ಸಾಂದರ್ಭಿಕ ಚಿತ್ರ 
ರಾಜ್ಯ

ಚಿಕ್ಕಬಳ್ಳಾಪುರ: ಕೌಟುಂಬಿಕ ಕಲಹ ಹಿನ್ನೆಲೆ; ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ; ಬದುಕುಳಿದ ಮಗಳು

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಾಯಿಯೊಬ್ಬಳು ತನ್ನ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದು, ಅಮ್ಮ ಮತ್ತು ಒಬ್ಬ ಮಗಳು ಪ್ರಾಣ ಕಳೆದುಕೊಂಡಿದ್ದಾರೆ.

ಚಿಕ್ಕಬಳ್ಳಾಪುರ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಾಯಿಯೊಬ್ಬಳು ತನ್ನ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದು, ಅಮ್ಮ ಮತ್ತು ಒಬ್ಬ ಮಗಳು ಪ್ರಾಣ ಕಳೆದುಕೊಂಡಿದ್ದಾರೆ.

ಚಿಕ್ಕಬಳ್ಳಾಪುರ ತಾಲೂಕಿನ ಸೇಟ್ ದಿನ್ನೆ ಬಳಿ‌ ಈ ಘಟನೆ ನಡೆದಿದ್ದು, 5 ವರ್ಷದ ಹೆಣ್ಣು‌ ಮಗು ಶ್ರೀನಿಧಿ ಹಾಗೂ ತಾಯಿ ನಾಗಮ್ಮ (39) ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಏಳು ವರ್ಷದ ಮಗು ಗಂಗೋತ್ರಿ ನೀರಿನಲ್ಲಿ ಮುಳುಗುವಾಗ ಭಯವಾಗಿ ಕೈಕಾಲು ಬಡಿದು ಈಜಿ ದಡ ಸೇರಿ ಬದುಕುಳಿದಿದ್ದಾಳೆ.

ನಾಗಮ್ಮ ಅವರಿಗೆ ಎಂಟು ವರ್ಷದ ಹಿಂದೆ ಮದುವೆಯಾಗಿದ್ದು, ಮನೆಯಲ್ಲಿ ನಿತ್ಯ ಜಗಳ ಆಗುತ್ತಿತ್ತು ಎಂದು ಹೇಳಲಾಗುತ್ತಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮನನೊಂದಿದ್ದ ಆಕೆ ತನ್ನ ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೆಟ್ಟಿಲುಗಳಿರುವ ದೊಡ್ಡ ಬಾವಿ. ಗಂಗೋತ್ರಿ ಕಾಲು ಬಡಿಯುತ್ತಾ ಆ ಮೆಟ್ಟಿಲುಗಳ ಕಡೆಗೆ ಬಂದು ಆ ಮೆಟ್ಟಿಲು ಹತ್ತಿ ಮೇಲೆ ಬಂದು ಬೊಬ್ಬೆ ಹೊಡೆದಿದ್ದಾಳೆ. ಆಗ ಊರಿನ ಜನರಿಗೆ ವಿಷಯ ಗೊತ್ತಾಗಿದೆ.

ಕೂಡಲೇ ಅವರೆಲ್ಲ ಓಡೋಡಿ ಬಂದು ಇಣುಕಿದಾಗ ತಾಯಿ ಮತ್ತು ಮಗು ಸಾವನ್ನಪ್ಪಿದರು. ಈ ನಡುವೆ ಅಗ್ನಿಶಾಮಕ ದಳ ಹಾಗು ಇತರರು ಸೇರಿ ಶವವನ್ನು ಮೇಲಕ್ಕೆ ಎತ್ತಲಾಯಿತು. ಈ ಸಂಬಂಧ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

ಮತ ಬೇಟೆ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ

ಕೋಟಿ ಕೋಟಿ ಲೂಟಿ: ಅರಣ್ಯ ಇಲಾಖೆ ಮಾಜಿ ಅಧಿಕಾರಿಗೆ ಕೋರ್ಟ್ ಶಾಕ್; ಬರೋಬ್ಬರಿ 1.38 ಕೋಟಿ ದಂಡ, 3 ವರ್ಷ ಜೈಲು ಶಿಕ್ಷೆ..!