ರಾಜ್ಯ

ಕರಾವಳಿ ಕರ್ನಾಟಕದಲ್ಲಿ ಮಳೆಯ ಆರ್ಭಟ: ನದಿಗಳ ಹರಿವಿನ ಮಟ್ಟ ಏರಿಕೆ

Srinivas Rao BV

ದಕ್ಷಿಣ ಕನ್ನಡ: ಕರ್ನಾಟಕದ ಉಡುಪಿ ಹಾಗೂ ದಕ್ಷಿಣ ಕನ್ನಡದಲ್ಲಿ ಮಳೆಯ ಆರ್ಭಟ ಹೆಚ್ಚಾಗಿದ್ದು, ಹಲವು ನದಿಗಳು ಉಕ್ಕಿ ಹರಿಯುತ್ತಿವೆ. 

ತಗ್ಗು ಪ್ರದೇಶಗಳು ಮಳೆಯ ತೀವ್ರತೆಗೆ ಜಲಾವೃತಗೊಂಡಿವೆ. ನೇತ್ರಾವತಿ, ಫಲ್ಗುಣಿ ಹಾಗೂ ಹಲವು ತೊರೆಗಳಲ್ಲಿನ ನೀರಿನ ಮಟ್ಟ ಏರಿಕೆಯಾಗಿದ್ದು ದಕ್ಷಿಣ ಕನ್ನಡದಲ್ಲಿ ನದಿ ದಡದಲ್ಲಿ ವಾಸಿಸುವ ಜನರಿಗೆ ಅಪಾಯತಂದೊಡ್ಡಿದೆ.

ಬಂಟ್ವಾಳ ತಾಲೂಕಿನಲ್ಲಿ ಕೆಲವು ಕುಟುಂಬಗಳನ್ನು ಸುರಕ್ಷಿತ ಪ್ರದೇಶಗಳಿಗೆ ವರ್ಗಾವಣೆ ಮಾಡಲಾಗಿದೆ.  ತಾಲ್ಲೂಕಿನಲ್ಲಿ ಅಡಿಕೆ ತೋಟಗಳೂ ಸಹ ಮುಳುಗಡೆಯಾಗಿದ್ದು, ರೈತರಲ್ಲಿ ಆತಂಕ ಮೂಡಿಸಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. 

ಇನ್ನು ಪ್ರಸಿದ್ಧ ಕ್ಷೇತ್ರ ಸುಬ್ರಹ್ಮಣ್ಯದಲ್ಲಿ ಸ್ನಾನಘಟ್ಟ ಮುಳುಗಡೆಯಾಗಿದ್ದು, ದೇವಾಲಯಕ್ಕೆ ಬರುವ ಭಕ್ತರಿಗೆ ಕುಮಾರಧಾರ ನದಿಗೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ. ಮಂಜೇಶ್ವರ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಜಲಾವೃತಗೊಂಡು ವಾಹನಗಳ ಸಂಚಾರಕ್ಕೆ ಅಡ್ಡಿಯಾಗಿದೆ.

SCROLL FOR NEXT