ಡಿ.ಕೆ ಶಿವಕುಮಾರ್ 
ರಾಜ್ಯ

ಈ ವರ್ಷ ಕ್ಷೇತ್ರಾಭಿವೃದ್ಧಿಗೆ ಹಣ ನೀಡಲು ಸಾಧ್ಯವಿಲ್ಲ: DCM ಡಿಕೆ ಶಿವಕುಮಾರ್!

ಐದು ಚುನಾವಣಾ ಭರವಸೆಗಳ ಅನುಷ್ಠಾನದಿಂದ ಉಂಟಾದ ಆರ್ಥಿಕ ಅಡಚಣೆಯಿಂದಾಗಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಈ ವರ್ಷ ಕ್ಷೇತ್ರಾಭಿವೃದ್ಧಿಯನ್ನು ಒದಗಿಸಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರು: ಐದು ಚುನಾವಣಾ ಭರವಸೆಗಳ ಅನುಷ್ಠಾನದಿಂದ ಉಂಟಾದ ಆರ್ಥಿಕ ಅಡಚಣೆಯಿಂದಾಗಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಈ ವರ್ಷ ಕ್ಷೇತ್ರಾಭಿವೃದ್ಧಿಯನ್ನು ಒದಗಿಸಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಭಾರೀ ನಿರೀಕ್ಷೆಗಳನ್ನು ಹೊಂದಿರುವ ಪಕ್ಷದ ಶಾಸಕರು ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ತಾಳ್ಮೆಯಿಂದ ಇರಲು ಪ್ರಯತ್ನಿಸಬೇಕು ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ಶಿವಕುಮಾರ್ ಮನವಿ ಮಾಡಿದ್ದಾರೆ.

ಕೆಲವು ಕಾಂಗ್ರೆಸ್ ಶಾಸಕರು ಅಸಮಾಧಾನಗೊಂಡಿದ್ದು, ತಮ್ಮ ಕ್ಷೇತ್ರಗಳಲ್ಲಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಅಲ್ಲದೆ ತಮ್ಮ ಕೋರಿಕೆಯಂತೆ ಸರ್ಕಾರಿ ನೌಕರರ ವರ್ಗಾವಣೆ ನಡೆದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಪಕ್ಷದ ನಾಯಕತ್ವಕ್ಕೆ ದೂರು ನೀಡಿದ್ದಾರೆ ಎನ್ನಲಾಗಿದೆ. ಇನ್ನು ಸಚಿವರ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿದ್ದು, ಸಹಕಾರ ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ. ಆದರೆ, ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಯಾವುದೇ ಅಸಮಾಧಾನವಿಲ್ಲ ಎಂದು ಶಿವಕುಮಾರ್ ಮತ್ತು ಸಿಎಂ ಸಿದ್ದರಾಮಯ್ಯ ತಳ್ಳಿ ಹಾಕಿದ್ದಾರೆ.

ಕೆಲವು ವಿಷಯಗಳನ್ನು ಚರ್ಚಿಸಲು ಶಾಸಕರು ಶಾಸಕಾಂಗ ಪಕ್ಷದ ಸಭೆ ನಡೆಸುವಂತೆ ಕೇಳಿದ್ದಾರೆ. ನಾವು ಕೂಡ ಕೆಲವು ಹಣಕಾಸಿನ ವಿಷಯಗಳ ಬಗ್ಗೆ ಅವರೊಂದಿಗೆ ಚರ್ಚಿಸಲು ಬಯಸುತ್ತೇವೆ. ಏಕೆಂದರೆ ನಾವು 40,000 ಕೋಟಿ ರೂ.ಗಳನ್ನು(ಐದು ಗ್ಯಾರಂಟಿಗಳನ್ನು ಜಾರಿಗೊಳಿಸಲು) ಮೀಸಲಿಡಬೇಕಾಗುತ್ತದೆ. ಶಿವಕುಮಾರ್ ಹೇಳಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವರ್ಷ ಕ್ಷೇತ್ರಾಭಿವೃದ್ಧಿಗೆ ಅನುದಾನ ನೀಡಲು ಆಗುವುದಿಲ್ಲ. ನೀರಾವರಿ ಇಲಾಖೆ ಅಥವಾ ಪಿಡಬ್ಲ್ಯುಡಿ ಇಲಾಖೆಗೂ ನಮಗೆ ಅನುದಾನ ಒದಗಿಸಲು ಸಾಧ್ಯವಾಗುವುದಿಲ್ಲ. ಹೀಗಾಗಿ ಶಾಸಕರನ್ನು ಕಾಯುವಂತೆ ಕೇಳಿದ್ದೇವೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ಅವರಿಗೆ ಪರಿಸ್ಥಿತಿ ವಿವರಿಸುತ್ತೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‌ ಮಂಡನೆ ವೇಳೆಯೂ ಈ ಮಾತನ್ನು ಹೇಳಿದ್ದು, ಸಚಿವರು ತಾಳ್ಮೆಯಿಂದ ಇರುವಂತೆ ಸೂಚಿಸಿದ್ದಾರೆ ಎಂದು ಶಿವಕುಮಾರ್‌ ಹೇಳಿದರು.

ಹಿಂದಿನ ಸರ್ಕಾರ ದಿವಾಳಿತನ ಸೃಷ್ಟಿಸಿ, ಹೆಚ್ಚಿನ ಟೆಂಡರ್ ಕರೆದು ಬೊಕ್ಕಸ ಖಾಲಿ ಮಾಡಿತ್ತು. ಆದರೂ ಮೊದಲ ವರ್ಷದಲ್ಲಿಯೇ ಖಾತರಿಗಳನ್ನು ಜಾರಿಗೊಳಿಸುವ ಮೂಲಕ ನಮ್ಮ ಸರ್ಕಾರ ಐದು ಗ್ಯಾರಂಟಿಗಳನ್ನು ಪೂರೈಸುತ್ತೇವೆ ಎಂದು ಖಚಿತಪಡಿಸಿಕೊಂಡಿದ್ದೇವೆ.

ಶಾಸಕರು ತಾಳ್ಮೆಯಿಂದಿರಬೇಕು ಎಂದು ಅವರು ಹೇಳಿದರು. ಆದಾಗ್ಯೂ, ತುರ್ತು ಕೆಲಸಗಳಿಗೆ ಖಂಡಿತವಾಗಿಯೂ ಅನುದಾನ ನೀಡಲಾಗುವುದು ಎಂದರು. ನಾಳೆ ಸಂಜೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

SCROLL FOR NEXT