ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಕುಡಿದ ಅಮಲಿನಲ್ಲಿ ಸುತ್ತಿಗೆಯಿಂದ ಹೊಡೆದು ಪತ್ನಿ ಕೊಲೆ!

ಕೌಟುಂಬಿಕ ಕಲಹ ಹಿನ್ನೆಲೆ ಮದ್ಯದ ಅಮಲಿನಲ್ಲಿ ಪತ್ನಿಯ ತಲೆಗೆ ಸುತ್ತಿಗೆಯಿಂದ ಹೊಡೆದು ಕೊಂದಿರುವ ಘಟನೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು:ಕೌಟುಂಬಿಕ ಕಲಹ ಹಿನ್ನೆಲೆ ಮದ್ಯದ ಅಮಲಿನಲ್ಲಿ ಪತ್ನಿಯ ತಲೆಗೆ ಸುತ್ತಿಗೆಯಿಂದ ಹೊಡೆದು ಕೊಂದಿರುವ ಘಟನೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ತಮಿಳುನಾಡು ಮೂಲದ ನಾಗರತ್ನಂ ಮತ್ತು ಚಿಕ್ಕತಾಯಮ್ಮ ದಂಪತಿ ಕಾಮಾಕ್ಷಿಪಾಳ್ಯ ಕರೆ ಕಲ್ಲು ಏರಿಯಾದಲ್ಲಿ ವಾಸ ಮಾಡುತ್ತಿದ್ದರು. ಇವರಿಗೆ ಮದುವೆಯಾಗಿ 29 ವರ್ಷಗಳಾಗಿವೆ.‌ . ಆರೋಪಿ ನಾಗರತ್ನಂಗೆ ಕುಡಿತದ ಚಟ ಹೆಚ್ಚಾಗಿತ್ತು. ನಿತ್ಯ ಕುಡಿದು ಗಲಾಟೆ ಮಾಡುತ್ತಿದ್ದ. ನಾಗರತ್ನಂ ಶಾಲೆಯೊಂದರಲ್ಲಿ ಸೆಕ್ಯುರಿಟಿ ಗಾರ್ಡ್​ಆಗಿ ಕೆಲಸ ಮಾಡುತ್ತಿದ್ದ.

ಪತ್ನಿಯೂ ಅದೇ ಶಾಲೆಯಲ್ಲಿ ಕೆಲಸ ಮಾಡಿ ಬಂದ ಹಣದಲ್ಲಿ ಮನೆ ನಡೆಸುತ್ತಿದ್ದರು.‌ ನಿನ್ನೆ ರಾತ್ರಿ ಕುಡಿದು ಬಂದ ಪತಿ, ಪತ್ನಿಯೊಂದಿಗೆ ಜಗಳಕ್ಕೆ ನಿಂತಿದ್ದ. ಜಗಳ ವಿಕೋಪಕ್ಕೆ ತಿರುಗಿ ಮನೆಯಲ್ಲಿದ್ದ ಸುತ್ತಿಗೆಯಿಂದ ಆಕೆಯ ತಲೆ‌ ಮೇಲೆ ಹಲ್ಲೆ‌ ಮಾಡಿದ್ದಾನೆ.  ರಾತ್ರಿ 8 ಗಂಟೆ ಸುಮಾರಿಗೆ ಮನೆಗೆ ಮರಳಿದ ಆರೋಪಿ ಪತ್ನಿಯೊಂದಿಗೆ ಜಗಳ ಆರಂಭಿಸಿದ್ದಾನೆ. ಆತ ಮದ್ಯದ ಅಮಲಿನಲ್ಲಿದ್ದ ಎನ್ನಲಾಗಿದೆ. ಈ ವೇಳೆ ಸಂಬಂಧಿಕರೊಬ್ಬರು ಪುತ್ರ ರಾಜುಗೆ ಕರೆ ಮಾಡಿ ತಿಳಿಸಿದ್ದಾರೆ, ರಾಜು ಮನೆಗೆ ಮರಳು ವೇಳೆಗೆ ಆಕೆಯ ತಾಯಿ ಸಾವನ್ನಪ್ಪಿದ್ದರು.

ನಂತರ ಪತಿ ಪರಾರಿಯಾಗಿದ್ದ. ಮಾಹಿತಿ ತಿಳಿದು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!