ತಿರುಪತಿಯಲ್ಲಿ ಇಸ್ರೋ ಸಿಬ್ಬಂದಿಗಳು. 
ರಾಜ್ಯ

ಚಂದ್ರಯಾನ-3 ಉಡಾವಣೆಗೆ ಇಸ್ರೋ ಸಜ್ಜು: ಪ್ರತಿಕೃತಿ ಜೊತೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ವಿಜ್ಞಾನಿಗಳ ತಂಡ!

ಇಸ್ರೋದ ಮಹತ್ವಾಕಾಂಕ್ಷಿ ಯೋಜನೆಯಾದ ಚಂದ್ರಯಾನವು ತನ್ನ ಮೂರನೇ ದಂಡಯಾತ್ರೆಯಲ್ಲಿ ಚಂದ್ರನ ಕಡೆಗೆ ಹಾರಲು ಸಿದ್ಧವಾಗಿದ್ದು, ಈ ಮಧ್ಯೆ ಚಂದ್ರಯಾನ-3 ಉಪಗ್ರಹ ನೌಕೆಯ ಪ್ರತಿಕೃತಿ ಜೊತೆ ಇಸ್ರೋ ವಿಜ್ಞಾನಿಗಳು ಹಾಗೂ ಸಿಬ್ಬಂದಿಗಳ ತಂಡ ತಿರುಪತಿ ತಿಮ್ಮಪ್ಪನ ಸನ್ನಿಧಾನಕ್ಕೆ ಭೇಟಿ ನೀಡಿದ್ದು, ವಿಶೇಷ ಪೂಜೆ ಸಲ್ಲಿಸಿದೆ.

ತಿರುಪತಿ: ಇಸ್ರೋದ ಮಹತ್ವಾಕಾಂಕ್ಷಿ ಯೋಜನೆಯಾದ ಚಂದ್ರಯಾನವು ತನ್ನ ಮೂರನೇ ದಂಡಯಾತ್ರೆಯಲ್ಲಿ ಚಂದ್ರನ ಕಡೆಗೆ ಹಾರಲು ಸಿದ್ಧವಾಗಿದ್ದು, ಈ ಮಧ್ಯೆ ಚಂದ್ರಯಾನ-3 ಉಪಗ್ರಹ ನೌಕೆಯ ಪ್ರತಿಕೃತಿ ಜೊತೆ ಇಸ್ರೋ ವಿಜ್ಞಾನಿಗಳು ಹಾಗೂ ಸಿಬ್ಬಂದಿಗಳ ತಂಡ ತಿರುಪತಿ ತಿಮ್ಮಪ್ಪನ ಸನ್ನಿಧಾನಕ್ಕೆ ಭೇಟಿ ನೀಡಿದ್ದು, ವಿಶೇಷ ಪೂಜೆ ಸಲ್ಲಿಸಿದೆ.

ಆಂಧ್ರಪ್ರದೇಶದ ತಿರುಪತಿಯಲ್ಲಿರುವ ಬಾಲಾಜಿಯ ದೇಗುಲಕ್ಕೆ ಆಗಮಿಸಿದ ಇಸ್ರೋ ವಿಜ್ಞಾನಿಗಳ ತಂಡ ಮಿನಿಯೇಚರ್ ಮಾಡೆಲ್ ಜೊತೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದರು.

ಇಸ್ರೋದ ಮಹತ್ವಾಕಾಂಕ್ಷಿ ಯೋಜನೆಯಾದ ಚಂದ್ರಯಾನ-3 ಯೋಜನೆಗೆ 1 ದಿನವಷ್ಟೇ ಬಾಕಿ ಇದ್ದು, 25 ಗಂಟೆ 30 ನಿಮಿಷಗಳ ಕೌಂಟ್‌ಡೌನ್‌ ಇಂದು ಮಧ್ಯಾಹ್ನ 1 ಗಂಟೆಗೆ ಆರಂಭವಾಗಲಿದೆ. ಇದಕ್ಕೆ ಸಂಬಂಧಿಸಿದಂತೆ ಬುಧವಾರ ಸಿದ್ಧತಾ ಪರಿಶೀಲನೆಯನ್ನು ಇಸ್ರೋ ಮುಗಿಸಿದ್ದು, ಉಡ್ಡಯನಕ್ಕೆ ಅನುಮತಿ ನೀಡಿದೆ.

