ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು ಸುತ್ತಲಿನ ಜಿಲ್ಲೆಗಳಿಗೆ ಉಪ ನಗರ ರೈಲು ಯೋಜನೆ ವಿಸ್ತರಿಸಲು ಸರ್ಕಾರ ಮುಂದು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ನಿವಾರಣೆಯ ಗುರಿಯೊಂದಿಗೆ ಕೈಗೆತ್ತಿಕೊಂಡಿರುವ ಉಪನಗರ ರೈಲು ಯೋಜನೆಯನ್ನು ಸುತ್ತಮುತ್ತಲಿನ ಜಿಲ್ಲೆಗಳಿಗೂ ವಿಸ್ತರಿಸಲು ಚಿಂತನೆ ನಡೆಸಲಾಗಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂಬಿ ಪಾಟೀಲ್ ಅವರು ಹೇಳಿದ್ದಾರೆ.

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ನಿವಾರಣೆಯ ಗುರಿಯೊಂದಿಗೆ ಕೈಗೆತ್ತಿಕೊಂಡಿರುವ ಉಪನಗರ ರೈಲು ಯೋಜನೆಯನ್ನು ಸುತ್ತಮುತ್ತಲಿನ ಜಿಲ್ಲೆಗಳಿಗೂ ವಿಸ್ತರಿಸಲು ಚಿಂತನೆ ನಡೆಸಲಾಗಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂಬಿ ಪಾಟೀಲ್ ಅವರು ಹೇಳಿದ್ದಾರೆ.

ಉಪನಗರ ರೈಲು ಯೋಜನೆಯ ಪ್ರಗತಿ ಕುರಿತು ಸೋಮವಾರ ಇಲ್ಲಿ ಕರ್ನಾಟಕ ರೈಲು ಮೂಲಸೌಲಭ್ಯ ಅಭಿವೃದ್ಧಿ ಕಂಪನಿ ನಿಯಮಿತದ (ಕೆ-ರೈಡ್‌) ಉನ್ನತ ಅಧಿಕಾರಿಗಳೊಂದಿಗೆ ಅವರು ಸೋಮವಾರ ಪರಿಶೀಲನಾ ಸಭೆ ನಡೆಸಿದರು.

ಈ ವೇಳೆ ಮಾತನಾಡಿದ ಸಚಿವರು, " ನೈರುತ್ಯ ರೈಲ್ವೆ ವಲಯದ ಪ್ರಧಾನ ವ್ಯವಸ್ಥಾಪಕರಿಗೆ ಪತ್ರ ಬರೆದಿದ್ದು, ಮೈಸೂರು, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಮಾಗಡಿ, ಗೌರಿಬಿದನೂರು, ಬಂಗಾರಪೇಟೆಗೆ ವಿಸ್ತರಿಸಲು ಅನುಕೂಲವಾಗುವಂತೆ ಉಪನಗರ ರೈಲು ವಿಸ್ತರಣೆಗೆ ಕಾರ್ಯಸಾಧ್ಯತಾ ವರದಿ ಕೈಗೆತ್ತಿಕೊಳ್ಳಲು ಅನುಮತಿ ನೀಡಬೇಕೆಂದು ಕೋರಿಲಾಗಿದೆ ಎಂದು ಹೇಳಿದರು.

ಹಂತ-1ರಲ್ಲಿ ಉಪನಗರ ರೈಲು ಯೋಜನೆ ಕಾಮಗಾರಿ (148.17 ಕಿ.ಮೀ.) ನಡೆಯುತ್ತಿದೆ. ಇದನ್ನು ಸುತ್ತಲಿನ ಹಲವು ನಗರಗಳಿಗೆ ವಿಸ್ತರಿಸುವ ಅಗತ್ಯವಿದೆ. ಈ ಸಂಬಂಧ ಜೂನ್‌ 6ರಂದು ಸಭೆ ನಡೆಸಲಾಗಿತ್ತು. ಕೆ-ರೈಡ್‌ ಈ ಪ್ರಸ್ತಾವನೆಗೆ ಅಂದು ತಾತ್ತ್ವಿಕ ಒಪ್ಪಿಗೆ ನೀಡಿತ್ತು. ಮುಂದಿನ ಹೆಜ್ಜೆಯಾಗಿ ಈಗ ನೈರುತ್ಯ ರೈಲ್ವೆಗೆ ಪತ್ರ ಬರೆಯಲಾಗಿದೆ" ಎಂದು ತಿಳಿಸಿದರು.

ಉಪನಗರ ರೈಲು ಯೋಜನೆಯ ಹಂತ-1ರ ಕಾಮಗಾರಿಗಳು ಅಬಾಧಿತವಾಗಿ ಮುಂದುವರಿದುಕೊಂಡು ಹೋಗಲಿವೆ. ಆದರೆ, ಹಂತ-2ನ್ನು 452 ಕಿ.ಮೀ.ಗಳಿಗೆ ವಿಸ್ತರಿಸಲು ಚಿಂತನೆ ನಡೆಸಲಾಗಿದ್ದು, ಇದಕ್ಕೆ ಈಗಿನಿಂದಲೇ ಅಗತ್ಯ ಉಪಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ. ನಿಯಮಗಳ ಪ್ರಕಾರ ರಾಜ್ಯ ಸರಕಾರದ ಸಂಸ್ಥೆಯು ಕಾರ್ಯಸಾಧ್ಯತಾ ವರದಿ ತಯಾರಿಸಲು ಸಾಧ್ಯವಿಲ್ಲ. ಇದನ್ನು ರೈಲ್ವೆ ಮಂಡಲಿಯೇ ಮಾಡಬೇಕು ಎಂದು ಮಾಹಿತಿ ನೀಡಿದರು.

