ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ-ಹೆಚ್ ಡಿ ಕುಮಾರಸ್ವಾಮಿ 
ರಾಜ್ಯ

ಬಿಎಂಐಸಿ ಯೋಜನೆ ಅಕ್ರಮಗಳ ವಿರುದ್ಧ ಬಿಜೆಪಿ-ಜೆಡಿಎಸ್ ಜಂಟಿ ಹೋರಾಟ

ಬೆಂಗಳೂರು-ಮೈಸೂರು ಮೂಲಸೌಕರ್ಯ ಕಾರಿಡಾರ್ (ಬಿಎಂಐಸಿ) ಯೋಜನೆ ಹಾಗೂ ನಂದಿ ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್ ಪ್ರೈಸ್ (ಎನ್ಐಸಿಇ)  ವಿರುದ್ಧ ಜಂಟಿ ಹೋರಾಟ ಮಾಡುವುದಾಗಿ ವಿಪಕ್ಷಗಳಾದ ಬಿಜೆಪಿ-ಜೆಡಿಎಸ್ ಘೋಷಿಸಿವೆ. 

ಬೆಂಗಳೂರು: ಬೆಂಗಳೂರು-ಮೈಸೂರು ಮೂಲಸೌಕರ್ಯ ಕಾರಿಡಾರ್ (ಬಿಎಂಐಸಿ) ಯೋಜನೆ ಹಾಗೂ ನಂದಿ ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್ ಪ್ರೈಸ್ (ಎನ್ಐಸಿಇ)  ವಿರುದ್ಧ ಜಂಟಿ ಹೋರಾಟ ಮಾಡುವುದಾಗಿ ವಿಪಕ್ಷಗಳಾದ ಬಿಜೆಪಿ-ಜೆಡಿಎಸ್ ಘೋಷಿಸಿವೆ. 

ಬಿಜೆಪಿಯ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಜೆಡಿಎಸ್ ನ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಜಂಟಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ್ದು, ನೈಸ್ ಯೋಜನೆಗೆ ಸಂಬಂಧಿಸಿದ ಅಕ್ರಮಗಳ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ.
 
ಬಿಎಂಐಸಿ ಯೋಜನೆಯನ್ನು ಜಾರಿಗೊಳಿಸುವಾಗ NICE, ಸರ್ಕಾರದೊಂದಿಗಿನ ಫ್ರೇಮ್ ವರ್ಕ್ ಒಪ್ಪಂದವನ್ನು ಉಲ್ಲಂಘಿಸಿದೆ ಎಂಬ ಆರೋಪ ಕೇಳಿಬಂದಿದೆ. 

ಸದನ ಸಮಿತಿಯ ಮುಖ್ಯಸ್ಥರಾದ ಕಾಂಗ್ರೆಸ್ ಶಾಸಕ ಟಿಬಿ ಜಯಚಂದ್ರ ಹಾಗೂ ಸಂಪುಟ ಉಪಸಮಿತಿಯ ಮುಖ್ಯಸ್ಥರಾಗಿದ್ದ ಜೆಸಿ ಮಾಧುಸ್ವಾಮಿ ಅವರಿಂದ NICE  ಯೋಜನೆಗೆ ಸಂಬಂಧಿಸಿದ ವರದಿಗಳಿವೆ. ನೈಸ್ ಯೋಜನೆಯನ್ನು ವಹಿಸಿಕೊಳ್ಳುವುದರಿಂದ ಸರ್ಕಾರಕ್ಕೆ ವಾರ್ಷಿಕ 20,000-30,000 ಕೋಟಿ ರೂಪಾಯಿ ಮೌಲ್ಯದ ಆದಾಯ ಸಿಗಲಿದೆ ಎಂದು ನಾಯಕರು ವರದಿಯಲ್ಲಿ ಹೇಳಿದ್ದಾರೆ. 

ಕಂಪನಿ 13,000 ಎಕರೆಗಳಷ್ಟು ಭೂಮಿಯನ್ನು ಹೆಚ್ಚುವಾರಿ ಸ್ವಾಧೀನಪಡಿಸಿಕೊಂಡಿದೆ. ಇದನ್ನು ಹೈಕೋರ್ಟ್ ನ ಆದೇಶದ ಪ್ರಕಾರ ಸರ್ಕಾರ ವಶಪಡಿಸಿಕೊಳ್ಳಬೇಕು ಎಂದು ಬೊಮ್ಮಾಯಿ ಹೇಳಿದ್ದಾರೆ.

ಇದನ್ನೂ ಓದಿ: ಜೆಡಿಎಸ್ ಕೋಮುವಾದ ಸಿದ್ಧಾಂತಕ್ಕೆ ಬದಲಾಗುತ್ತಿರುವುದು ಕಾಣುತ್ತಿದೆ, ಥೇಟ್.. ನಾಗವಲ್ಲಿಯ ತರ!
 
ಒತ್ತುವರಿ ಭೂಮಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಅಧಿಕಾರವಿದೆ ಎಂದು ಸುಪ್ರೀಂ ಕೋರ್ಟ್ ಹೇಳಿರುವುದನ್ನು ಗಮನಿಸಿದ ಅವರು, ಕಾಂಗ್ರೆಸ್ ಸರ್ಕಾರವು ಈ ಬಗ್ಗೆ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕೆಂದು ಅವರು ಒತ್ತಾಯಿಸಿದರು, ಜಯಚಂದ್ರ ಅವರು ಕ್ರಮಕ್ಕೆ ಒತ್ತಾಯಿಸಿ ವಿಧಾನಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ್ದನ್ನೂ ಮಾಜಿ ಸಿಎಂ ಉಲ್ಲೇಖಿಸಿದ್ದಾರೆ. 1,325 ಕೋಟಿ ರೂಪಾಯಿ ಮೊತ್ತದ ಟೋಲ್ ಅನ್ನು ಅಕ್ರಮವಾಗಿ ಸಂಗ್ರಹಿಸಿದ್ದಾರೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.

JD(S) ವಿಧಾನಸಭೆಯಲ್ಲಿ NICE ವಿಷಯವನ್ನು ಪ್ರಸ್ತಾಪಿಸಲು ಬಯಸಿದೆ, ಆದರೆ ಸದನದಲ್ಲಿ ಅವರ "ಅಸಭ್ಯ ಮತ್ತು ಅಗೌರವ" ವರ್ತನೆಗಾಗಿ 10 ಬಿಜೆಪಿ ಶಾಸಕರನ್ನು ಅಮಾನತುಗೊಳಿಸಿದ ನಂತರ ಬಿಜೆಪಿಯೊಂದಿಗೆ ಗುರುವಾರ ಮತ್ತು ಶುಕ್ರವಾರದ ಕಲಾಪವನ್ನು ಬಹಿಷ್ಕರಿಸಲು ಪಕ್ಷವು ನಿರ್ಧರಿಸಿದ್ದರಿಂದ ಅದನ್ನು ಪ್ರಸ್ತಾಪಿಸಲು ಸಾಧ್ಯವಾಗಲಿಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ನೈಸ್ ಯೋಜನೆಯನ್ನು ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರು ಸಿಎಂ ಆಗಿದ್ದಾಗ (1994-96) ತರಲಾಗಿತ್ತು. ‘‘ಅಕ್ರಮಗಳಿದ್ದರೆ ಅವರು ಸರಕಾರದಲ್ಲಿದ್ದಾಗ ಕ್ರಮ ಕೈಗೊಳ್ಳಬಹುದಿತ್ತು. ನಾವು ಯಾವುದೇ ಹಗರಣ ಮಾಡಿಲ್ಲ.  ನಾವು ಸೇಡಿನ ರಾಜಕಾರಣ ಮಾಡುವುದಿಲ್ಲ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT