ಮಾಸ್ಟರ್ ಆನಂದ್ ಪುತ್ರಿ ವಂಶಿಕಾ 
ರಾಜ್ಯ

ನಟ ಮಾಸ್ಟರ್ ಆನಂದ್ ಪುತ್ರಿ ವಂಶಿಕಾ ಹೆಸರಿನಲ್ಲಿ ವಂಚನೆ, ಎಫ್ಐಆರ್ ದಾಖಲು

ನಟ, ನಿರ್ದೇಶಕ ಮಾಸ್ಟರ್ ಆನಂದ್ ಅವರ ಪುತ್ರಿಯಾದ ಬಾಲನಟಿ ವಂಶಿಕಾ ಹೆಸರಿನಲ್ಲಿ ಜನರನ್ನು ವಂಚಿಸಿರುವ ಆರೋಪದಡಿ ನಿಶಾ ನರಸಪ್ಪ ಎಂಬುವವರ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಬೆಂಗಳೂರು: ನಟ, ನಿರ್ದೇಶಕ ಮಾಸ್ಟರ್ ಆನಂದ್ ಅವರ ಪುತ್ರಿಯಾದ ಬಾಲನಟಿ ವಂಶಿಕಾ ಹೆಸರಿನಲ್ಲಿ ಜನರನ್ನು ವಂಚಿಸಿರುವ ಆರೋಪದಡಿ ನಿಶಾ ನರಸಪ್ಪ ಎಂಬುವವರ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ವಂಚನೆ ಬಗ್ಗೆ ವಂಶಿಕಾ ತಾಯಿ ಯಶಸ್ವಿನಿ ದೂರು ನೀಡಿದ್ದಾರೆ. ನಿಶಾ ನರಸಪ್ಪ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಯಶಸ್ವಿನಿ ಅವರಿಗೆ ಇನ್‌ಸ್ಟಾಗ್ರಾಂ ಮೂಲಕ ಆರೋಪಿ ನಿಶಾ ಎಂಬಾಕೆಯ ಪರಿಚಯವಾಗಿತ್ತು. ಕಾರ್ಯಕ್ರಮವೊಂದಕ್ಕೆ ತಾಯಿ–ಮಗಳನ್ನು ಆರೋಪಿ ಆಹ್ವಾನಿಸಿದ್ದರು. ಇದರಿಂದ ಮತ್ತಷ್ಟು ಹತ್ತಿರವಾಗಿದ್ದರು.

ವಂಶಿಕಾ ಹೆಸರು ಹಾಗೂ ಫೋಟೊಗಳನ್ನು ದುರ್ಬಳಕೆ ಮಾಡಿಕೊಂಡಿದ್ದ ಆರೋಪಿ, ‘ಮಕ್ಕಳಿಗೆ ಟಿ.ವಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಅವಕಾಶ ಕೊಡಿಸುತ್ತೇನೆ’ ಎಂದು ಜಾಹೀರಾತು ನೀಡುತ್ತಿದ್ದರು. ಫೋಟೊಶೂಟ್ ಹೆಸರಿನಲ್ಲಿ ಪೋಷಕರಿಂದ ಹಣ ಪಡೆಯುತ್ತಿದ್ದರು. ನಂತರ, ಯಾವುದೇ ಅವಕಾಶ ಕೊಡಿಸದೇ ಜನರನ್ನು ವಂಚಿಸುತ್ತಿದ್ದರು’ ಎಂದು ಮೂಲಗಳು ತಿಳಿಸಿವೆ.

‘ಆರೋಪಿ ನಿಶಾ ಕೃತ್ಯ ಇತ್ತೀಚೆಗೆ ಯಶಸ್ವಿನಿ ಅವರಿಗೆ ಗೊತ್ತಾಗಿದ್ದು, ತಮ್ಮ ಮಗಳ ಹೆಸರಿನಲ್ಲಿ ವಂಚನೆಯಾಗುತ್ತಿರುವುದರಿಂದ ದೂರು ನೀಡಿದ್ದಾರೆ. ಆರೋಪಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ’ ಎಂದು ಮೂಲಗಳು ಹೇಳಿವೆ.

ಪ್ರತಿದೂರು ನೀಡಿದ ನಿಶಾ

‘ಯಶಸ್ವಿನಿ ಹಾಗೂ ಇತರರ ವಿರುದ್ಧ ಪ್ರತಿ ದೂರು ನೀಡಿರುವ ನಿಶಾ, ‘ನನ್ನ ಮೇಲೆ ಹಲ್ಲೆ ಮಾಡಲಾಗಿದೆ’ ಎಂದು ಆರೋಪಿಸಿದ್ದಾರೆ. ಈ ಸಂಬಂಧ ಎನ್‌ಸಿಆರ್ (ಗಂಭೀರವಲ್ಲದ ಪ್ರಕರಣ) ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ–ಇರಾನ್ ಶಾಂತಿ ಮಾತುಕತೆ ವಿಫಲ: ಷೇರು ಮಾರುಕಟ್ಟೆ ಮೇಲೆ ಪರಿಣಾಮ; ಸೆನ್ಸೆಕ್ಸ್ 1600 ಅಂಕ ಕುಸಿತ, ತೈಲ ಬೆಲೆ ಏರಿಕೆ..!

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

SCROLL FOR NEXT