ರಾಜ್ಯ

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ವೇಯಲ್ಲಿ ಅಪಘಾತ ಹೆಚ್ಚಳ ನಿಯಂತ್ರಣಕ್ಕೆ ವಿಶೇಷ ಸಮಿತಿ ರಚಿಸಿದ NHAI

Vishwanath S

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್​ ವೇಯಲ್ಲಿ ಅಪಘಾತಗಳು ಹೆಚ್ಚಾಗಿರುವುದರ ಬಗ್ಗೆ ಪರಿಶೀಲನೆ ನಡೆಸಲು ವಿಶೇಷ ಸಮಿತಿಯೊಂದನ್ನು ರಚನೆ ಮಾಡಿದೆ. 

ಮೂವರು ತಜ್ಞರನ್ನೊಳಗೊಂಡ ಸಮಿತಿಯಲ್ಲಿ ಎನ್​ಹೆಚ್​​​ಎಐ ಉಪ ವ್ಯವಸ್ಥಾಪಕ ಪ್ರವೀಣ್‌ ಕುಮಾ‌ರ್, ರಸ್ತೆ ಸುರಕ್ಷತೆ ಸಲಹೆಗಾರ ಸುದರ್ಶನ್ ಕೆ. ಪೊಪ್ತಿ, ಜೈವರ್ಧನ್‌ ಸಿಂಗ್‌ ಇದ್ದು ಈ ಸಮಿತಿಯು ಜುಲೈ 20ರೊಳಗೆ ಎಕ್ಸ್‌ಪ್ರೆಸ್‌ ಹೈವೇಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ. 

ಎಕ್ಸ್ ಪ್ರೆಸ್ ವೇ ಸುರಕ್ಷತೆ ಬಗ್ಗೆ ಪರಿಶೀಲನೆ ನಡೆಸಿ 10 ದಿನದೊಳಗೆ ವರದಿ ನೀಡುವಂತೆ ಸಮಿತಿಗೆ ಪ್ರಾಧಿಕಾರದ ರಸ್ತೆ ಸುರಕ್ಷತೆ ವಿಭಾಗದ ಮುಖ್ಯ ಪ್ರಧಾನ ವ್ಯವಸ್ಥಾಪಕ ಸುನೀಲ್ ಜಿಂದಾಲ್ ಸೂಚನೆ ನೀಡಿದ್ದಾರೆ.

ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ವೇ ಉದ್ಘಾಟನೆಗೊಂಡು ಒಂಬತ್ತು ತಿಂಗಳಿನಲ್ಲಿ 550ಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿವೆ. ಈ ಅಪಘಾತಗಳಲ್ಲಿ ಮೃತಪಟ್ಟವರ ಬಗ್ಗೆ ಮಾಹಿತಿ ನೀಡುವಂತೆಯೂ ಪ್ರಾಧಿಕಾರ ಆದೇಶಿಸಿದೆ.

SCROLL FOR NEXT