ಶಿಕ್ಷಕನೊಂದಿಗೆ ಮಾತಿನ ಚಕಮಕಿ ನಡೆಸುತ್ತಿರುವ ಬಸ್ ಚಾಲಕ 
ರಾಜ್ಯ

ಬುರ್ಖಾ ಧರಿಸಿ ಬಸ್​ ಹತ್ತುವಂತೆ ವಿದ್ಯಾರ್ಥಿನಿಯರಿಗೆ ಒತ್ತಾಯ: ಕೆಕೆಆರ್‌ಟಿಸಿ ಬಸ್ ಚಾಲಕ ಅಮಾನತು

ರ್ಖಾ ಧರಿಸಿ ಬಸ್ ಹತ್ತುವಂತೆ ವಿದ್ಯಾರ್ಥಿನಿಯರಿಗೆ ಒತ್ತಾಯ ಮಾಡಿದ್ದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೆಕೆಆರ್‌ಟಿಸಿಯ ಬಸ್ ಚಾಲಕನನ್ನು ಅಮಾನತು ಮಾಡಲಾಗಿದೆ.

ಕಲಬುರಗಿ: ಬುರ್ಖಾ ಧರಿಸಿ ಬಸ್ ಹತ್ತುವಂತೆ ವಿದ್ಯಾರ್ಥಿನಿಯರಿಗೆ ಒತ್ತಾಯ ಮಾಡಿದ್ದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೆಕೆಆರ್‌ಟಿಸಿಯ ಬಸ್ ಚಾಲಕನನ್ನು ಅಮಾನತು ಮಾಡಲಾಗಿದೆ.

ಮಂಗಳವಾರ ಕಲಬುರಗಿ-ಬಸವಕಲ್ಯಾಣ ಮಾರ್ಗದ ಕಮಲಾಪುರ ಬಸ್ ನಿಲ್ದಾಣದಲ್ಲಿ ಬಸ್ ಹತ್ತಲು ಮುಂದಾದ ವಿದ್ಯಾರ್ಥಿನಿಯರಿಗೆ, ಬುರ್ಖಾ ಧರಿಸಿ ಬಸ್ ಹತ್ತುವಂತೆ ಚಾಲಕ ಒತ್ತಾಯ ಮಾಡಿದ್ದ. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಅಗಿತ್ತು.

ವಿದ್ಯಾರ್ಥಿನಿಯೊಬ್ಬಳು ಬಸವಕಲ್ಯಾಣಕ್ಕೆ ಹೋಗುವ ಬಸ್ ಹತ್ತಿದ್ದ ವೇಳೆ ವಿದ್ಯಾರ್ಥಿನಯನ್ನು ಚಾಲಕ ನಿಂದನೆ ಮಾಡಿದ್ದ. ವಿದ್ಯಾರ್ಥಿನಿ ಬಸ್​ ಹತ್ತುತ್ತಿದ್ದಂತೆ ಚಾಲಕ ಅಡ್ಡಪಡಿಸಿದ್ದ, ಅಲ್ಲದೇ, ಹಿಜಾಬ್ ಧರಿಸಿದ್ದ ವಿದ್ಯಾರ್ಥಿನಿಯರನ್ನು ಬುರ್ಖಾ ಧರಿಸಿ ಬಾ.. ಆಗ ಮಾತ್ರ ಬಸ್ ಹತ್ತಲು ಬಿಡುತ್ತೇನೆ ಹೇಳಿ ಬಸ್‌ನಿಂದ ಕೆಳಗಿಳಿಸಿದ್ದ. ಈ ಮೂಲಕ ಚಾಲಕ ದರ್ಪ ಮೆರೆದಿದ್ದ.

ಈ ಕುರಿತ ವಿಡಿಯೋವನ್ನು ವಿದ್ಯಾರ್ಥಿಗಳು ಓದುತ್ತಿರುವ ಅದೇ ಶಾಲೆಯ ಶಿಕ್ಷಕರೊಬ್ಬರು ರೆಕಾರ್ಡ್ ಮಾಡಿದ್ದರು. ಈ ವಿಡಿಯೋ ವೈರಲ್ ಆಗಿತ್ತು. ಚಾಲಕನ ವರ್ತನೆ ವಿರುದ್ಧ ಸಾಕಷ್ಟು ಆಕ್ಷೇಪಗಳೂ ವ್ಯಕ್ತವಾಗಿದ್ದವು.

ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದ ಕೆಕೆಆರ್‌ಟಿಸಿ, ಬುಧವಾರ ಮತ್ತು ಗುರುವಾರ ಘಟನೆ ಕುರಿತು ಪ್ರಾಥಮಿಕ ವಿಚಾರಣೆ ನಡೆಸಿದೆ. ವಿಚಾರಣೆ ವೇಳೆ ಬೀದರ್ ಜಿಲ್ಲೆಯ ಬಸವಕಲ್ಯಾಣ ಡಿಪೋದಲ್ಲಿ ಕೆಲಸ ಮಾಡುತ್ತಿದ್ದ ಚಾಲಕ ಮಹೆಬೂಬಸಾಬ್ ಮತ್ತು ಬಾಲಕಿಯ ಹೇಳಿಕೆಯನ್ನು ಕೊಂಡಿದೆ. ಹೇಳಿಕೆ ವೇಳೆ ಚಾಲಕ ಆರೋಪವನ್ನು ನಿರಾಕರಿಸಿದ್ದಾನೆ.

ಆದರೆ, ಅವರ ಮೇಲಿನ ಆರೋಪಗಳು ಮೇಲ್ನೋಟಕ್ಕೆ ಸಾಬೀತಾಗಿದ್ದು, ಈ ಹಿನ್ನೆಲೆಯಲ್ಲಿ ಮಹೆಬೂಬಸಾಬ್ ಅವರನ್ನು ಅಧಿಕಾರಿಗಳು ಅಮಾನತುಗೊಳಿಸಿದ್ದಾರೆಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT