ಖೂಷ್ಬೂ ಸುಂದರ್ 
ರಾಜ್ಯ

ಉಡುಪಿ ಕಾಲೇಜು ವಿಡಿಯೋ ಪ್ರಕರಣ: ಪೊಲೀಸರು ಕಾನೂನು ಪ್ರಕಾರ ಕ್ರಮ ಕೈಗೊಂಡಿದ್ದಾರೆ- ಖುಷ್ಬೂ ಸುಂದರ್

ಉಡುಪಿಯ ನೇತ್ರಾ ಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರು ಹಿಂದೂ ಯುವತಿಯ ವಿಡಿಯೋ ರೆಕಾರ್ಡ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪೊಲೀಸರು ಕಾನೂನು ಪ್ರಕಾರ...

ಉಡುಪಿ: ಉಡುಪಿಯ ನೇತ್ರಾ ಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರು ಹಿಂದೂ ಯುವತಿಯ ವಿಡಿಯೋ ರೆಕಾರ್ಡ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪೊಲೀಸರು ಕಾನೂನು ಪ್ರಕಾರ ಕ್ರಮಕೈಗೊಂಡಿದ್ದಾರೆ ಎಂದು ರಾಷ್ಟ್ರೀಯ ಮಹಿಳಾ ಆಯೋಗ(ಎನ್‌ಸಿಡಬ್ಲ್ಯು)ದ ಸದಸ್ಯೆ ಖುಷ್ಬು ಸುಂದರ್ ಅವರು ಗುರುವಾರ ಹೇಳಿದ್ದಾರೆ.

ಇಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚೀಂದ್ರ ಅವರೊಂದಿಗೆ ಸಭೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಖುಷ್ಬು, ಇದೊಂದು ಸೂಕ್ಷ್ಮ ವಿಷಯವಾಗಿದ್ದು, ರಾಜಕೀಯ ಮಾಡಬಾರದು ಎಂದು ಸಮರ್ಥಿಸಿಕೊಂಡರು. "ಪೊಲೀಸರಿಂದ ನನಗೆ ಮಾಹಿತಿ ಸಿಕ್ಕಿದೆ. ತನಿಖೆ ಮುಗಿದಿಲ್ಲ ಮತ್ತು ಇದು ಬಹಳ ಸಮಯ ತೆಗೆದುಕೊಳ್ಳುತ್ತದೆ" ಎಂದು ಅವರು ಹೇಳಿದರು.

ಇದು ಒಂದೇ ದಿನದಲ್ಲಿ ತೀರ್ಮಾನ ಆಗುವುದಿಲ್ಲ, ಪೊಲೀಸರು ಕಾನೂನು ಪ್ರಕಾರ ಕ್ರಮ ಕೈಗೊಂಡಿದ್ದಾರೆ. ಕಾಲೇಜು ಆಡಳಿತ ಮಂಡಳಿ ಪತ್ರಿಕಾಗೋಷ್ಠಿ ನಡೆಸಿ ವಿಡಿಯೋ ಡಿಲೀಟ್ ಮಾಡಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ ನಂತರ ಪೊಲೀಸರು ದೂರು ದಾಖಲಿಸಿದ್ದಾರೆ ಎಂದು ತಿಳಿಸಿದರು.

ಈ ವಿಚಾರವಾಗಿ ಮಾತನಾಡುವವರು ಕಾನೂನನ್ನು ಅರಿತು ಮಾತನಾಡಬೇಕು. ವದಂತಿ ಹಬ್ಬಿಸಬಾರದು. ಹೆಣ್ಣು ಮಕ್ಕಳ ರಕ್ಷಣೆ ನಮಗೆ ಮುಖ್ಯ. ಆ ಹೆಣ್ಣುಮಕ್ಕಳು ನಮ್ಮ ಕುಟುಂಬಕ್ಕೆ ಸೇರಿದವರು. ಸಮಸ್ಯೆ ಪರಿಹರಿಸುವುದು ಮುಖ್ಯ. ಧಾರ್ಮಿಕ ಅಥವಾ ರಾಜಕೀಯ ಕಾರಣಗಳಿಗಾಗಿ ನಾನು ಇಲ್ಲಿಗೆ ಬಂದಿಲ್ಲ. ಪೋಷಕರಾಗಿ ಸಮಸ್ಯೆಯನ್ನು ಪರಿಹರಿಸಲು ಪ್ರಯತ್ನಿಸಲಾಗುವುದು" ಖುಷ್ಬು ಹೇಳಿದ್ದಾರೆ.

"ರಾಜಕೀಯ ಮುಖಂಡರು ಮತ್ತು ರಾಜಕೀಯ ಪಕ್ಷಗಳು ಈ ಪ್ರಕರಣವನ್ನು ರಾಜಕೀಯ ಲಾಭಕ್ಕಾಗಿ ಬಳಸಬಾರದು. ವಿದ್ಯಾರ್ಥಿಗಳು ದೇಶದ ಆಸ್ತಿ ಮತ್ತು ಭವಿಷ್ಯ. ಅವರನ್ನು ರಕ್ಷಿಸಬೇಕು ಮತ್ತು ನಾವೆಲ್ಲರೂ ಜವಾಬ್ದಾರಿಯಿಂದ ವರ್ತಿಸಬೇಕು. ನಾನು ಯಾರನ್ನೂ ದೂಷಿಸಲು ಇಲ್ಲಿಗೆ ಬಂದಿಲ್ಲ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ: 15 ಕಿ.ಮೀ. ಒಳಗಿನ ಅಕ್ರಮ ನಿರ್ಮಾಣ ಕೆಡವಲು ಅಮಿತ್ ಶಾ ಸೂಚನೆ

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

SCROLL FOR NEXT