ಸಾಂದರ್ಭಿಕ ಚಿತ್ರ 
ರಾಜ್ಯ

ಉಡುಪಿ ಕಾಲೇಜು ವಿಡಿಯೋ ಪ್ರಕರಣ: ಸುಳ್ಳು ಸುದ್ದಿ ಹಬ್ಬಿಸಿದರೆ ಕಠಿಣ ಕ್ರಮ- ಪೊಲೀಸರ ಎಚ್ಚರಿಕೆ

ಉಡುಪಿಯ ಕಾಲೇಜಿನ ಶೌಚಾಲಯದಲ್ಲಿ ಹಿಂದೂ ಯುವತಿಯರ ವಿಡಿಯೋ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಳು ಮಾಹಿತಿ ಹಂಚಿಕೊಳ್ಳುವುದು ಮತ್ತು ಪ್ರಸಾರ ಮಾಡಿದರೆ ಕಠಿಣ ಕಾನೂನು ಕ್ರಮ ಜರುಗಿಸುವುದಾಗಿ ಕರ್ನಾಟಕ ಪೊಲೀಸರು...

ಉಡುಪಿ: ಉಡುಪಿಯ ಕಾಲೇಜಿನ ಶೌಚಾಲಯದಲ್ಲಿ ಹಿಂದೂ ಯುವತಿಯರ ವಿಡಿಯೋ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಳು ಮಾಹಿತಿ ಹಂಚಿಕೊಳ್ಳುವುದು ಮತ್ತು ಪ್ರಸಾರ ಮಾಡಿದರೆ ಕಠಿಣ ಕಾನೂನು ಕ್ರಮ ಜರುಗಿಸುವುದಾಗಿ ಕರ್ನಾಟಕ ಪೊಲೀಸರು ಮಂಗಳವಾರ ಎಚ್ಚರಿಕೆ ನೀಡಿದ್ದಾರೆ.

ಮೂವರು ಮುಸ್ಲಿಂ ವಿದ್ಯಾರ್ಥಿನಿಯರು ಕಾಲೇಜಿನ ರೆಸ್ಟ್ ರೂಂನಲ್ಲಿ ಹಿಂದೂ ಹುಡುಗಿಯರ ವಿಡಿಯೋ ರೆಕಾರ್ಡ್ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಸಂಬಂಧ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಉಡುಪಿ ಪೊಲೀಸ್ ವರಿಷ್ಠಾಧಿಕಾರಿ(ಎಸ್‌ಪಿ) ಹಾಕೆ ಅಕ್ಷಯ್ ಮಚ್ಚಿಂದ್ರ ಅವರು, ಈ ಸಂಬಂಧ ಸುಳ್ಳು ಸುದ್ದಿಗಳನ್ನು ನಂಬಬೇಡಿ ಎಂದು ಜನತೆಗೆ ಮನವಿ ಮಾಡಿದ್ದಾರೆ. 

ಜನರಲ್ಲಿ ಗೊಂದಲ ಮೂಡಿಸಲು ವದಂತಿಗಳನ್ನು ಹಬ್ಬಿಸಬಾರದು. ಯಾವುದೇ ದಾಖಲೆ, ಸಾಕ್ಷ್ಯಾಧಾರಗಳು ಲಭ್ಯವಿದ್ದಲ್ಲಿ ಅದನ್ನು ಪೊಲೀಸರಿಗೆ ಒಪ್ಪಿಸಿ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಿ ಎಂದು ಮನವಿ ಮಾಡಿದರು. 

ರೆಸ್ಟ್ ರೂಂನಲ್ಲಿ ಹಿಂದೂ ಹುಡುಗಿಯರ ವಿಡಿಯೋ ರೆಕಾರ್ಡ್ ಮಾಡಿದ ಬಗ್ಗೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಲು ಯಾವುದೇ ಸುಳಿವು ಲಭ್ಯವಾಗಿಲ್ಲ. ಆರೋಪಿಗಳ ಮೊಬೈಲ್‌ನಲ್ಲಿ ಯಾವುದೇ ಫೋಟೋ ಮತ್ತು ವಿಡಿಯೋ ಲಭ್ಯವಿಲ್ಲ. ಕಾಲೇಜಿನ ನಿಯಮಗಳ ಪ್ರಕಾರ ಅವರನ್ನು ವಿಚಾರಣೆ ನಡೆಸಲಾಗಿದೆ. ಅವರು ತಮಾಷೆಗಾಗಿ ಮಾಡಿರುವುದಾಗಿ ಹುಡುಗಿಯರು ಹೇಳಿದ್ದಾರೆ ಎಂದರು.

"ಮಹಿಳಾ ಶೌಚಾಲಯದಲ್ಲಿ ಹಿಡನ್ ಕ್ಯಾಮೆರಾಗಳನ್ನು ಬಳಸಿ ವಿಡಿಯೋ ಚಿತ್ರೀಕರಣ ಮಾಡಲಾಗಿದೆ ಎಂದು ಹರಿಬಿಟ್ಟಿರುವ ವಿಡಿಯೋ ನಕಲಿ. ಬ್ಲ್ಯಾಕ್‌ ಮೇಲ್ ಗಾಗಿ ಪ್ರಸಾರವಾಗುತ್ತಿರುವ ವೀಡಿಯೊಗಳ ಮೇಲೆ ನಾವು ಗಮನಹರಿಸಿದ್ದೇವೆ. ಸತ್ಯವನ್ನು ತಿಳಿಯದೆ ಕೇವಲ ಸಂದೇಶಗಳನ್ನು ಫಾರ್ವರ್ಡ್ ಮಾಡುವುದು ತಪ್ಪು. ಈ ನಿಟ್ಟಿನಲ್ಲಿ ಫೇಸ್‌ಬುಕ್ ಮತ್ತು ವಾಟ್ಸಾಪ್ ವೈರಲ್ ಪೋಸ್ಟ್‌ಗಳ ಮೇಲೆ ನಿಗಾ ಇಡಲಾಗಿದೆ" ಎಂದರು.

ಈ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಉಡುಪಿ ಬಿಜೆಪಿ ಶಾಸಕ ಯಶಪಾಲ್ ಸುವರ್ಣ ಆಗ್ರಹಿಸಿದ್ದಾರೆ. "ಉಡುಪಿ ಜಿಲ್ಲೆ ಶೈಕ್ಷಣಿಕವಾಗಿ ಹೆಸರುವಾಸಿಯಾಗಿದ್ದು, ಇಲ್ಲಿ ಮಹಿಳೆಯರಿಗೆ ಗೌರವವಿದೆ. ಈ ಹೆಣ್ಣುಮಕ್ಕಳ ಕೃತ್ಯ ಜಿಲ್ಲೆಯ ಜನತೆ ನಾಚಿಕೆಯಿಂದ ತಲೆ ತಗ್ಗಿಸುವಂತೆ ಮಾಡಿದೆ. ಈ ಕೃತ್ಯದಿಂದ ಇಡೀ ಜಿಲ್ಲೆಗೆ ಅವಮಾನವಾಗಿದೆ. ಇನ್ನು ಈ ವಿಷಯದಲ್ಲಿ ಮೋಜು ಮಸ್ತಿಗೆ ಅವಕಾಶ ಇಲ್ಲ. ಈ ಕೃತ್ಯದ ಹಿಂದೆ ಕಾಣದ ಕೈಗಳ ಕೈವಾಡವಿದೆ. ಘಟನೆಯ ಬಗ್ಗೆ ನನಗೆ ಸಂಶಯವಿದೆ. ಶೌಚಾಲಯದಲ್ಲಿ ಕ್ಯಾಮೆರಾ ಇಟ್ಟಿರುವುದು ಸರಿಯಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

"ಭಾರತೀಯರು ಬಗ್ಗದೇ ಹೋದರೆ...": ಹತಾಶಗೊಂಡ ಟ್ರಂಪ್ ಸಲಹೆಗಾರನಿಂದ ನೇರಾನೇರ ಬೆದರಿಕೆ!

SCO summit: ಟ್ರಂಪ್ ಗೆ ಸೆಡ್ಡು; ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!

BJP, RSS ನಡುವೆ ಭಿನ್ನಾಭಿಪ್ರಾಯ ಇರಬಹುದು, ಆದರೆ ಸಂಘರ್ಷ ಇಲ್ಲ: ಮೋಹನ್ ಭಾಗವತ್

ಧರ್ಮಸ್ಥಳ ಪ್ರಕರಣ: ದೂರುದಾರನ ಮಂಪರು ಪರೀಕ್ಷೆಗೆ ಸೌಜನ್ಯ ತಾಯಿ ಒತ್ತಾಯ; ಹೊಸ ದೂರು ದಾಖಲು!

News headlines 28-08-2025 | ಚಾಮುಂಡಿ ದೇವರು ಹಿಂದೂಗಳ ಆಸ್ತಿ ಅಲ್ಲ- DK Shivakumar; ಪ್ರಮೋದಾ ದೇವಿ ಒಡೆಯರ್ ಪ್ರತಿಕ್ರಿಯೆ ಏನು..?; ಬೀದರ್‌: ಭಾರಿ ಮಳೆ, ಹಲವು ಸೇತುವೆ ಬಂದ್; ಕಾಂಗ್ರೆಸ್ ಶಾಸಕ ವಿರೇಂದ್ರ ಪಪ್ಪಿ ಮತ್ತೆ ED ಕಸ್ಟಡಿಗೆ

SCROLL FOR NEXT