ಸಿಎಂ ಸಿದ್ದರಾಮಯ್ಯ, ಡಾ. ವೀರೇಂದ್ರ ಹೆಗ್ಗಡೆ 
ರಾಜ್ಯ

'ಶಕ್ತಿ' ಯೋಜನೆಗೆ ಮೆಚ್ಚುಗೆ: ಸಿಎಂ ಸಿದ್ದರಾಮಯ್ಯಗೆ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಪತ್ರ!

ಇತ್ತೀಚಿಗೆ 14 ನೇ ರಾಜ್ಯ ಬಜೆಟ್ ಮಂಡಿಸಿದ ಹಾಗೂ ಅನೇಕ ಜನಪರ ಕಾರ್ಯಕ್ರಮಗಳನ್ನು ಪ್ರಕಟಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಸಭಾ ಸದಸ್ಯರೂ ಆಗಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅಭಿನಂದನೆ ಸಲ್ಲಿಸಿ ಪತ್ರ ಬರೆದಿದ್ದಾರೆ. 

ಬೆಂಗಳೂರು: ಇತ್ತೀಚಿಗೆ 14 ನೇ ರಾಜ್ಯ ಬಜೆಟ್ ಮಂಡಿಸಿದ ಹಾಗೂ ಅನೇಕ ಜನಪರ ಕಾರ್ಯಕ್ರಮಗಳನ್ನು ಪ್ರಕಟಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಸಭಾ ಸದಸ್ಯರೂ ಆಗಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅಭಿನಂದನೆ ಸಲ್ಲಿಸಿ ಪತ್ರ ಬರೆದಿದ್ದಾರೆ. 

ಈ ಪತ್ರವನ್ನು ಟ್ವೀಟರ್ ನಲ್ಲಿ ಹಂಚಿಕೊಂಡಿರುವ ಮುಖ್ಯಮಂತ್ರಿ, 14 ನೇ ಬಜೆಟ್ ನ ಫಲಶೃತಿಯನ್ನು ಶ್ಲಾಘಿಸಿ ಹಾಗೂ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 'ಶಕ್ತಿ ಯೋಜನೆಗೆ ಸಿಕ್ಕಿರುವ ಜನ ಮನ್ನಣೆಗೆ ಮೆಚ್ಚುಗೆ ವ್ಯಕ್ತಪಡಿಸಿ ಡಿ. ವೀರೇಂದ್ರ ಹೆಗ್ಗಡೆ ಅವರು ಪತ್ರ ಬರೆದಿರುವುದಾಗಿ ತಿಳಿಸಿದ್ದಾರೆ. 

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರದಿಂದ ಮೊದಲ ಗ್ಯಾರಂಟಿಯಾಗಿ ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ಜಾರಿಗೊಳಿಸಲಾದ 'ಶಕ್ತಿ ಯೋಜನೆ' ಯಿಂದ ಧರ್ಮಸ್ಥಳಕ್ಕೆ ಬರುವ ಮಹಿಳೆಯ ಪ್ರಮಾಣ ಹೆಚ್ಚಾಗಿದೆ. ಮಂಜುನಾಥ ಸ್ವಾಮಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಸರಿನಲ್ಲಿ ಕಾಣಿಕೆ ಹಾಕುತ್ತಿದ್ದಾರೆ. ಇನ್ನು ಮುಂದಿನ ದಿನಗಳಲ್ಲಿ ಅವಕಾಶ ಇದ್ದಾಗ ಧರ್ಮಸ್ಥಳಕ್ಕೆ ಬಂದು ಮಂಜುನಾಥ ಸ್ವಾಮಿಯ ದರ್ಶನ ಪಡೆದುಕೊಂಡು ಹೋಗಿ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ  ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಆಹ್ವಾನ ನೀಡಿದ್ದಾರೆ.

ಗ್ಯಾರಂಟಿ ಯೋಜನೆಗಳ ಮೂಲಕ ಉಪಯುಕ್ತ ಕಾರ್ಯಕ್ರಮಗಳನ್ನ ನೀಡುತ್ತಿದ್ದೀರ. ಧರ್ಮಸ್ಥಳಕ್ಕೆ ಬರುತ್ತಿರುವ ಮಹಿಳಾ ಭಕ್ತರು ಸಂತೋಷ ವ್ಯಕ್ತಪಡಿಸುತ್ತಿದ್ದಾರೆ. ಅನೇಕ ಮಹಿಳೆಯರು ನಿಮ್ಮ ಹೆಸರಿನಲ್ಲಿ ಶ್ರೀಮಂಜುನಾಥ್ ಸ್ವಾಮಿಗೆ ಸೇವೆ ಮತ್ತು ಕಾಣಿಕೆ ಸಲ್ಲಿಸುತ್ತಿದ್ದಾರೆ. ಬಜೆಟ್ ನಲ್ಲಿ ಜೈನ ಸಮುದಾಯಕ್ಕೆ ವಿಶೇಷ ಅನುದಾನ ನೀಡಿದ್ದಕ್ಕೆ ಧನ್ಯವಾದ ಎಂದು ಪತ್ರದಲ್ಲಿ ಬರೆದಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜೂ.11 ರಿಂದ ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ಶಕ್ತಿ ಯೋಜನೆಯನ್ನು ಜಾರಿಗೊಳಿಸಿದೆ. ಇನ್ನು ಜೂ.11ರಿಂದ ಜುಲೈ 10ರವರೆಗೆ ಅಂದರೆ ಒಂದು ತಿಂಗಳ ಅವಧಿಯಲ್ಲಿ ಬರೋಬ್ಬರಿ 16,75,77,752 ಮಹಿಳಾ ಪ್ರಯಾಣಿಕರು (16.75 ಕೋಟಿ) ಸಂಚಾರ ಮಾಡಿದ್ದಾರೆ. ಈ ಯೋಜನೆಗೆ ಮಹಿಳೆಯರಿಂದ ಅಭೂತಪೂರ್ವ ಬೆಂಬಲವೂ ವ್ಯಕ್ತವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT