ಅಜಿತ್ ಹನುಮಕ್ಕನವರ್ 
ರಾಜ್ಯ

ತುಮಕೂರು ವಿವಿಗೆ ಅಜಿತ್ ಹನುಮಕ್ಕನವರ್ ಆಹ್ವಾನ: ಪ್ರಗತಿಪರ ಸಂಘಟನೆಗಳಿಂದ ಜುಲೈ 20ರಂದು ಪ್ರತಿಭಟನೆ

ವಿಶ್ವವಿದ್ಯಾನಿಲಯದಲ್ಲಿ ಹಮ್ಮಿಕೊಂಡಿರುವ ಮಾಧ್ಯಮ ಹಬ್ಬಕ್ಕೆ ಪತ್ರಕರ್ತ ಅಜಿತ್ ಹನುಮಕ್ಕನವರ್ ಅವರಿಗೆ ಆಹ್ನಾಮ ನೀಡಿರುವುದಕ್ಕೆ ಜಿಲ್ಲೆಯಲ್ಲಿ ಪ್ರಗತಿಪರ ಸಂಘಟನೆಗಳು ಖಂಡಿಸಿವೆ,

ತುಮಕೂರು: ವಿಶ್ವವಿದ್ಯಾನಿಲಯದಲ್ಲಿ ಹಮ್ಮಿಕೊಂಡಿರುವ ಮಾಧ್ಯಮ ಹಬ್ಬಕ್ಕೆ ಪತ್ರಕರ್ತ ಅಜಿತ್ ಹನುಮಕ್ಕನವರ್ ಅವರಿಗೆ ಆಹ್ವಾನ ನೀಡಿರುವುದಕ್ಕೆ ಜಿಲ್ಲೆಯಲ್ಲಿ ಪ್ರಗತಿಪರ ಸಂಘಟನೆಗಳು, ಪ್ರಗತಿಪರ ವಿದ್ಯಾರ್ಥಿ-ಯುವಜನರ ವೇದಿಕೆ ಹಾಗೂ ವಿವಿ ಹಳೆಯ ವಿದ್ಯಾರ್ಥಿ ವೇದಿಕೆಗಳಿಂದ ವ್ಯಾಪಕ ಖಂಡನೆ ಮತ್ತು ವಿರೋಧ ವ್ಯಕ್ತವಾಗಿದೆ.

ತುಮಕೂರು ವಿಶ್ವವಿದ್ಯಾಲಯ ಜಾತ್ಯತೀತ ಪರಂಪರೆಯನ್ನು ಹೊಂದಿದೆ. ಸಾಮರಸ್ಯತೆಗೆ ಹೆಸರಾಗಿದೆ. ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವ ಕೆಲಸ ಮಾಡುತ್ತಿದೆ. ಇಂತಹ ಮಹತ್ವದ ಪರಂಪರೆಯನ್ನು ಸಾರುತ್ತಿರುವ ವಿಶ್ವವಿದ್ಯಾಲಯದಲ್ಲಿ ಮತೀಯ ಭಾವನೆಗಳನ್ನು ಕೆರಳಿಸುವ, ವಿಛಿದ್ರಕಾರಿ ಸಂಗತಿಗಳನ್ನು ಪ್ರತಿಪಾದಿಸುವ ಪತ್ರಕರ್ತ ಅಜಿತ್ ಹನುಮಕ್ಕನವರ್ ಅವರನ್ನು ಯಾವುದೇ ಕಾರಣಕ್ಕೂ ವಿವಿಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಕರೆಸುವುದು ಬೇಡ. ಒಂದೊಮ್ಮೆ ಅವರನ್ನು ಕರೆಸಿದರೆ ಹೋರಾಟ ನಡೆಸಬೇಕಾಗುತ್ತದೆ ಎಂದು ವಿವಿಧ ಸಂಘಟಗಳನ್ನು ಎಚ್ಚರಿಕೆ ನೀಡಿವೆ.

ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ವೆಂಕಟೇಶ್ವರಲು ಅವರನ್ನು ಭೇಟಿ ಮಾಡಿದ ಪ್ರಗತಿಪರ ವಿದ್ಯಾರ್ಥಿ-ಯುವಜನರ ಸಂಘಟನೆಗಳ ಒಕ್ಕೂಟ, ಹಳೆಯ ವಿದ್ಯಾರ್ಥಿಗಳ ವೇದಿಕೆ ಮತ್ತು ಜಿಲ್ಲಾ ಸಮಾನ ಮನಸ್ಕರ ವೇದಿಕೆಯ ಪದಾಧಿಕಾರಿಗಳು ಸಮಾಜದಲ್ಲಿ ದ್ವೇಷ ಹರಡುವ ಪತ್ರಕರ್ತ ಅಜಿತ್ ಹನುಮಕ್ಕನವರ್ ಅವರನ್ನು ಕರೆಸುವುದನ್ನು ನಿಲ್ಲಿಸಬೇಕು ಸಂಘಟನೆಗಳು ಒತ್ತಾಯಿಸಿವೆ.

ತುಮಕೂರು ವಿವಿಯಲ್ಲಿ ರಾಜ್ಯಮಟ್ಟದ ಮಾಧ್ಯಮ ಹಬ್ಬ ನಡೆಯುತ್ತಿದೆ.ಇಂತಹ ಹಬ್ಬಕ್ಕೆ ಅಜಿತ್ ಹನುಮಕ್ಕನವರ್ ಅವರಿಂದ ಕೋಮುವಾದಿ ಭಾಷಣ ಮಾಡಿಸಲು ಹೊರಟಿರುವ ವಿವಿಯ ಕ್ರಮ ಪ್ರಶ್ನಾರ್ಹವಾಗಿದೆ. ಅಲ್ಲದೆ ವಿವಿಯ ಪರಂಪರೆಯನ್ನು ನಾಶ ಮಾಡಲು ಹುನ್ನಾರ ನಡೆಸಲಾಗುತ್ತಿದೆ. ಶಾಂತಿ-ಸುವ್ಯವಸ್ಥೆಯನ್ನು ಹದಗೆಡಿಸುವ ಕೆಲಸ ಮಾಡಲಾಗುತ್ತಿದೆ ಎಂದು ಸಂಘಟನೆಗಳ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel