ಸಾಂದರ್ಭಿಕ ಚಿತ್ರ 
ರಾಜ್ಯ

ವಿಧ್ವಂಸಕ ಕೃತ್ಯಕ್ಕೆ ಸಂಚು: ಬೆಂಗಳೂರಿನಲ್ಲಿ ಐವರು ಶಂಕಿತ ಉಗ್ರರ ಬಂಧನ

ಕರ್ನಾಟಕ ರಾಜ್ಯದಲ್ಲಿ ಭಾರೀ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸುತ್ತಿದ್ದ ಐವರು ಶಂಕಿತ ಭಯೋತ್ಪಾದಕರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. 

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಭಾರೀ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸುತ್ತಿದ್ದ ಐವರು ಶಂಕಿತ ಭಯೋತ್ಪಾದಕರನ್ನು ಸಿಸಿಬಿ ಪೊಲೀಸರು ಬುಧವಾರ ಬೆಳಗ್ಗೆ ಬಂಧಿಸಿದ್ದಾರೆ. 

ಬಂಧಿತರನ್ನು ಸಯ್ಯದ್ ಸುಹೇಲ್, ಉಮರ್, ಜುನೇದ್ ಮುದಾಶೀರ್, ಜಾಹಿದ್​ ಬಂಧಿತ ಎಂದು ಗುರುತಿಸಲಾಗಿದೆ.  ಇವರು ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಭಾರಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದರು ಎಂದು ತಿಳಿದುಬಂದಿದೆ. 

2017ರ ಅಕ್ಟೋಬರ್​ನಲ್ಲಿ ಬೆಂಗಳೂರಿನ ಆರ್​.ಟಿ.ನಗರದಲ್ಲಿ ನಡೆದಿದ್ದ ಮೂವರ ಕಿಡ್ನ್ಯಾಪ್, ಓರ್ವನ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಹಲವು ಆರೋಪಿಗಳು, ಪರಪ್ಪನ ಅಗ್ರಹಾರ ಜೈಲಿನಿಂದ ಉಗ್ರರ ಜೊತೆಗೆ ಸಂಪರ್ಕ ಹೊಂದಿದ್ದರು ಎನ್ನಲಾಗಿದ್ದು, ಈ ಬಗ್ಗೆ ಐವರು ಶಂಕಿತ ಉಗ್ರರನ್ನು ಸಿಸಿಬಿ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

ಸಿಸಿಬಿಯು ನಗರದ ವಿವಿಧ ಪ್ರದೇಶಗಳಿಂದ ಐವರು ಶಂಕಿತ ಭಯೋತ್ಪಾದಕರನ್ನು ಬಂಧಿಸಿ ಅವರಿಂದ ಅನೇಕ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಂಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