ಬಂಧಿತ ಶಂಕಿತ ಉಗ್ರರು 
ರಾಜ್ಯ

ಗಡಿಯಲ್ಲಿ ಟ್ರಯಲ್ ಸ್ಫೋಟ ಪ್ರಕರಣ: ರಾಜ್ಯದ ಎಟಿಎಸ್ ನಿಂದ ಶಂಕಿತ ಉಗ್ರರ ವಿಚಾರಣೆ

ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಟ್ರಯಲ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಶಂಕಿತ ಉಗ್ರರನ್ನು ತೀವ್ರ ವಿಚಾರಣೆಗೆ ಒಳಪಡಿಸಿದೆ. 

ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಟ್ರಯಲ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಶಂಕಿತ ಉಗ್ರರನ್ನು ತೀವ್ರ ವಿಚಾರಣೆಗೆ ಒಳಪಡಿಸಿದೆ. 

ಕರ್ನಾಟಕ-ಮಹಾರಾಷ್ಟ್ರದ ಗಡಿಗೆ ಹತ್ತಿರವಿರುವ ಅಂಬೀಲಿ ಅರಣ್ಯ ಪ್ರದೇಶದಲ್ಲಿ ಇಬ್ಬರು ವ್ಯಕ್ತಿಗಳು ಬಾಂಬ್ ಸ್ಫೋಟ ನಡೆಸಿದ್ದರು. ಈ ಇಬ್ಬರು ಶಂಕಿತ ಉಗ್ರರನ್ನು ಪುಣೆಯ ಕೊಥ್​ರೂಡ್ ಪೊಲೀಸರು ಬಂಧಿಸಿದ್ದರು. 

ಬಂಧನಕ್ಕೊಳಗಾಗಿರುವ ಶಂಕಿತ ಉಗ್ರರು, ಬೆಳಗಾವಿಯ ನಿಪ್ಪಾಣಿ, ಸಂಕೇಶ್ವರ ಮಾರ್ಗವಾಗಿ ಮಹಾರಾಷ್ಟ್ರದ ಅಂಬೋಲಿ ಅರಣ್ಯಕ್ಕೆ ತಲುಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿರುವ ಹಿನ್ನೆಲೆಯಲ್ಲಿ ಶಂಕಿತರು ಪ್ರಯಾಣಿಸಿದ್ದ ಪ್ರದೇಶಗಳಲ್ಲಿ ಎಟಿಎಸ್ ಅಧಿಕಾರಿಗಳು ಆಗಮಿಸಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಬೈಕ್ ಕಳ್ಳತನದ ಆರೋಪದಡಿ ಮೊಹಮ್ಮದ್ ಇಮ್ರಾನ್ ಅಲಿಯಾಸ್ ಅಮಿರ್ ಅಬ್ದುಲ್​​​ ಹಮೀದ್ ಖಾನ್ ಮತ್ತು ಮೊಹಮ್ಮದ್ ಯಾಕೂಬ್ ಸಾಕಿ ಎಂಬವರನ್ನು ಬಂಧಿಸಿದಾಗ ಅವರು ನೀಡಿದ ಮಾಹಿತಿ ಆಧಾರದಲ್ಲಿ ಐಸಿಸ್ ಜೊತೆ ನಂಟು ಹೊಂದಿರುವ ಶಂಕೆ ವ್ಯಕ್ತವಾಗಿದೆ. ಈ ವೇಳೆ ಅಂಬೋಲಿ ಪ್ರದೇಶದಲ್ಲಿ ಟ್ರಯಲ್ ಬಾಂಬ್ ಬ್ಲಾಸ್ಟ್ ನಡೆಸಿದ ಮಾಹಿತಿ ಬಹಿರಂಗವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT