ಸಂಗ್ರಹ ಚಿತ್ರ 
ರಾಜ್ಯ

ಬಂಡೀಪುರದಲ್ಲಿ ಹುಲಿ, ಚಿರತೆ ಸಾವು: ತನಿಖೆಗೆ ಆದೇಶ

2018-19ರಲ್ಲಿ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಮೃತಪಟ್ಟ ಹುಲಿ ಮತ್ತು ಚಿರತೆಯ ಸಾವಿನ ಕುರಿತು ಅರಣ್ಯ ಇಲಾಖೆ ಮತ್ತೊಮ್ಮೆ ತನಿಖೆಗೆ ಆದೇಶಿಸಿದೆ.

ಬೆಂಗಳೂರು: 2018-19ರಲ್ಲಿ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಮೃತಪಟ್ಟ ಹುಲಿ ಮತ್ತು ಚಿರತೆಯ ಸಾವಿನ ಕುರಿತು ಅರಣ್ಯ ಇಲಾಖೆ ಮತ್ತೊಮ್ಮೆ ತನಿಖೆಗೆ ಆದೇಶಿಸಿದೆ.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ರಾಜ್ಯ ಸರ್ಕಾರ ಮರು ತನಿಖೆ ನಡೆಸುವಂತೆ ಆದೇಶ ನೀಡಿತ್ತು. ಸರ್ಕಾರ ನಿರ್ದೇಶನದಂತೆ ಅರಣ್ಯ ಇಲಾಖೆ ಮರು ತನಿಖೆಗೆ ಆದೇಶಿಸಿದೆ.

ಹುಲಿ ಸಂರಕ್ಷಿತ ಪ್ರದೇಶದ ಮೊಳೆಯೂರು ವ್ಯಾಪ್ತಿಯಲ್ಲಿ ಹುಲಿ ಹಾಗೂ ಚಿರತೆ ಸಾವನ್ನಪ್ಪಿತ್ತು. ಈ ಸಂಬಂಧ ತನಿಖೆ ನಡೆಸುವಂತೆ ಕಾರ್ಯಕರ್ತರು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರಿಗೆ ಮನವಿ ಮಾಡಿಕೊಡಿದ್ದರು. ಇದರಂತೆ ಸಚಿವರು ಅರಣ್ಯ ಇಲಾಖೆಗೆ ಪ್ರಕರಣವನ್ನು ತನಿಖೆ ನಡೆಸುವಂತೆ ಸೂಚನೆ ನೀಡಿದ್ದರು.

ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಹುಲಿ ಸಂರಕ್ಷಿತ ಪ್ರದೇಶದ ಸಿಬ್ಬಂದಿಗಳು. ತನಿಖೆ ಆರಂಭಿಸಲು ಸರ್ಕಾರದ ಆದೇಶಕ್ಕಾಗಿ ಕಾಯುತ್ತಿದ್ದೇವೆಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