ಶುಕ್ರವಾರ ಮಧ್ಯಾಹ್ನ 2 ಗಂಟೆ 35 ನಿಮಿಷ 17 ಸೆಕೆಂಡ್‌ಗೆ ಚಂದ್ರಯಾನ ನೌಕೆಯನ್ನು ಹೊತ್ತ ರಾಕೆಟ್‌ ಶ್ರೀಹರಿಕೋಟಾದಿಂದ ಉಡಾವಣೆಗೊಳ್ಳಲಿದೆ. ಈ ಉಡಾವಣೆಗೆ ದೇಶೀಯವಾಗಿ ನಿರ್ಮಾಣ ಮಾಡಲಾದ ಲಾಂಚಿಂಗ್‌ ವಾಹನ ಬಳಸಲಾಗುತ್ತಿದ್ದು, ಲ್ಯಾಂಡರ್‌ ಮತ್ತು ರೋವರ್‌ಗಳನ್ನು ಸಹ ದೇಶೀಯವಾಗಿ ತಯಾರಿಸಲಾಗಿದೆ. ಲ್ಯಾಂಡರ್‌ ಆಗಸ್ಟ್‌ನಲ್ಲಿ ಚಂದ್ರನ ಮೇಲೆ ಇಳಿಯಲಿದೆ. ಈ ಉಡಾವಣೆಯನ್ನು ಇಸ್ರೋದ ಅಧಿಕೃತ ಯೂಟ್ಯೂಬ್‌ ಚಾನಲ್‌ನಲ್ಲಿ ವೀಕ್ಷಿಸಬಹುದು ಎಂದು ಇಸ್ರೋ ಹೇಳಿದೆ.

ಇದು ಚಂದ್ರಯಾನ-2 ಯೋಜನೆಯ ಮುಂದುವರೆದ ಭಾಗವಾದ ಕಾರಣ ಈ ಯೋಜನೆಯ ಆರ್ಬಿಟರನ್ನು ಕೈಬಿಡಲಾಗಿದೆ. ಚಂದ್ರನ ದಕ್ಷಿಣ ಧ್ರುವದಲ್ಲಿ ನೌಕೆಯನ್ನು ಇಳಿಸಲು ಇಸ್ರೋ ಸಿದ್ಧತೆ ನಡೆಸಿದ್ದು, ಈ ಬಾರಿ ಸಕಲ ಪೂರ್ವ ತಯಾರಿಯೊಂದಿಗೆ ನೌಕೆಯನ್ನು ಸಿದ್ಧಪಡಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video

'ಜೀವನ ನರಕ, ನನ್ನ ಪಾಲಿನ ದೆವ್ವ ಸತ್ತಿದೆ, ಸತ್ತ ಮಾತ್ರಕ್ಕೆ ಪಾಪ ಕಳೆಯಲ್ಲ': ನಾನಾ ಪಾಟೇಕರ್ ವಿರುದ್ಧ ನಟಿ ತನುಶ್ರೀ ದತ್ತಾ ಮತ್ತೆ ಕಿಡಿ-Video

ಈ ಬಾರಿ ಮೈಸೂರು ದಸರಾ ಮತ್ತಷ್ಟು ಆಕರ್ಷಕ; 146 ಕಿ.ಮೀ. ದೀಪಾಲಂಕಾರ; 3,500 ಡ್ರೋನ್‌ಗಳ ಪ್ರದರ್ಶನ