಿಗೆ ಕೃತಜ್ಞತೆ ಸಲ್ಲಿಸುತ್ತೇನೆಂದು ಹೇಳಿದ್ದಾರೆ.

Advertisement

Advertisement

ಇದನ್ನೂ ಓದಿ: 'ಶಕ್ತಿ ಯೋಜನೆ': ಮಹಿಳೆಯರಿಗೆ ಎಷ್ಟು ಅನುಕೂಲ? ರಾಜ್ಯ ಸರ್ಕಾರಕ್ಕೆ ಆಗುತ್ತಿರುವ ವೆಚ್ಚವೇನು?

“ಸಾಮಾನ್ಯರು, ವಿಶೇಷವಾಗಿ ಮಹಿಳಾ ಪ್ರಯಾಣಿಕರು, ಪ್ರತಿದಿನ ಸರ್ಕಾರಿ ಬಸ್‌ಗಳಲ್ಲಿ ಪ್ರಯಾಣಿಸುವ ಮೂಲಕ ಈ ಯೋಜನೆಯ ಪ್ರಯೋಜನಗಳನ್ನು ಪಡೆಯುತ್ತಿದ್ದಾರೆ. ಸರ್ಕಾರಿ ಬಸ್‌ಗಳು ಸಾರ್ವಜನಿಕರ ಜೀವನಾಡಿ ಮಾತ್ರವಲ್ಲದೆ ಮಹಿಳಾ ಪ್ರಯಾಣಿಕರ ಆದ್ಯತೆಯ ಸಾರಿಗೆ ವಿಧಾನವಾಗಿದೆ ಎಂಬುದನ್ನು ಇದು ನಿರೂಪಿಸಿದೆ ಎಂದು ತಿಳಿಸಿದ್ದಾರೆ.

ಪ್ರಯಾಣಿಕರ ಸಂಖ್ಯೆಯಲ್ಲಿನ ದಿಢೀರ್ ಏರಿಕೆಯನ್ನು ನಿಭಾಯಿಸಲು, ಜೂನ್‌ನಲ್ಲಿ ಶಕ್ತಿ ಯೋಜನೆ ಜಾರಿಯಾದಾಗಿನಿಂದ ಬಸ್ ನಿಗಮಗಳು 3,147 ಹೆಚ್ಚುವರಿ ಟ್ರಿಪ್‌ಗಳನ್ನು ನಿರ್ವಹಿಸಿವೆ. KSRTC 1,500, NWKRTC 986, KSRTC 423 ಮತ್ತು BMTC 238 ಹೆಚ್ಚುವರಿ ಟ್ರಿಪ್‌ಗಳನ್ನು ನಿರ್ವಹಿಸುವ ಮೂಲಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments