ಸತೀಶ್ ಜಾರಕಿಹೊಳಿ - ನಿತಿನ್ ಗಡ್ಕರಿ ಭೇಟಿ 
ರಾಜ್ಯ

ಸತೀಶ್ ಜಾರಕಿಹೊಳಿಯಿಂದ ನಿತಿನ್ ಗಡ್ಕರಿ ಭೇಟಿ; ಶಿರಾಡಿಘಾಟ್ ಸುರಂಗ ಸೇರಿ ಹಲವು ಕಾಮಗಾರಿಗಳ ಬಗ್ಗೆ ಚರ್ಚೆ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಬುಧವಾರ ದೆಹಲಿಯಲ್ಲಿ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿದ್ದು, ಶಿರಾಡಿ ಘಾಟ್​ನಲ್ಲಿ ಸುರಂಗ ನಿರ್ಮಾಣ ಸೇರಿದಂತೆ ರಾಜ್ಯದ ಹಲವು ಕಾಮಗಾರಿಗಳ ಬಗ್ಗೆ

ದೆಹಲಿ: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಬುಧವಾರ ದೆಹಲಿಯಲ್ಲಿ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿದ್ದು, ಶಿರಾಡಿ ಘಾಟ್​ನಲ್ಲಿ ಸುರಂಗ ನಿರ್ಮಾಣ ಸೇರಿದಂತೆ ರಾಜ್ಯದ ಹಲವು ಕಾಮಗಾರಿಗಳ ಬಗ್ಗೆ ಚರ್ಚಿಸಿದ್ದಾರೆ.

ನಿತಿನ್ ಗಡ್ಕರಿ ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸತೀಶ್ ಜಾರಕಿಹೊಳಿ, ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ಕಾಮಗಾರಿಗಳ ಬಗ್ಗೆ ಚರ್ಚೆ ಮಾಡಿದ್ದೇನೆ. ಈ ಕುರಿತಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರ ಒಂದು ಒಪ್ಪಂದಕ್ಕೆ ಬಂದಿವೆ ಎಂದರು.

ಶಿರಾಡಿ ಘಾಟ್ ಸುರಂಗ ನಿರ್ಮಾಣ, ಗೋಕಾಕ್ ನಗರದಲ್ಲಿ ಎಲಿವೇಟೆಡ್ ಕಾರಿಡಾರ್ ನಿರ್ಮಾಣ, ಬೆಳಗಾವಿ ನಗರದ ಹಳೆಯ ಎನ್‍ಎಚ್-4ನ ಪುಣೆ-ಬೆಂಗಳೂರು ರಸ್ತೆಯಲ್ಲಿ ಎಲಿವೇಟೆಡ್ ಕಾರಿಡಾರ್ ನಿರ್ಮಾಣ ಸೇರಿದಂತೆ ವಿವಿಧ ಯೋಜನೆಗಳ ಬಗ್ಗೆ ಚರ್ಚಿಸಿರುವುದಾಗಿ ಜಾರಕಿಹೊಳಿ ತಿಳಿಸಿದ್ದಾರೆ.

ಶಿರಾಡಿಘಾಟ್​ನಲ್ಲಿ ಸುರಂಗ ನಿರ್ಮಾಣಕ್ಕೆ ಅರಣ್ಯ ಸಮಸ್ಯೆ ಇದೆ. ಒಂದು ಎಕರೆ ಜಮೀನು ಸಮಸ್ಯೆ ಇರಬಾರದು. ರಾಜ್ಯದಿಂದ ಸ್ಪಷ್ಟ ಪ್ರಸ್ತಾವನೆ ಬೇಕಾಗಿದ್ದು, ಸಿಎಂ ಸಿದ್ಧರಾಮಯ್ಯ ಜತೆ ಚರ್ಚಿಸುತ್ತೇನೆ ಎಂದು ಹೇಳಿದರು.

ಇನ್ನು ರಾಜ್ಯದ 38 ರಾಷ್ಟ್ರೀಯ ಹೆದ್ದಾರಿಗಳು ಅಪ್​ಗ್ರೇಡ್ ಆಗಬೇಕಿದೆ. ಬೆಂಗಳೂರಿನಲ್ಲಿ ಸುರಂಗ ನಿರ್ಮಿಸುವ ಬಗ್ಗೆ ಆಸಕ್ತಿ ವಹಿಸಿದ್ದಾರೆ. ರಾಜ್ಯ ಸರ್ಕಾರಕ್ಕೆ ಪತ್ರ ಕೂಡ ಬರೆದಿದ್ದಾರೆ. ಅಂತಿಮ ಪ್ರಸ್ತಾವನೆ ಮುಂದಿನ ದಿನಗಳಲ್ಲಿ ಇಡಲಿದ್ದೇವೆ. ಯಾರು ಹಣ ಹೂಡಿಕೆ ಮಾಡಬೇಕೆಂದು ನಿರ್ಧಾರ ಮಾಡಬೇಕು ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

26 ಸೆಕೆಂಡ್ ನಲ್ಲೇ ಗ್ರೇಟ್ ಎಸ್ಕೇಪ್; ಮೃಗಾಲಯ ವೀಕ್ಷಣೆಗೆ ಬಂದ ಜೋಡಿ, ಗಂಡ ಬೈಕ್ ಪಾರ್ಕ್ ಮಾಡೋ ಗ್ಯಾಪಲ್ಲಿ 'ಲವರ್ ಜೊತೆ ಪತ್ನಿ ಪರಾರಿ'! Video ವೈರಲ್!

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!

ರಾಜಸ್ಥಾನದ ವಿಚಿತ್ರ ಪ್ರಕರಣ: ಮಕ್ಕಳ ಆರೈಕೆ, ಮನೆ ಸ್ವಚ್ಛತೆಗೆ ಕೈದಿಗಳ ಬಳಕೆ; ಕೊನೆಗೆ ಅದೇ ಜೈಲು ಸೇರಿದ ಅಜ್ಮೀರ್ ಮಹಿಳಾ ಜೈಲರ್‌!