ಬಸ್ ಚಲಾಯಿಸಿದ ಎಸಿಪಿ ರಾಮಚಂದ್ರಪ್ಪ 
ರಾಜ್ಯ

ಕುಸಿದು ಬಿದ್ದ ಬಿಎಂಟಿಸಿ ಡ್ರೈವರ್: ಚಾಲಕನನ್ನು ಆಸ್ಪತ್ರೆಗೆ ಸೇರಿಸಿ, ಬಸ್ ಚಲಾಯಿಸಿದ ಎಸಿಪಿ; ಪ್ರಶಂಸೆಗಳ ಮಹಾಪೂರ!

ಆರೋಗ್ಯ ಸಮಸ್ಯೆಯಿಂದ ಚಾಲಕ ಅಸ್ವಸ್ಥಗೊಂಡಿದ್ದರಿಂದ ನಡುರಸ್ತೆಯಲ್ಲಿ‌ ನಿಲ್ಲಿಸಿದ್ದ ಬಿಎಂಟಿಸಿ‌ ಬಸ್‌ ಅನ್ನು ಸಹಾಯಕ‌ ಪೊಲೀಸ್ ಕಮಿಷನರ್ (ಎಸಿಪಿ) ರಾಮಚಂದ್ರಪ್ಪ ಅವರು 1 ಕಿ.ಮೀ.ವರೆಗೆ ಚಲಾಯಿಸಿ ಸುರಕ್ಷಿತ‌ ಸ್ಥಳಕ್ಕೆ‌ ತಲುಪಿಸಿದ್ದಾರೆ.

ಬೆಂಗಳೂರು: ಆರೋಗ್ಯ ಸಮಸ್ಯೆಯಿಂದ ಚಾಲಕ ಅಸ್ವಸ್ಥಗೊಂಡಿದ್ದರಿಂದ ನಡುರಸ್ತೆಯಲ್ಲಿ‌ ನಿಲ್ಲಿಸಿದ್ದ ಬಿಎಂಟಿಸಿ‌ ಬಸ್‌ ಅನ್ನು ಸಹಾಯಕ‌ ಪೊಲೀಸ್ ಕಮಿಷನರ್ (ಎಸಿಪಿ) ರಾಮಚಂದ್ರಪ್ಪ ಅವರು 1 ಕಿ.ಮೀ.ವರೆಗೆ ಚಲಾಯಿಸಿ ಸುರಕ್ಷಿತ‌ ಸ್ಥಳಕ್ಕೆ‌ ತಲುಪಿಸಿದ್ದಾರೆ.

ಸೋಮವಾರ ಶಿವಾಜಿನಗರ-ಕಾಡುಗೋಡಿ‌ ಮಾರ್ಗವಾಗಿ ಚಲಿಸುತ್ತಿದ್ದ ಬಿಎಂಟಿಸಿ ಬಸ್‌ ಚಾಲಕ ಮಾರ್ಗ ಮಧ್ಯದಲ್ಲಿಯೇ ಅಸ್ವಸ್ಥಗೊಂಡ ಪರಿಣಾಮ ಬಸ್‌ ಚಾಲನೆ ಮಾಡಲು ಸಾಧ್ಯವಾಗದ ಸ್ಥಿತಿಗೆ ಚಾಲಕ ತಲುಪಿದ್ದರು. ಹೀಗಾಗಿ ಚಾಲಕ ಓಲ್ಡ್ ಏರ್ಪೋರ್ಟ್ ಕಮಾಂಡ್ ಆಸ್ಪತ್ರೆ ಬಳಿ ಬಸ್​ ನಿಲ್ಲಿಸಿದ್ದ. ಎರಡು ದಿನಗಳ ವಿರೋಧ ಪಕ್ಷಗಳ ನಾಯಕರ ಸಭೆ ಹಿನ್ನೆಲೆ ನಗರಕ್ಕೆ ವಿವಿಐಪಿಗಳ ಆಗಮನ ಹಿನ್ನೆಲೆ ಓಲ್ಡ್ ಏರ್ಪೋರ್ಟ್​ ರಸ್ತೆಯಲ್ಲಿ ಎಸಿಪಿ ರಾಮಚಂದ್ರಪ್ಪ ಅವರು ಭದ್ರತೆಗೆ ನಿಯೋಜನೆಗೊಂಡಿದ್ದರು.

ಈ ವೇಳೆ ರಸ್ತೆ ಮಧ್ಯ ನಿಂತಿದ್ದ ಬಿಎಂಟಿಸಿ ಬಸ್​ ಗಮನಿಸಿದ ರಾಮಚಂದ್ರಪ್ಪ, ಚಾಲಕನನ್ನು ಆಂಬ್ಯುಲೆನ್ಸ್‌ನಲ್ಲಿ‌ ಆಸ್ಪತ್ರೆಗೆ ಕಳುಹಿಸಿ, ಬಳಿಕ ಬಸ್ ಅನ್ನು ಸುಮಾರು ಒಂದು ಕಿ.ಮೀ ದೂರದ ಬಸ್​ ನಿಲ್ದಾಣದವರೆಗೆ ಸ್ವತಃ ಚಾಲನೆ ಮಾಡಿಕೊಂಡು ಹೋಗಿದ್ದಾರೆ.

ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಎಸಿಪಿ ರಾಮಚಂದ್ರಪ್ಪ ಅವರು ಬಸ್ ಚಲಾಯಿಸುವ ವೀಡಿಯೊ ಮಾಡಿದ್ದಾರೆ. ನಂತರ ಅದನ್ನು ತಮ್ಮ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ, ಅಧಿಕಾರಿಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಿಡಿಯೊವನ್ನು ಹಂಚಿಕೊಂಡಿರುವ ಹಲವರು, ‘ತುರ್ತು ಸಂದರ್ಭದಲ್ಲಿ ಚಾಲಕನನ್ನು ಆಸ್ಪತ್ರೆಗೆ ಸೇರಿಸಿರುವ ರಾಮಚಂದ್ರಪ್ಪ ಅವರು ಇತರೆ ಅಧಿಕಾರಿಗಳಿಗೆ ಮಾದರಿ’ ಎಂದು ಹೊಗಳಿದ್ದಾರೆ.

ಬಿಎಂಟಿಸಿ ಚಾಲಕ ಗೋಪಿ ಎಂದು ಗುರುತಿಸಲಾಗಿದ್ದು, ‘330’ ಮಾರ್ಗದಲ್ಲಿ ಕಾಡುಗೋಡಿ ಮತ್ತು ಶಿವಾಜಿನಗರ ನಡುವೆ ಬಸ್ ಓಡಿಸುತ್ತಿದ್ದಾಗ, ಮಧ್ಯಾಹ್ನ 12 ರ ಸುಮಾರಿಗೆ ಕಮಾಂಡ್ ಆಸ್ಪತ್ರೆ ಬಳಿ ಅಸ್ವಸ್ಥರಾಗಿದ್ದರು. ಸದ್ಯ ಅವರು ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರನ್ನು ನೋಡಿಕೊಳ್ಳಲು ಮತ್ತು ಅವರ ಚಿಕಿತ್ಸೆಯ ಮೇಲ್ವಿಚಾರಣೆಗೆ ಸಂಬಂಧಪಟ್ಟ ಬಿಎಂಟಿಸಿ ಡಿಪೋ ಮ್ಯಾನೇಜರ್ ಗೆ ಸೂಚಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT