ರಾಜ್ಯ

ವೀಸಾ ಅವಧಿ ಮುಗಿದರೂ 754 ವಿದೇಶಿಗರು ರಾಜ್ಯದಲ್ಲಿ ಅಕ್ರಮ ವಾಸ: ಡಾ. ಜಿ.ಪರಮೇಶ್ವರ್

Nagaraja AB

ಬೆಂಗಳೂರು: ವೀಸಾ ಅವಧಿ ಮುಗಿದರೂ ರಾಜ್ಯದಲ್ಲಿ 754 ವಿದೇಶಿಗರು ಅಕ್ರಮವಾಗಿ ನೆಲೆಸಿದ್ದಾರೆ ಎಂದು ಗೃಹ ಸಚಿವ ಜಿ ಪರಮೇಶ್ವರ ಗುರುವಾರ ವಿಧಾನಪರಿಷತ್ತಿನಲ್ಲಿ ಬಹಿರಂಗಪಡಿಸಿದರು.

ಒಟ್ಟಾರೆಯಾಗಿ ರಾಜ್ಯದಲ್ಲಿ 8,862 ವಿದೇಶಿಗರು ವಾಸಿಸುತ್ತಿದ್ದು, ಅಕ್ರಮವಾಗಿ ನೆಲೆಸಿರುವ 754 ವಿದೇಶಿಗರ ಪೈಕಿ 718 ಮಂದಿ ಬೆಂಗಳೂರಿನಲ್ಲಿದ್ದು, ಅವರನ್ನು ಪತ್ತೆ ಹಚ್ಚುವ ಪ್ರಯತ್ನ ನಡೆಯುತ್ತಿದೆ ಎಂದರು. 

ವಿದೇಶಿಯರ ನೋಂದಣಿ ಕಚೇರಿಯಿಂದ (ಎಫ್‌ಆರ್‌ಒ) ಸರ್ಕಾರ ವಿದೇಶಿಯರ ಬಗ್ಗೆ ವಿವರಗಳನ್ನು ಪಡೆದುಕೊಂಡಿದೆ ಮತ್ತು ಅವರನ್ನು ಪತ್ತೆ ಮಾಡಲು ಪೊಲೀಸ್ ಠಾಣೆಗಳಲ್ಲಿ ತಂಡಗಳನ್ನು ರಚಿಸಲಾಗಿದೆ. ಅವರು ಪತ್ತೆಯಾದ ನಂತರ,ಗಡಿಪಾರು ಮಾಡುವ ಮೊದಲು ವಿದೇಶಿಯರ ಬಂಧನ ಕೇಂದ್ರದಲ್ಲಿ ಇರಿಸಲಾಗುವುದು ಎಂದು ಅವರು ಹೇಳಿದರು.

ಪ್ರಶ್ನೋತ್ತರ ವೇಳೆಗೆ ವಿಧಾನಪರಿಷತ್ ಸದಸ್ಯ ಎಚ್.ಎಸ್. ಗೋಪಿನಾಥ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು,  ಮಾದಕ ದ್ರವ್ಯ ಸಾಗಾಟ ಸೇರಿದಂತೆ ವಿವಿಧ ಅಪರಾಧಗಳಿಗೆ ಸಂಬಂಧಿಸಿದಂತೆ ವಿದೇಶಿಗರ ವಿರುದ್ಧ 501 ಪ್ರಕರಣಗಳು ದಾಖಲಾಗಿವೆ ಎಂದು ತಿಳಿಸಿದರು.

ಬೆಂಗಳೂರು ನಗರದಲ್ಲಿ 451 ಪ್ರಕರಣಗಳು ದಾಖಲಾಗಿವೆ. 4,890 ವಿದ್ಯಾರ್ಥಿಗಳು ವಿದ್ಯಾರ್ಥಿ ವೀಸಾದಲ್ಲಿ ರಾಜ್ಯದಲ್ಲಿ ಉಳಿದುಕೊಂಡಿದ್ದಾರೆ ಮತ್ತು ಅಧಿಕಾರಿಗಳು ಅವರ ಚಟುವಟಿಕೆಗಳ ಬಗ್ಗೆ ನಿಯಮಿತವಾಗಿ ಮಾಹಿತಿಯನ್ನು ಸಂಗ್ರಹಿಸುತ್ತಾರೆ ಎಂದು ಗೃಹ ಸಚಿವರು ಕೌನ್ಸಿಲ್‌ಗೆ ತಿಳಿಸಿದರು.

SCROLL FOR NEXT