ಸಾಂದರ್ಭಿಕ ಚಿತ್ರ 
ರಾಜ್ಯ

ಮಂಗಳೂರು; ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ, ಅಕ್ರಮವಾಗಿ ಇರಿಸಿಕೊಂಡಿದ್ದ ಪಿಸ್ತೂಲ್ ವಶ

ಅಕ್ರಮವಾಗಿ ಬಂದೂಕು ಹೊಂದಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಮಂಜೇಶ್ವರದ ಮಿಯಾಪದವ್ ನಿವಾಸಿ ಅಬ್ಬಾಸ್ (61) ಮತ್ತು ಪೈವಳಿಕೆ ಮಂಜೇಶ್ವರದ ಯಶವಂತ್ ಕುಮಾರ್ (45) ಎಂದು ಗುರುತಿಸಲಾಗಿದೆ.

ಮಂಗಳೂರು: ಪರವಾನಗಿ ಇಲ್ಲದೆ ಅಕ್ರಮವಾಗಿ ಬಂದೂಕು ಹೊಂದಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳನ್ನು ಮಂಜೇಶ್ವರದ ಮಿಯಾಪದವ್ ನಿವಾಸಿ ಅಬ್ಬಾಸ್ (61) ಮತ್ತು ಪೈವಳಿಕೆ ಮಂಜೇಶ್ವರದ ಯಶವಂತ್ ಕುಮಾರ್ (45) ಎಂದು ಗುರುತಿಸಲಾಗಿದೆ.

ಖಚಿತ ಮಾಹಿತಿ ಮೇರೆಗೆ ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆಸಿದ್ದೆವು. ಆರೋಪಿಗಳನ್ನು ಬಜ್ಪೆಯ ಒಡ್ಡಿದಕಲ ಎಂಬಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಆರೋಪಿಗಳಿಂದ ಪರವಾನಗಿ ಇಲ್ಲದ ಪಿಸ್ತೂಲ್, 2 ಮೊಬೈಲ್ ಫೋನ್, ಬೈಕ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಶಪಡಿಸಿಕೊಂಡ ವಸ್ತುಗಳ ಒಟ್ಟು ಮೌಲ್ಯ 1.45 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ.
ಈ ಕುರಿತು ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇಬ್ಬರೂ ಆರೋಪಿಗಳು ಕ್ರಿಮಿನಲ್ ಹಿನ್ನೆಲೆಯನ್ನು ಹೊಂದಿದ್ದಾರೆ. ಅಬ್ಬಾಸ್ ಮೇಲೆ ಹಲ್ಲೆ ಪ್ರಕರಣ ಹಾಗೂ ಮಜೇಶ್ವರ ಪೊಲೀಸ್ ಠಾಣೆಯಲ್ಲಿ ಅಬಕಾರಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಯಶವಂತ್ ವಿರುದ್ಧ ಮಂಗಳೂರು ದಕ್ಷಿಣ, ಮಂಜೇಶ್ವರ, ಕುಂಬಳೆ, ಬದಿಯಡ್ಕ ಪೊಲೀಸ್ ಠಾಣೆಗಳಲ್ಲಿ ಹಲ್ಲೆ, ಕೊಲೆ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel