ಸಾಂದರ್ಭಿಕ ಚಿತ್ರ 
ರಾಜ್ಯ

ಬಾಗಲಕೋಟೆ: ಬುದ್ಧಿಮಾಂದ್ಯ ಮಹಿಳೆ ಮೇಲೆ ಅತ್ಯಾಚಾರ ಕೊಲೆಗೆ ಯತ್ನ; ಅಪರಾಧಿಗೆ ಜೀವಾವಧಿ ಶಿಕ್ಷೆ

ಬುದ್ಧಿಮಾಂದ್ಯ ಮಹಿಳೆ ಮೇಲೆ ಅತ್ಯಾಚಾರ ಮಾಡಿದ ಅಪಾರಾಧಿಗೆ ಅಜೀವ ಜೀವಾವಧಿ ಶಿಕ್ಷೆ ಜೊತೆಗ 42 ಸಾವಿರ ರೂ. ದಂಡ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

ಬಾಗಲಕೋಟೆ: ಬುದ್ಧಿಮಾಂದ್ಯ ಮಹಿಳೆ ಮೇಲೆ ಅತ್ಯಾಚಾರ ಮಾಡಿದ ಅಪಾರಾಧಿಗೆ ಅಜೀವ ಜೀವಾವಧಿ ಶಿಕ್ಷೆ ಜೊತೆಗ 42 ಸಾವಿರ ರೂ. ದಂಡ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

ಹನಮಂತ ಮಾಗುಂಡಪ್ಪ ಹುಲಸಗೇರಿ ಶಿಕ್ಷೆಗೆ ಗುರಿಯಾದ ಅಪರಾಧಿಯಾಗಿದ್ದಾನೆ. ಬಾದಾಮಿ ತಾಲೂಕಿನ ನಂದಿಕೇಶ್ವರ ಗ್ರಾಮದವನಾದ ಈತ 2019 ರ ಮೇ.17 ರಂದು ಗ್ರಾಮದಲ್ಲಿ ದ್ಯಾಮವ್ವ ದೇವಿಯ ಉಡಿ ತುಂಬುವ ಕಾರ್ಯಕ್ರಮ ಇತ್ತು, ಗ್ರಾಮದ ಮನೆಯೊಂದರಲ್ಲಿ ಬುದ್ಧಿಮಾಂದ್ಯ ಮಹಿಳೆ ಒಬ್ಬಳೇ ಇದ್ದಾಗ ಮಧ್ಯಾಹ್ನ ಸಮಯದಲ್ಲಿ ಅಕ್ರಮವಾಗಿ ಮನೆಯ ಪ್ರವೇಶ ಮಾಡಿ ಅತ್ಯಾಚಾರ ಎಸಗಿದ್ದ. ಅಲ್ಲದೇ ತಪ್ಪಿಸಿಕೊಂಡು ಹೋಗುವಾಗ ಸಂತ್ರಸ್ತ ಮಹಿಳೆಗೆ ತಲೆಗೆ ಗಾಯಪಡಿಸಿ ಜೊತೆಗೆ ಮನೆಯಲ್ಲಿದ್ದ ಮೊಬೈಲ್​ ಕಳ್ಳತನ ಮಾಡಿ ಪರಾರಿಯಾಗಿದ್ದ. ಈ ಬಗ್ಗೆ ಬಾದಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣದಲ್ಲಿ ಪ್ರತ್ಯಕ್ಷ ಸಾಕ್ಷಿಗಳು ಇಲ್ಲದೇ ಇರುವುದರಿಂದ ಬೆರಳಚ್ಚು ತಜ್ಞರು ಪರಿಶೀಲನೆ ವೇಳೆ ಆಕಸ್ಮಿಕವಾಗಿ ಸಿಕ್ಕ ಬೆರಳು ಮುದ್ರೆ ಹಾಗೂ ಅಪರಾಧಿ ಮಹಿಳೆ ದೇಹದ ಮೇಲೆ ಹಲ್ಲಿನಿಂದ ಕಚ್ಚಿದ್ದ ಗುರುತುಗಳನ್ನು ಅಪರಾಧಿ ಹಲ್ಲಿನೊಂದಿಗೆ ಹೋಲಿಕೆ ಮಾಡಿ ನೋಡಿದಾಗ ಇದು ಆತನದ್ದೇ ಎಂದು ಖಚಿತವಾಗಿದೆ. ನಂತರ ಬಾದಾಮಿ ಸಿಪಿಐ ಕೆ.ಎಸ್.ಹಟ್ಟಿ ತನಿಖೆ ನಡೆಸಿದಾಗ, ವೈದ್ಯಕೀಯ ಪರೀಕ್ಷೆಯಲ್ಲಿ ಹನುಮಂತ ಹುಲಸಗೇರಿ ಮಾಡಿರುವ ಕೃತ್ಯ ಬೆಳಕಿಗೆ ಬಂದಿತ್ತು. ನಂತರ ಆತನನ್ನು ಬಂಧಿಸಿ, ಮನೆಯಲ್ಲಿ ಕಳವಾಗಿದ್ದ ಮೊಬೈಲ್​  ಸಹ ವಶ ಪಡಿಸಿಕೊಳ್ಳಲಾಗಿತ್ತು.

ಈ ಪ್ರಕರಣದ ಕೊನೆಯ ಹಂತದ ತನಿಖೆ ನಡೆಸಿದ್ದ ಸಿಪಿಐ ಆರ್.ಎಚ್. ಹಾನಾಪೂರ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣ ಸಾಬೀತಾದ ಹಿನ್ನೆಲೆಯಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಎನ್​ ವಿ ವಿಜಯ ಅಜೀವ ಜೀವಾವಧಿ ಶಿಕ್ಷೆ ಜೊತೆಗೆ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಇನ್ನು ಸರ್ಕಾರದ ಪರವಾಗಿ ಪ್ರಧಾನ ಸರ್ಕಾರಿ ಅಭಿಯೋಜಕ ವಿ.ಜಿ.ಹೆಬಸೂರ ಪ್ರಕರಣದ ವಾದ ಮಂಡಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

SCROLL FOR NEXT