ಸಭೆಯಲ್ಲಿ ಸಚಿವ ಈಶ್ವರ್ ಖಂಡ್ರೆ 
ರಾಜ್ಯ

ಅರಣ್ಯ ಭೂಮಿ ಹಕ್ಕು ಪತ್ರ ಸಮಸ್ಯೆ: ಪರಿಹಾರಕ್ಕೆ ಶೀಘ್ರವೇ ಸಭೆ- ಸಚಿವ ಈಶ್ವರ್ ಖಂಡ್ರೆ

ಅರಣ್ಯ ಮತ್ತು ಕಂದಾಯ ಭೂಮಿಯ ಜಂಟಿ ಸಮೀಕ್ಷೆ ನಡೆಸುವ ಮೂಲಕ ಕಾನೂನು ವ್ಯಾಪ್ತಿಯಲ್ಲಿ ಅರಣ್ಯವಾಸಿಗಳ ಹಕ್ಕುಪತ್ರದ ಸಮಸ್ಯೆಯನ್ನು ಪರಿಹರಿಸಲಾಗುವುದು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿದ್ದಾರೆ.

ಮೈಸೂರು: ಅರಣ್ಯ ಮತ್ತು ಕಂದಾಯ ಭೂಮಿಯ ಜಂಟಿ ಸಮೀಕ್ಷೆ ನಡೆಸುವ ಮೂಲಕ ಕಾನೂನು ವ್ಯಾಪ್ತಿಯಲ್ಲಿ ಅರಣ್ಯವಾಸಿಗಳ  ಹಕ್ಕುಪತ್ರದ ಸಮಸ್ಯೆಯನ್ನು ಪರಿಹರಿಸಲಾಗುವುದು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿದ್ದಾರೆ.

ಡಿ.ಬಿ.ಕುಪ್ಪೆ ವ್ಯಾಪ್ತಿಯಲ್ಲಿ 12 ಅರಣ್ಯ ವಾಸಿ ಕುಟುಂಬಗಳ ಎಂಬ ಬಗ್ಗೆ ಇರುವ ಗೊಂದಲ ಕುರಿತು ಇಂದು  ಪರಿಶೀಲನೆ ನಡೆಸಿದ ಸಚಿವರು, ಸೂಕ್ತ ಪರಿಹಾರ ಒದಗಿಸಲು ಶೀಘ್ರವೆ ಬೆಂಗಳೂರಿನಲ್ಲಿ ರಾಜ್ಯಮಟ್ಟದ ಸಭೆ ನಡೆಸಲಾಗುವುದು, ಇಂತಹ ಸಮಸ್ಯೆ ಇರುವ ರಾಜ್ಯದ ಎಲ್ಲಾ ಹಾಡಿ, ಮುಳುಗಡೆ ಪ್ರದೇಶದ ಸಂತ್ರಸ್ತರ ಜಮೀನುಗಳ  ಕುರಿತಂತೆ ಪರ್ಯಲೋಚಿಸುವುದಾಗಿ ತಿಳಿಸಿದರು.

 ಅನಿಲ್ ಚಿಕ್ಕಮಾದು  ತಮ್ಮ ಕ್ಷೇತ್ರದಲ್ಲಿ ಆನೆಗಳ ಹಾವಳಿ ಇದ್ದು ಕನಿಷ್ಠ 72 ಕಿಲೋಮೀಟರ್ ರೈಲ್ವೆ ಬ್ಯಾರಿಕೆಡ್ ನಿರ್ಮಿಸುವಂತೆ ಮಾಡಿದ ಮನವಿಗೆ ಸ್ಪಂದಿಸಿದ ಸಚಿವರು, ಒಂದೇ ವರ್ಷದಲ್ಲಿ 72 ಕಿಲೋಮೀಟರ್ ಒಂದೇ ಭಾಗದಲ್ಲಿ  ನಿರ್ಮಿಸಲು ಸಾಧ್ಯವಿಲ್ಲ, ಆದರೆ ಆನೆಗಳ ಹಾವಳಿ ಹೆಚ್ಚಿರುವ ಪ್ರದೇಶಗಳಲ್ಲಿ ಆದ್ಯತೆಯ ಮೇರೆಗೆ ರೈಲ್ವೆ ಬ್ಯಾರಿಕೇಡ್ ನಿರ್ಮಿಸಲು ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸುವುದಾಗಿ ತಿಳಿಸಿದರು.

