ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತಿತರರು 
ರಾಜ್ಯ

ಮೊದಲ ಅಧಿವೇಶನದಲ್ಲೇ ಪಿಟಿಸಿಎಲ್ ಕಾಯ್ದೆ ತಿದ್ದುಪಡಿಗೆ ಸಂಕಲ್ಪ: ಮುಖ್ಯಮಂತ್ರಿ ಸಿದ್ದರಾಮಯ್ಯ

ದಲಿತರ ಜಮೀನು ಹಕ್ಕು ಪರಭಾರೆ ನಿಷೇಧವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ವಿಷಯದಲ್ಲಿ ಯಾವುದೇ ಬಹಿರಂಗ ಒತ್ತಡಕ್ಕೆ ಮಣಿಯುವುದಿಲ್ಲ. ಈ ವಿಚಾರದಲ್ಲಿ ನಮ್ಮ ಕಾಳಜಿಗಳ ಜತೆ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರು: ದಲಿತರ ಜಮೀನು ಹಕ್ಕು ಪರಭಾರೆ ನಿಷೇಧವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ವಿಷಯದಲ್ಲಿ ಯಾವುದೇ ಬಹಿರಂಗ ಒತ್ತಡಕ್ಕೆ ಮಣಿಯುವುದಿಲ್ಲ. ಈ ವಿಚಾರದಲ್ಲಿ ನಮ್ಮ ಕಾಳಜಿಗಳ ಜತೆ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಪಿ. ಟಿ.ಸಿ.ಎಲ್. ಕಾಯ್ದೆ ತಿದ್ದುಪಡಿಗೆ ಸಂಬಂಧಿಸಿದಂತೆ ವಿವಿಧ ಸಂಘಟನೆಗಳ ಪ್ರತಿನಿಧಿಗಳು, ಸಚಿವರು, ಹಿರಿಯ ಅಧಿಕಾರಿಗಳು ಹಾಗೂ ಕಾನೂನು ತಜ್ಞರೊಂದಿಗೆ ಸಭೆ ನಡೆಸಿ ಚರ್ಚಿಸಿದ ಮುಖ್ಯಮಂತ್ರಿ, ದಲಿತರ ಜಮೀನು ಹಕ್ಕು ಕಾಪಾಡುವ ನಿಟ್ಟಿನಲ್ಲಿ ಪಿ ಟಿ ಸಿ ಎಲ್ ಕಾಯ್ದೆಗೆ ತಿದ್ದುಪಡಿ ಮಾಡುವ ಕುರಿತ ಸರ್ಕಾರದ ನಿಲುವನ್ನು ಆಯವ್ಯಯದಲ್ಲಿಯೂ ಸ್ಪಷ್ಟ ಪಡಿಸಲಾಗಿದೆ. ಪ್ರಸ್ತುತ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದಲ್ಲಿಯೇ ಕಾಯ್ದೆ ತಿದ್ದುಪಡಿ ಮಾಡುವ ಉದ್ದೇಶದಿಂದ ಸಮುದಾಯದ ಮುಖಂಡರ ಅಭಿಪ್ರಾಯ ಪಡೆಯಲು ಈ ಸಭೆ ಕರೆಯಲಾಗಿದೆ ಎಂದು ವಿವರಿಸಿದರು .  

ಮತ್ತೆ ಮತ್ತೆ ಯಾವುದೇ ವಿವಾದ ಇರಬಾರದು, ಪಿಟಿಸಿಎಲ್ ಕಾಯ್ದೆಯ ಉದ್ದೇಶ ಪರಿಣಾಮಕಾರಿಯಾಗಿ ಈಡೇರಬೇಕು, ಭೂಮಿ ಕಳೆದುಕೊಂಡವರಿಗೆ ನ್ಯಾಯಾಲಯದಲ್ಲಿ ಹಿನ್ನಡೆ ಆಗಬಾರದು ಎನ್ನುವ ಉದ್ದೇಶದಿಂದ ಈ ಬಗ್ಗೆ ದಲಿತ ಮುಖಂಡರ ಮತ್ತು ನ್ಯಾಯವಾದಿಗಳ ಅಭಿಪ್ರಾಯ ಕೇಳಿದ್ದೇನೆ. ಕಾನೂನು ತಜ್ಞರ ಅಭಿಪ್ರಾಯವನ್ನೂ ಪಡೆದುಕೊಳ್ಳುತ್ತೇವೆ.  ನಾವು ಮೊದಲೇ ಕೊಟ್ಟಿದ್ದ ಭರವಸೆಯಂತೆ ಈ ಸರ್ಕಾರದ ಮೊದಲನೆ ಅಧಿವೇಶನದಲ್ಲೇ ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದ್ದೇವೆ ಎಂದು ತಿಳಿಸಿದರು. 

ಕಂದಾಯ ಸಚಿವರಾದ ಕೃಷ್ಣಬೈರೇಗೌಡರು ಸೇರಿದಂತೆ ಸಚಿವರಾದ ಹೆಚ್.ಸಿ.ಮಹದೇವಪ್ಪ, ಹೆಚ್.ಕೆ. ಪಾಟೀಲ್, ಡಾ. ಜಿ. ಪರಮೇಶ್ವರ, ಕೆ. ಹೆಚ್. ಮುನಿಯಪ್ಪ, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ಶಿವರಾಜ ತಂಗಡಗಿ, ನಾಗೇಂದ್ರ, ಕೆ.ಎನ್. ರಾಜಣ್ಣ, ಆರ್.ಬಿ.ತಿಮ್ಮಾಪುರ ಹಾಗೂ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಪಿ. ಮಣಿವಣ್ಣನ್, ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಹಿರಿಯ ಐಪಿಎಸ್ ಅಧಿಕಾರಿ ಅರುಣ್ ಚಕ್ರವರ್ತಿ ಸೇರಿ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT