ಸಚಿವ ಎನ್.ಎಸ್. ಬೋಸರಾಜು 
ರಾಜ್ಯ

ಶಾಸಕಾಂಗ ಸಭೆಯಲ್ಲಿ ನನ್ನ ಬಗ್ಗೆ ಚರ್ಚೆ ನಡೆದಿಲ್ಲ: ಸಚಿವ ಎನ್.ಎಸ್. ಬೋಸರಾಜು ಸ್ಪಷ್ಟನೆ

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ನನಗೆ ಸಚಿವ ಸ್ಥಾನ ನೀಡಿರುವ ಹಾಗೂ ಇಲಾಖೆಯ ನಿರ್ವಹಣೆಯ ಬಗ್ಗೆ ಯಾವುದೇ ಚರ್ಚೆಗಳೂ ನಡೆದಿಲ್ಲ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು ಅವರು ಹೇಳಿದರು.

ರಾಯಚೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ನನಗೆ ಸಚಿವ ಸ್ಥಾನ ನೀಡಿರುವ ಹಾಗೂ ಇಲಾಖೆಯ ನಿರ್ವಹಣೆಯ ಬಗ್ಗೆ ಯಾವುದೇ ಚರ್ಚೆಗಳೂ ನಡೆದಿಲ್ಲ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು ಅವರು ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಪಕ್ಷಕ್ಕೆ ನನ್ನ ಸೇವೆ ಮತ್ತು ನಿಷ್ಠೆ ಮನಗಂಡು ಸಚಿವ ಸ್ಥಾನ ನೀಡಿದ್ದಾರೆ. ಸಚಿವನಾದ ನಂತರ ವಿಧಾನ ಪರಿಷತ್‌ನಲ್ಲಿ ಸಭಾನಾಯಕನಾಗಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ನನ್ನ ಇಲಾಖೆಯಲ್ಲಿ ಶಾಸಕರ ಕೆಲಸಗಳು ಮತ್ತು ಪತ್ರಗಳನ್ನು ನೋಡಿಕೊಳ್ಳಲೆಂದೇ ಸಿಬ್ಬಂದಿ ನೇಮಿಸಿದ್ದೇನೆ. ಅವರು ಶಾಸಕರಿಗೂ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ’ ಎಂದು ಹೇಳಿದರು.

‘ರಾಯಚೂರು ತಾಲ್ಲೂಕನ್ನು ನನ್ನ ನೋಡಲ್ ತಾಲ್ಲೂಕಾಗಿ ಆಯ್ಕೆ ಮಾಡಿಕೊಂಡಿದ್ದು, ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳ ಸಹಕಾರದೊಂದಿಗೆ ಅಭಿವೃದ್ಧಿಯ ಗುರಿ ಇಟ್ಟುಕೊಂಡಿದ್ದೇನೆ ಎಂದು ತಿಳಿಸಿದರು.

ಸಭಾನಾಯಕನಾಗಿದ್ದರಿಂದ ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿಯ ಜೊತೆ ವೇದಿಕೆಯಲ್ಲಿದ್ದು, ಎಲ್ಲರ ಮಾತುಗಳನ್ನು ಆಲಿಸಿದ್ದೇನೆ. ನನ್ನ ಸಚಿವ ಸ್ಥಾನ ಮತ್ತು ಇಲಾಖೆಯ ಬಗ್ಗೆ ಯಾವುದೇ ಶಾಸಕರು ಪ್ರಶ್ನೆ ಮಾಡಿಲ್ಲ’ ಎಂದು ಸ್ಪಷ್ಟಪಡಿಸಿದರು.

ಸಭೆಯಲ್ಲಿ ರಾಯಚೂರಿನ ಕೆಲವು ಶಾಸಕರು ಧ್ವನಿ ಎತ್ತಲು ಮುಂದಾಗಿದ್ದರು. ಆದರೆ, ಇದು ಪಕ್ಷಕ್ಕೆ ಮುಜುಗರವನ್ನುಂಟು ಮಾಡಲಿದೆ ಎಂದು ಭಾವಿಸಿದ ಮುಖ್ಯಮಂತ್ರಿಗಳು ಅವರಿಗೆ ಮಾತನಾಡಲು ಅವಕಾಶವನ್ನೇ ನೀಡಲಿಲ್ಲ ಎಂದು ಹೆಸರು ಹೇಳಲಿಚ್ಛಿಸದ ಶಾಸಕರೊಬ್ಬರು ಹೇಳಿದ್ದಾರೆ.

ಮುಖ್ಯಮಂತ್ರಿಗಳು ನಿರಂತರವಾಗಿ ಮಾತನಾಡುತ್ತಲೇ ಇದ್ದರು. ಸಂಪುಟದ ಸಹೋದ್ಯೋಗಿಗಳಿಂದ ತಪ್ಪುಗಳಿದ್ದರೆ ಸರಿಪಡಿಸಲಾಗುವುದು ಎಂದು ಹೇಳುವ ಮೂಲಕ ಶಾಸಕರನ್ನು ಸಮಾಧಾನಪಡಿಸುವಲ್ಲಿ ಯಶಸ್ವಿಯಾದರು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡ್ರಗ್ಸ್ ಸೇವನೆ ದೃಢ: ಫುಕೆಟ್- ದೆಹಲಿ ಏರ್ ಇಂಡಿಯಾ ವಿಮಾನದ ಮುಖ್ಯ ಪೈಲಟ್ ವಜಾ!

ಜಮ್ಮು-ಕಾಶ್ಮೀರ: ಬುಡ್ಗಾಮ್‌ ಎನ್ ಕೌಂಟರ್ ನಲ್ಲಿ ಉಗ್ರನ ಹತ್ಯೆ; AK ರೈಫಲ್ ಮತ್ತಿತರ ಶಸ್ತ್ರಾಸ್ತ್ರಗಳು ವಶ!

‘ಹೂತುಹಾಕಬೇಕು ಎನ್ನುವವರಲ್ಲ ನಾವು’.. ‘ಮಹಿಳೆಯರಿಗೆ ಶಿಕ್ಷಣ, ಅವಕಾಶ ನೀಡುತ್ತಿದ್ದೇವೆ’: ‘ಮನೆಯಲ್ಲೇ ಇರಬೇಕು’ ಹೇಳಿಕೆಗೆ ಮುಸ್ಲಿಂ ಧರ್ಮಗುರು ಸ್ಪಷ್ಟನೆ, Video

Mysuru Dasara: 'ಯುವ ದಸರಾ' ಉದ್ಘಾಟನೆಗೆ ಖ್ಯಾತ ನೃತ್ಯ ನಿರ್ದೇಶಕ ಪ್ರಭುದೇವಗೆ ಆಹ್ವಾನ!

India without Politics: 'ಹನುಮಾನ್ ಅಂಶ್' ನೋಡಲು ಚಪ್ಪಲಿ ಬಿಚ್ಚಿ ಕುಳಿತ ಮುಸ್ಲಿಂ ವ್ಯಕ್ತಿ; video ವೈರಲ್