ಸಂಗ್ರಹ ಚಿತ್ರ 
ರಾಜ್ಯ

ಬಜೆಟ್​ನಲ್ಲಿ ದರ ಪರಿಷ್ಕರಣೆ: ಇಂದಿನಿಂದ ಮದ್ಯದ ಬೆಲೆ ಶೇ.20ರಷ್ಟು ಏರಿಕೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್‌ನಲ್ಲಿ ಘೋಷಿಸಿದ ಪ್ರಕಾರ, ಮದ್ಯದ ಬೆಲೆ ಇಂದಿನಿಂದ (ಜುಲೈ 20) ಅನ್ವಯವಾಗುವಂತೆ ಹೆಚ್ಚಳವಾಗಿದೆ. ಇದರೊಂದಿಗೆ ಗರಿಷ್ಠ ಶೇ.20ರಷ್ಟು ಹೆಚ್ಚಿನ ದರದೊಂದಿಗೆ ಹೊಸ ಬೆಲೆಯಲ್ಲಿ ಶುಕ್ರವಾರದಿಂದ ಮದ್ಯ ಮಾರಾಟವಾಗಲಿದೆ.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್‌ನಲ್ಲಿ ಘೋಷಿಸಿದ ಪ್ರಕಾರ, ಮದ್ಯದ ಬೆಲೆ ಇಂದಿನಿಂದ (ಜುಲೈ 20) ಅನ್ವಯವಾಗುವಂತೆ ಹೆಚ್ಚಳವಾಗಿದೆ. ಇದರೊಂದಿಗೆ ಗರಿಷ್ಠ ಶೇ.20ರಷ್ಟು ಹೆಚ್ಚಿನ ದರದೊಂದಿಗೆ ಹೊಸ ಬೆಲೆಯಲ್ಲಿ ಶುಕ್ರವಾರದಿಂದ ಮದ್ಯ ಮಾರಾಟವಾಗಲಿದೆ.

ಸರ್ಕಾರಿ ಆದೇಶದ ಪ್ರಕಾರ ಗುರುವಾರ ಮಧ್ಯರಾತ್ರಿಯಿಂದ ಈ ದರ ಹೆಚ್ಚಳ ಜಾರಿಗೆ ಬಂದಿದೆ. ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ರಾಜ್ಯ ಸರ್ಕಾರ ಬ್ರಾಂದಿ, ವಿಸ್ಕಿ, ಜಿನ್‌, ರಮ್‌ ಮತ್ತು ಅಂಥಹ ಇತರ ಮದ್ಯಗಳ ಸುಂಕವನ್ನು ಶೇ.20ರಷ್ಟು ಏರಿಕೆ ಮಾಡಿತ್ತು. ಅಲ್ಲದೆ, ಬಿಯರ್‌ ಮೇಲಿನ ಅಬಕಾರಿ ಸುಂಕವನ್ನು ಶೇ.10ರಷ್ಟು ಹೆಚ್ಚಿಸಿದ್ದನ್ನು ತಿಳಿಸಿತ್ತು.

ಹೀಗಾಗಿ ಹಾಲಿ ದರಕ್ಕೆ ಹೋಲಿಸಿದಾಗ ಶೇ.10ರಷ್ಟು ಬಿಯರ್‌ ದರ ಹೆಚ್ಚಳವಾಗಲಿದೆ. ಭಾರತೀಯ ಮದ್ಯ (ಐಎಂಎಲ್) ಒಂದು ಪೆಗ್ (60 ಎಂಎಲ್ )ಗೆ 10ರಿಂದ 20 ರೂ. ಹಾಗೂ ಬಿಯ‌ರ್ ಬೆಲೆ ಪ್ರತಿ ಬಾಟಲ್‌ಗೆ ಶೇ.10ರಷ್ಟು ಹೆಚ್ಚಳವಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT