ಕಾರು ಜಖಂಗೊಂಡಿರುವುದು. 
ರಾಜ್ಯ

ಸಕಲೇಶಪುರದಲ್ಲಿ ಭೀಕರ ಅಪಘಾತ: ಟಿಪ್ಪರ್ ವಾಹನಕ್ಕೆ ಕಾರು ಡಿಕ್ಕಿ, ನಾಲ್ವರ ದುರ್ಮರಣ

ಸಕಲೇಶಪುರದ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಈಶ್ವರಹಳ್ಳಿ ಕೂಡಿಗೆ ಬಳಿ ಕಾರು ಮತ್ತು ಟಿಪ್ಪರ್ ವಾಹನ ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ.

ಸಕಲೇಶಪುರ (ಹಾಸನ): ಸಕಲೇಶಪುರದ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಈಶ್ವರಹಳ್ಳಿ ಕೂಡಿಗೆ ಬಳಿ ಕಾರು ಮತ್ತು ಟಿಪ್ಪರ್ ವಾಹನ ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ.

ಮೃತರನ್ನು ಕುಪ್ಪಹಳ್ಳಿಯ ಚೇತನ್ (22), ಗುಡ್ಡೇನಹಳ್ಳಿಯ ಅಶೋಕ್ (21), ತಟ್ಟೆಕೆರೆಯ ಪುರುಷೋತ್ತಮ್ (23) ಮತ್ತು ಹಾಸನ ಸಮೀಪದ ಚಿಗಳೂರು ಗ್ರಾಮದ ದಿನೇಶ್ (20) ಎಂದು ಗುರುತಿಸಲಾಗಿದೆ.

ಮೃತರೆಲ್ಲರೂ ಸ್ನೇಹಿತರಾಗಿದ್ದು, ಸಕಲೇಶಪುರಕ್ಕೆ ಜಾಲಿ ರೈಡ್ ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಅತಿವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಟೊಯೊಟಾ ಇನ್ನೋವಾ ಕಾರು ಮತ್ತೊಂದು ವಾಹನವನ್ನು ಓವರ್‌ಟೇಕ್ ಮಾಡುವಾಗ ಎದುರಿಗೆ ಬರುತ್ತಿದ್ದ ಟಿಪ್ಪರ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ಹೇಳಿದ್ದಾರೆ.

ಕಾರಿನ ಅರ್ಧ ಭಾಗವು ಟಿಪ್ಪರ್ ಅಡಿಯಲ್ಲಿ ಸಿಲುಕಿಕೊಂಡಿದ್ದರಿಂದ ಪೊಲೀಸರು ಕಾರು ಮತ್ತು ಟಿಪ್ಪರ್ ಅನ್ನು ಬೇರ್ಪಡಿಸಲು ಕ್ರೇನ್ ಬಳಕೆ ಮಾಡುವಂತಾಯಿತು. ಈ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಅರ್ಧ ಗಂಟೆಗಳ ಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು.

ಘಟನೆ ಬಳಿಕ ಟಿಪ್ಪರ್ ವಾಹನ ವಶಪಡಿಸಿಕೊಂಡ ಪೊಲೀಸರು, ಮೃತದೇಹಗಳನ್ನು ಹಾಸನದ ಶವಾಗಾರಕ್ಕೆ ರವಾನಿಸಿದ್ದಾರೆ. ಈ ಸಂಬಂಧ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಗಾಂಧಿ ಜಯಂತಿ 2025: ರಾಜ್‌ಘಾಟ್‌ನಲ್ಲಿ ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಪುಷ್ಪ ನಮನ

ವಸ್ತುಸ್ಥಿತಿಯ ಬಗ್ಗೆ ಅರಿವಿಲ್ಲದೇ ಮಾತನಾಡುವ ವಿಪಕ್ಷಗಳ ಭವಿಷ್ಯ ನಿಜವಾಗದು: ಸಿಎಂ ಸಿದ್ದರಾಮಯ್ಯ

RSS ಶತಮಾನೋತ್ಸವ: ಈ ಅದ್ಭುತ ಪಯಣ ಭಾರತದ ದಿಕ್ಕನ್ನೇ ಬದಲಾಯಿಸಿದೆ; BJP

ದ್ವೇಷ, ಹಿಂಸೆ, ಅನ್ಯಾಯವೆಂಬ ಅಂಧಕಾರ ಆವರಿಸಿದಂತೆಲ್ಲಾ ಅದರಿಂದ ಹೊರಬರಲು ಮತ್ತೆ ಮತ್ತೆ ನೆನಪಾಗುವುದು ಬಾಪು: ಸಿಎಂ ಸಿದ್ದರಾಮಯ್ಯ

ಗೃಹಲಕ್ಷ್ಮಿ ಹಣದಿಂದ ವಾಷಿಂಗ್ ಮಷಿನ್ ಖರೀದಿ: ನವರಾತ್ರಿ ವೇಳೆ ಮಹಿಳೆಯೊಬ್ಬರ ಸಂಭ್ರಮಕ್ಕೆ ಯೋಜನೆ ಕಾರಣವಾಗಿರುವುದು ಸಾರ್ಥಕ ತರಿಸಿದೆ ಎಂದ ಸಿಎಂ

SCROLL FOR NEXT