ಹೆಚ್'ಡಿ.ದೇವೇಗೌಡ 
ರಾಜ್ಯ

ಹೆಚ್ಚುವರಿ ನೈಸ್ ಭೂಮಿಯನ್ನು ವಾಪಸ್ ಪಡೆದುಕೊಳ್ಳಿ: ಸರ್ಕಾರಕ್ಕೆ ಹೆಚ್ ಡಿ ದೇವೇಗೌಡ ಆಗ್ರಹ

ಬೆಂಗಳೂರು-ಮೈಸೂರು ಮೂಲಸೌಕರ್ಯ ಕಾರಿಡಾರ್ (ಬಿಎಂಐಸಿ) ಯೋಜನೆಗಾಗಿ ನೈಸ್‌ಗೆ ನೀಡಿರುವ ಹೆಚ್ಚುವರಿ ಭೂಮಿಯನ್ನು ಹಿಂಪಡೆಯಬೇಕು ಎಂದು ಮಾಜಿ ಪ್ರಧಾನಮಂತ್ರಿ ಹೆಚ್ ಡಿ ದೇವೇಗೌಡ ಅವರು ಮಂಗಳವಾರ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಬೆಂಗಳೂರು: ಬೆಂಗಳೂರು-ಮೈಸೂರು ಮೂಲಸೌಕರ್ಯ ಕಾರಿಡಾರ್ (ಬಿಎಂಐಸಿ) ಯೋಜನೆಗಾಗಿ ನೈಸ್‌ಗೆ ನೀಡಿರುವ ಹೆಚ್ಚುವರಿ ಭೂಮಿಯನ್ನು ಹಿಂಪಡೆಯಬೇಕು ಎಂದು ಮಾಜಿ ಪ್ರಧಾನಮಂತ್ರಿ ಹೆಚ್ ಡಿ ದೇವೇಗೌಡ ಅವರು ಮಂಗಳವಾರ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

(ಮುಖ್ಯಮಂತ್ರಿ) ಸಿದ್ದರಾಮಯ್ಯ ನೈತಿಕತೆಯ ಬಗ್ಗೆ ಮಾತನಾಡುತ್ತಾರೆ. 11,660 ಎಕರೆ ಹೆಚ್ಚುವರಿ ಭೂಮಿಯನ್ನು ವಾಪಸ್ ಪಡೆಯಲು ಸಮಸ್ಯೆ ಏನಿದೆ? ಇದರ ಪ್ರತಿ ಎಕರೆ ಭೂಮಿಗೆ ಸುಮಾರು 5-10 ಕೋಟಿ ರೂ ವೆಚ್ಚವಾಗುತ್ತದೆ. ಈ ಹಣವನ್ನು ಅವರು ತಮ್ಮ ಐದು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಳ್ಳಬಹುದು. ನೈತಿಕತೆಯ ಬಗ್ಗೆ ಬೋಧಿಸುವ ಬದಲು ಮುಖ್ಯಮಂತ್ರಿಗಳು ಇದರ ಬಗ್ಗೆ ದೃಢ ನಿಲುವು ತಳೆಯಬೇಕು ಎಂದು ಹೇಳಿದರು.

ಸದನ ಸಮಿತಿಯ ನೇತೃತ್ವ ವಹಿಸಿದ್ದ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಟಿ.ಬಿ.ಜಯಚಂದ್ರ ಅವರು ಯೋಜನೆಯಲ್ಲಿನ ಅವ್ಯವಹಾರಗಳ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡುವ ವರದಿಯನ್ನು ನೀಡಿದ್ದಾರೆ. ಜುಲೈ 20, 2023 ರಂದು, ಜಯಚಂದ್ರ ಅವರು ವಿಧಾನಸಭೆಯಲ್ಲಿ ಮಾತನಾಡುತ್ತಾ, ಅಕ್ರಮಗಳಿರುವ ಕಾರಣ ಯೋಜನೆಯನ್ನು ಹಿಂಪಡೆಯಬೇಕೆಂದು ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದರು. ಈ ಸಂಬಂಧ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಂಪುಟ ಉಪ ಸಮಿತಿಯನ್ನೂ ರಚಿಸಲಾಗಿತ್ತು ಎಂದು ಮಾಹಿತಿ ನೀಡಿದರು.

ನೈಸ್ ವಿಚಾರದಲ್ಲಿ ಸರ್ಕಾರದ ವಿರುದ್ಧ ಹೋರಾಟ ನಡೆಸಲು ಬಿಜೆಪಿಯೊಂದಿಗೆ ಕೈಜೋಡಿಸಲು ನಿರ್ಧರಿಸಿದ್ದೇವೆ ಎಂದು ಜೆಡಿಎಸ್ ಶಾಸಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಈ ಹಿಂದೆ ಹೇಳಿಕೆ ನೀಡಿದ್ದರು.

ಯೋಜನೆಯಲ್ಲಿನ ಅಕ್ರಮಗಳ ಬಗ್ಗೆ ಕೇಂದ್ರೀಯ ತನಿಖಾ ದಳಕ್ಕೆ ತನಿಖೆಗೆ ಶಿಫಾರಸು ಮಾಡಬೇಕೆಂದು ಕುಮಾರಸ್ವಾಮಿಯವರು ಸರ್ಕಾರವನ್ನು ಒತ್ತಾಯಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT