ರಾಜ್ಯ

ಕನ್ನಡ ಬೋಧನೆ ಸ್ಥಗಿತಗೊಳಿಸಲು ಮುಂದಾದ ಶಾಲೆಗೆ ನೋಟಿಸ್ ಜಾರಿ

Manjula VN

ಬೆಂಗಳೂರು: ಕನ್ನಡ ಬೋಧನೆ ಸ್ಥಗಿತಗೊಳಿಸಲು ಮುಂದಾದ ನಗರದ ಖಾಸಗಿ ಶಾಲೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬುಧವಾರ ನೋಟಿಸ್ ಜಾರಿ ಮಾಡಿದ್ದು, ಮೂರು ದಿನಗಳೊಳಗಾಗಿ ಸ್ಪಷ್ಟನೆ ನೀಡುವಂತೆ ಸೂಚನೆ ನೀಡಿದೆ.

ಕನ್ನಡ ಭಾಷಾ ಕಲಿಕೆ ಕಾಯಿದೆ-2015ರ ಪ್ರಕಾರ ಶಾಲೆಗಳು ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕಲಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಆದರೆ, ನಗರದ ಖಾಸಗಿ ಶಾಲೆಯೊಂದು 8ನೇ ತರಗತಿಯಿಂದ ಕನ್ನಡ ಕಲಿಕೆಯನ್ನು ಸ್ಥಗಿತಗೊಳಿಸಲು ಮುಂದಾಗಿತ್ತು.

ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ಕನ್ನಡ ಅಭಿವೃದ್ಧಿ ಪ್ರಾಧಿಕಾರಿವು, ಕೂಡಲೇ ಸ್ಪಷ್ಟನೆ ನೀಡುವಂತೆ ಶಾಲೆಗೆ ನೋಟಿಸ್ ಜಾರಿ ಮಾಡಿದೆ.

ಕಾನೂನಿನ ಪ್ರಕಾರ ಕನ್ನಡ ಕಲಿಕೆಗೆ ಅವಕಾಶ ಕಲ್ಪಿಸದ ಖಾಸಗಿ ಶಾಲೆಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಕೋರಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್‌ ತಂಗಡಗಿ ಅವರು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರಿಗೆ ಈ ಹಿಂದೆ ಪತ್ರ ಬರೆದಿದ್ದರು.

SCROLL FOR NEXT