ಟಿಬಿ ಜಯಚಂದ್ರ 
ರಾಜ್ಯ

ನೈಸ್ ಸಂಸ್ಥೆಯ ಅಕ್ರಮಗಳ ಕುರಿತು ವರದಿ: ಮಾಜಿ ಸಚಿವ ಟಿಬಿ ಜಯಚಂದ್ರಗೆ ಬೆದರಿಕೆ ಕರೆ

2014 ಮತ್ತು 2016ರ ನಡುವೆ ನಂದಿ ಮೂಲಸೌಕರ್ಯ ಕಾರಿಡಾರ್ ಎಂಟರ್‌ಪ್ರೈಸಸ್‌ನಲ್ಲಿ (ನೈಸ್) ನಡೆದಿರುವ ಅಕ್ರಮಗಳ ಕುರಿತು ವರದಿ ನೀಡಿದ ಬೆನ್ನಲ್ಲೇ ಮಾಜಿ ಸಚಿವ ಮತ್ತು ನವದೆಹಲಿಯ ರಾಜ್ಯದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಅವರಿಗೆ ಅಪರಿಚಿತ ವ್ಯಕ್ತಿಗಳಿಂದ ಬೆದರಿಕೆ ಕರೆಗಳು ಬರುತ್ತಿವೆ.

ಬೆಂಗಳೂರು: 2014 ಮತ್ತು 2016ರ ನಡುವೆ ನಂದಿ ಮೂಲಸೌಕರ್ಯ ಕಾರಿಡಾರ್ ಎಂಟರ್‌ಪ್ರೈಸಸ್‌ನಲ್ಲಿ (ನೈಸ್) ನಡೆದಿರುವ ಅಕ್ರಮಗಳ ಕುರಿತು ವರದಿ ನೀಡಿದ ಬೆನ್ನಲ್ಲೇ ಮಾಜಿ ಸಚಿವ ಮತ್ತು ನವದೆಹಲಿಯ ರಾಜ್ಯದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಅವರಿಗೆ ಅಪರಿಚಿತ ವ್ಯಕ್ತಿಗಳಿಂದ ಬೆದರಿಕೆ ಕರೆಗಳು ಬರುತ್ತಿವೆ.

ಇತ್ತೀಚೆಗಷ್ಟೇ ನಡೆದ ವಿಧಾನಸಭೆ ಅಧಿವೇಶನದಲ್ಲಿ ತಮ್ಮ ವರದಿಯನ್ನು ಜಾರಿಗೊಳಿಸುವಂತೆ ಸರ್ಕಾರಕ್ಕೆ ಸೂಚಿಸಿದ್ದರು. ನಂತರ ರಾಮನಗರದ ಬಿಡದಿಯ ರೈತರು ತಮ್ಮ ಹಿತಾಸಕ್ತಿ ಕಾಪಾಡುವಂತೆ ಮನವಿ ಮಾಡಿದ್ದರು. 

ನೈಸ್ ಸಂಸ್ಥೆಯ ಅಕ್ರಮದ ಬಗ್ಗೆ ನಾನು ರಿಪೋರ್ಟ್ ನೀಡಿದ್ದೆ. ಸಾವಿರಾರು ಎಕರೆ ಸರ್ಕಾರಿ, ಖಾಸಗಿ ರೈತರ ಜಮೀನು ಕಬಳಿಸಿದ್ದಾರೆ. ಕಳೆದ ವಾರ, ರೈತರ ಆಹ್ವಾನದ ಮೇರೆಗೆ ನಾನು ರಾಮನಗರಕ್ಕೆ ತೆರಳಿ ಅವರನ್ನು ಭೇಟಿ ಮಾಡಿದ್ದೆ. ಆದರೆ, ಇತ್ತೀಚೆಗೆ ನನಗೆ ಅನಾಮಧೇಯ ವ್ಯಕ್ತಿಗಳಿಂದ ಬೆದರಿಕೆ ಕರೆಗಳು ಬರುತ್ತಿವೆ ಎಂದು ಜಯಚಂದ್ರ ತಿಳಿಸಿದ್ದಾರೆ.

ಕರೆ ಮಾಡಿದವರು ಮೊದಲಿಗೆ ರೈತರಂತೆ ಮಾತನಾಡಲು ಪ್ರಾರಂಭಿಸುತ್ತಾರೆ. ಆದರೆ, ನಂತರ ಈ ವಿಷಯದಲ್ಲಿ ಮಧ್ಯಪ್ರವೇಶಿಸದಂತೆ ಬೆದರಿಕೆ ಹಾಕುತ್ತಾರೆ ಎಂದು ಅವರು ಟಿಎನ್ಐಇಗೆ ತಿಳಿಸಿದ್ದಾರೆ. ಈ ಸಂಬಂಧ ಜಯಚಂದ್ರ ಅವರ ಆಪ್ತ ಸಹಾಯಕ ಪೊಲೀಸರಿಗೆ ದೂರು ದಾಖಲಿಸಿದ್ದಾರೆ.

ಬೆಂಗಳೂರು-ಮೈಸೂರು ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ (ಬಿಎಂಐಸಿ) ಮತ್ತು ಪೆರಿಫೆರಲ್ ರಿಂಗ್ ರೋಡ್ ನಿರ್ಮಿಸಲು ರೈತರ ಜಮೀನುಗಳನ್ನು ಸ್ವಾಧೀನಪಡಿಸಿಕೊಳ್ಳಲು NICE ಅವಕಾಶವನ್ನು ಹೊಂದಿತ್ತು. ಆದರೆ, ಅದು ಒಪ್ಪಂದದ ಚೌಕಟ್ಟನ್ನು ಬಿಟ್ಟು ಟೌನ್‌ಶಿಪ್‌ಗಳನ್ನು ಅಭಿವೃದ್ಧಿಪಡಿಸಲು ಪ್ರಾರಂಭಿಸಿತು. ಈಗ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿಯಿಂದ ಬಿಎಂಐಸಿ ಯಾವುದೇ ಪ್ರಯೋಜನವಾಗುವುದಿಲ್ಲ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT