ರಾಜ್ಯ

ಕರಾವಳಿ ಜಿಲ್ಲೆಗಳಲ್ಲಿ ಐದು ದಿನ ಭಾರಿ ಮಳೆಯಾಗುವ ಸಾಧ್ಯತೆ; 'ಯೆಲ್ಲೋ' ಅಲರ್ಟ್ ಘೋಷಣೆ

Nagaraja AB

ಮಂಗಳೂರು: ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಇಂದಿನಿಂದ ಐದು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶನಿವಾರದವರೆಗೆ ಕುಂದಾಪುರದಲ್ಲಿ 7 ಸೆಂ.ಮೀ, ಮಂಗಳೂರು ವಿಮಾನ ನಿಲ್ದಾಣ, ಪಣಂಬೂರು, ಕೋಟ ಮತ್ತು ಉಪ್ಪಿನಂಗಡಿಯಲ್ಲಿ 4 ಸೆಂ.ಮೀ ಮಳೆಯಾಗಿದ್ದರೆ, ಮಂಗಳೂರು, ಮಾಣಿ ಮತ್ತು ಉಡುಪಿಯಲ್ಲಿ  3 ಸೆಂ.ಮೀ ಮಳೆಯಾಗಿದೆ. ಕೊಣಾಜೆ, ಹರೇಕಳ ಭಾಗದಲ್ಲಿ ಮಣ್ಣು ಕುಸಿದು ಮನೆಗಳಿಗೆ ಹಾನಿಯಾದ ಘಟನೆಗಳು ವರದಿಯಾಗಿವೆ.

ದಕ್ಷಿಣ ಕನ್ನಡದ ವಿವಿಧ ಭಾಗಗಳಲ್ಲಿ ಹಲವು ತಗ್ಗು ಪ್ರದೇಶಗಳು ಜಲಾವೃತವಾಗಿವೆ. ಕಳೆದ ಎರಡು ದಿನಗಳಿಂದ ದ.ಕ ಮತ್ತು ಉಡುಪಿ ಜಿಲ್ಲೆಗಳ ಹಲವು ಭಾಗಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಯೆಲ್ಲೋ ಅಲರ್ಟ್ ಎಂದರೆ  6 ರಿಂದ 11 ಸೆಂ.ಮೀ ನಡುವೆ ಭಾರಿ ಮಳೆಯಾಗುವ ಮುನ್ನೆಚ್ಚರಿಕೆಯಾಗಿದೆ. 

SCROLL FOR NEXT