ಸಾಂದರ್ಭಿಕ ಚಿತ್ರ 
ರಾಜ್ಯ

ಮಂಗಳೂರು: ಎರಡು ಅಂಗಡಿಗಳ ಮೇಲೆ ದಾಳಿ, ಮಾದಕ ದ್ರವ್ಯ ಮಿಶ್ರಿತ 100 ಕೆ.ಜಿ ಚಾಕೊಲೇಟ್ ವಶ

ಮಂಗಳೂರು ನಗರದ ಎರಡು ಅಂಗಡಿಗಳಲ್ಲಿ ಮಾದಕ ದ್ರವ್ಯ ಮಿಶ್ರಿತ 100 ಕಿಲೋಗ್ರಾಂ ಚಾಕೊಲೇಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಮಂಗಳೂರು: ನಗರದ ಎರಡು ಅಂಗಡಿಗಳಲ್ಲಿ ಮಾದಕ ದ್ರವ್ಯ ಮಿಶ್ರಿತ 100 ಕಿಲೋಗ್ರಾಂ ಚಾಕೊಲೇಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಬುಧವಾರ ನಡೆಸಿದ ದಾಳಿಯಲ್ಲಿ ನಗರದ ಕಾರ್ ಸ್ಟ್ರೀಟ್‌ನಲ್ಲಿರುವ ಮನೋಹರ್ ಶೇಠ್ ಮಾಲೀಕತ್ವದ ಅಂಗಡಿ ಮತ್ತು ಉತ್ತರ ಪ್ರದೇಶ ಮೂಲದ ಬೆಚನ್ ಸೋನಾರ್ ಅವರ ಮಾಲೀಕತ್ವದ ಫಳ್ನೀರ್‌ನಲ್ಲಿರುವ ಮತ್ತೊಂದು ಅಂಗಡಿಯಿಂದ ಚಾಕೊಲೇಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಡ್ರಗ್ಸ್ ಲೇಪಿತ ಚಾಕೊಲೇಟ್‌ಗಳ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಮಂಗಳೂರು ದಕ್ಷಿಣ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.

ಮಾದಕ ದ್ರವ್ಯ ಮಿಶ್ರಿತ ಚಾಕೊಲೇಟ್‌ಗಳನ್ನು ‘ಬ್ಯಾಂಗ್’ ಚಾಕೊಲೇಟ್‌ಗಳ ಹೆಸರಿನಲ್ಲಿ ಮಾರಾಟ ಮಾಡಲಾಗುತ್ತಿತ್ತು.

ಈ ಸಂಬಂಧ ಇಬ್ಬರನ್ನೂ ಬಂಧಿಸಲಾಗಿದ್ದು, ವಶಪಡಿಸಿಕೊಂಡ ಚಾಕೊಲೇಟ್‌ಗಳನ್ನು ಪರೀಕ್ಷೆಗಾಗಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಇನ್ನೂ ನನಸಾಗಿಲ್ಲ ದಶಕಗಳ ಕನಸು: ಹಾಸನ ವಿಮಾನ ನಿಲ್ದಾಣಕ್ಕೆ ಸಿಗದ ರೆಕ್ಕೆ, ಯೋಜನೆಗೆ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

SCROLL FOR NEXT