ಕಬಿನಿ ವ್ಯಾಪ್ತಿಯ ಅಂತರಸಂತೆ ಅರಣ್ಯ ಪ್ರದೇಶದಲ್ಲಿ ಸೌರಬೇಲಿ ಕಾರ್ಯನಿರ್ವಹಣೆ ಹಾಗೂ ಅರಣ್ಯದಲ್ಲೇ ವಾಸಿಸುವ ಆದಿವಾಸಿಗಳ ಸಮಸ್ಯೆಯನ್ನು ಆಲಿಸಿದ್ದಾಗಿ ತಿಳಿಸಿದರು. ಅರಣ್ಯ ಹಕ್ಕು ಕಾಯ್ದೆ ಅಡಿಯಲ್ಲಿ ಅವರಿಗೆ ಸಲ್ಲಬೇಕಾದ ಸೌಲಭ್ಯಗಳನ್ನು ನಿಯಮಾನುಸಾರ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದರು.

ಇದೇ ಸಂದರ್ಭದಲ್ಲಿ ಅರಣ್ಯ ಭೂಮಿಗೆ ಪರ್ಯಾಯವಾಗಿ ಹಕ್ಕುಪತ್ರ ವಿತರಣೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಬಂದ ಅಹವಾಲುಗಳನ್ನು  ಪರಿಶೀಲಿಸಿದ ಸಚಿವರು, 3 ಎಕರೆಗಿಂತ ಕಡಿಮೆ ಪ್ರದೇಶದಲ್ಲಿ 1980ಕ್ಕಿಂತ ಮೊದಲು ಉಳಿಮೆ ಮಾಡುತ್ತಿರುವ ಮತ್ತು   ಮನೆ ಕಟ್ಟಿಕೊಂಡು ಮೂರು ತಲೆಮಾರಿನಿಂದ ವಾಸಿಸುತ್ತಿರುಔರಿಗೆ ಮಾತ್ರ ಪರಿಹಾರ ಒದಗಿಸುವ ಸಂಬಂಧ ನಿಗದಿತ ಅವಧಿಯಲ್ಲಿ ಅರ್ಜಿ ಸಲ್ಲಿಸಿದ್ದರೆ ಪರಿಶೀಲಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಮಾಜಿ ಶಾಸಕ ಸಂದೇಶ್ ನಾಗರಾಜ್ ಈ ಸಭೆಯಲ್ಲಿ ಪಾಲ್ಗೊಂಡು, ಅರಣ್ಯ ಹಕ್ಕು ಕಾಯ್ದೆಯ ಕುರಿತಂತೆ ಇರುವ ಸಮಸ್ಯೆಗಳ ಬಗ್ಗೆ ವಿವರಿಸಿದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಕೋಗಿಲು ಪ್ರಕರಣ' ಈಗ ಅಂತಾರಾಷ್ಟ್ರೀಯ ವಿಚಾರ: ಪಾಕ್ ಕ್ಯಾತೆ; ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ಕಿಡಿ; ಸಚಿವ ಜಮೀರ್ ಹೇಳಿದ್ದು ಏನು?

'ಸ್ವಂತ ತಮ್ಮನ ಮಗನಿಗೆ ಮಗಳನ್ನು ಕೊಟ್ಟು ಮದುವೆ' ಮಾಡಿದ ಪಾಕ್ ಸೇನಾ ಮುಖ್ಯಸ್ಥ! ಇದರಲ್ಲಿಯೂ ಒಳ ಸಂಚು?

ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ; G RAM G ಕಾಯ್ದೆ ಅನುಷ್ಠಾನಗೊಳಿಸದಂತೆ ಆಗ್ರಹ

ಹೊಸ ವರ್ಷದಲ್ಲಿ ಶುಭಸುದ್ದಿ? ನಾಯಕತ್ವ ಬದಲಾವಣೆ ಬಗ್ಗೆ ಡಿಕೆಶಿ ಹೇಳಿದ್ದೇನು?

'ಬಾಂಗ್ಲಾದೇಶ ಮೂಲದ ಸಂಘಟನೆಯೊಂದಿಗೆ' ನಂಟು: ಅಸ್ಸಾಂ, ತ್ರಿಪುರಾದಲ್ಲಿ 11 ಜನರ ಬಂಧನ

SCROLL FOR NEXT