ಇದೇ ಸಂದರ್ಭದಲ್ಲಿ ಅವರು, ಉಪನಗರ ರೈಲು ಯೋಜನೆಯ ವ್ಯಾಪ್ತಿಯಲ್ಲಿ ಭೂಸ್ವಾಧೀನಕ್ಕೆ ಸಂಬಂಧಪಟ್ಟಂತೆ ಇರುವ ಸಣ್ಣಪುಟ್ಟ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸಬೇಕು. ರೈಲು ವ್ಯವಸ್ಥೆಗೆ ಬೇಕಾದ ಬೋಗಿಗಳ ತಯಾರಿಕೆಗೆ ಬಿಡ್‌ ಅಂತಿಮಗೊಳಿಸಲಾಗುತ್ತಿದ್ದು, ಕೆಲವೇ ದಿನಗಳಲ್ಲಿ ಯೋಜನೆಯ ಕಾಮಗಾರಿಯನ್ನೂ ಖುದ್ದಾಗಿ ಪರಿಶೀಲಿಸಲಾಗುವುದು ಎಂದು ವಿವರಿಸಿದರು.

ಸದ್ಯಕ್ಕೆ ಪ್ರಗತಿಯಲ್ಲಿರುವ 148 ಕಿ.ಮೀ. ವ್ಯಾಪ್ತಿಯ ಉಪನಗರ ರೈಲು ಯೋಜನೆಯಲ್ಲಿ ಒಟ್ಟು ನಾಲ್ಕು ಕಾರಿಡಾರ್‌ಗಳಿವೆ. ಇದು ಕ್ರಮವಾಗಿ ಬೆಂಗಳೂರು ನಗರ ರೈಲು ನಿಲ್ದಾಣದಿಂದ ದೇವನಹಳ್ಳಿ (41.4 ಕಿ.ಮೀ), ಬೈಯಪ್ಪನಹಳ್ಳಿಯಿಂದ ಚಿಕ್ಕಬಾಣಾವರ (25.01 ಕಿ.ಮೀ), ಕೆಂಗೇರಿಯಿಂದ ವೈಟ್‌ಫೀಲ್ಡ್‌ (35.32 ಕಿ.ಮೀ) ಮತ್ತು ಹೀಳಲಿಗೆಯಿಂದ ರಾಜಾನುಕುಂಟೆವರೆಗೆ (46.25 ಕಿ.ಮೀ) ಉದ್ದವಿದೆ.

ಎರಡನೇ ಹಂತದಲ್ಲಿ ದೇವನಹಳ್ಳಿಯಿಂದ ಕೋಲಾರ (107 ಕಿ.ಮೀ), ಚಿಕ್ಕಬಾಣಾವರದಿಂದ ಡಾಬಸ್‌ಪೇಟೆ ಮೂಲಕ ತುಮಕೂರು (55 ಕಿ.ಮೀ), ಚಿಕ್ಕಬಾಣಾವರದಿಂದ ಮಾಗಡಿ (45 ಕಿ.ಮೀ), ಕೆಂಗೇರಿಯಿಂದ ಮೈಸೂರು (125 ಕಿ.ಮೀ), ವೈಟ್‌ಫೀಲ್ಡ್‌ನಿಂದ ಬಂಗಾರಪೇಟೆ (45 ಕಿ.ಮೀ), ಹೀಳಲಿಗೆಯಿಂದ ತಮಿಳುನಾಡಿನ ಹೊಸೂರು (23 ಕಿ.ಮೀ) ಮತ್ತು ರಾಜಾನುಕುಂಟೆಯಿಂದ ದೊಡ್ಡಬಳ್ಳಾಪುರದ ಮಾರ್ಗವಾಗಿ ಗೌರಿಬಿದನೂರಿನವರೆಗೆ (52 ಕಿ.ಮೀ) ವಿಸ್ತರಿಸಬೇಕೆಂಬುದು ಸಚಿವ ಎಂ ಬಿ ಪಾಟೀಲ ಅವರ ಚಿಂತನೆಯಾಗಿದೆ. ಇದರಿಂದಾಗಿ ಬೆಂಗಳೂರಿನ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಬಂದು, ಇಲ್ಲಿರುವ ಉದ್ದಿಮೆಗಳಿಗೆ ಸುತ್ತಮುತ್ತಲ ನಗರ/ಪಟ್ಟಣಗಳಿಂದ ಉದ್ಯೋಗಿಗಳು ಸುಗಮವಾಗಿ ಬಂದು ಹೋಗಬಹುದು ಎನ್ನುವುದು ಅವರ ಆಶಯವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT