ರಾಜ್ಯ

ಉಡುಪಿ ವಿಡಿಯೋ ರೆಕಾರ್ಡ್ ಪ್ರಕರಣ: ತೀರ್ಥಹಳ್ಳಿಯ ಹೆಣ್ಣುಮಕ್ಕಳ ಗೌರವ ಉಳಿಸಲು ಬಿಜೆಪಿಗರಿಗೆ ಮನಸಿಲ್ಲವೇ?

Ramyashree GN

ಬೆಂಗಳೂರು: ಉಡುಪಿಯ ಕಾಲೇಜೊಂದರ ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವಿಡಿಯೋ ರೆಕಾರ್ಡ್ ಮಾಡಿದ ಘಟನೆ ಇದೀಗ ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿದೆ.

ಕಾಂಗ್ರೆಸ್, ಬಿಜೆಪಿ ನಾಯಕರ ನಡುವಿನ ವಾಕ್ಸಮರಕ್ಕೆ ಕಾರಣವಾಗಿದ್ದು, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಎಬಿವಿಪಿ ನಾಯಕರೊಬ್ಬರು ಕಾಲೇಜು ಯುವತಿಯರ ಅಶ್ಲೀಲ ವಿಡಿಯೋಗಳನ್ನು ಪೋಸ್ಟ್ ಮಾಡಿದ್ದ ಪ್ರಕರಣ ಇದೀಗ ಮುನ್ನಲೆಗೆ ಬಂದಿದೆ.

ಉಡುಪಿ ವಿಡಿಯೋ ರೆಕಾರ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ತನಿಖೆಯಾಗಬೇಕೆಂದು ಬಿಜೆಪಿ ಒತ್ತಾಯಿಸುತ್ತಿದ್ದು, ತೀರ್ಥಹಳ್ಳಿಯಲ್ಲಿ ನೂರಾರು ಹಿಂದೂ ವಿದ್ಯಾರ್ಥಿನಿಯರನ್ನು ಲೈಂಗಿಕವಾಗಿ ಬಳಸಿಕೊಂಡು ವಿಡಿಯೋ ಚಿತ್ರೀಕರಿಸಿಕೊಂಡು ಬ್ಲಾಕ್‌ಮೇಲ್ ಮಾಡಿದ್ದರ ಬಗ್ಗೆ ಬಿಜೆಪಿ ಹೋರಾಟ ರೂಪಿಸಲಿ ಎಂದು ಕರ್ನಾಟಕ ಕಾಂಗ್ರೆಸ್ ಕಿಡಿಕಾರಿದೆ.

ಯಾವೊಬ್ಬ ಬಿಜೆಪಿಯವರೂ ತೀರ್ಥಹಳ್ಳಿಯ ಹಿಂದೂ ಹೆಣ್ಣುಮಕ್ಕಳ ಬಗ್ಗೆ ಕಾಳಜಿ ತೋರಿಸುತ್ತಿಲ್ಲ ಏಕೆ?. ತೀರ್ಥಹಳ್ಳಿಯ ಹೆಣ್ಣುಮಕ್ಕಳ ಗೌರವವನ್ನು ಉಳಿಸಲು ಮನಸಿಲ್ಲವೇ? ಎಂದು ಅವರು ಪ್ರಶ್ನಿಸಿದ್ದಾರೆ. 

ಮುಂದುವರಿದು, ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಕಾಂಗ್ರೆಸ್ ಆಡಳಿತದ ಕರ್ನಾಟಕಕ್ಕೆ ಬಂದು ನಿರ್ಭೀತಿಯಿಂದ ಉಡುಪಿ ಕಾಲೇಜು ಪ್ರಕರಣವನ್ನು ಪರಿಶೀಲಿಸಿದ್ದಾರೆ. ಆದರೆ, ಮಹಿಳೆಯರನ್ನು ಬೆತ್ತಲೆಗೊಳಿಸಿದ, ನೂರಾರು ಅತ್ಯಾಚಾರಗಳು ನಡೆದಿರುವ ಬಿಜೆಪಿ ಆಡಳಿತದ ಮಣಿಪುರಕ್ಕೆ ಹೋಗುವುದಕ್ಕೆ ಧೈರ್ಯ ಇಲ್ಲವೇ ಅಥವಾ ಇಚ್ಛೆ ಇಲ್ಲವೇ? ರಾಷ್ಟ್ರೀಯ ಮಹಿಳಾ ಆಯೋಗವು ಮಣಿಪುರದ ವಿಚಾರದಲ್ಲಿ ಕಣ್ಮುಚ್ಚಿ ಕುಳಿತಿರುವುದೇಕೆ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

SCROLL FOR NEXT