ನಕಲಿ ನೋಟು ಜಾಲ ಬೇಧಿಸಿದ ಬೆಂಗಳೂರು ಪೊಲೀಸರು; ಮೂವರ ಬಂಧನ
ಬೆಂಗಳೂರು ನಕಲಿ ನೋಟು ಚಲಾವಣೆ ಮಾಡುತ್ತಿದ್ದ ಮೂವರನ್ನು ಬಂಧಿಸುವ ಮೂಲಕ ಮೂಲಕ ಅಂತರರಾಜ್ಯ ನಕಲಿ ನೋಟು ಜಾಲವನ್ನು ಭೇದಿಸಿದ್ದಾರೆ ಮತ್ತು 6.53 ಲಕ್ಷ ಮೌಲ್ಯದ 500 ರೂಪಾಯಿ ಮುಖಬೆಲೆಯ 1,307 ನಕಲಿ...
ಬೆಂಗಳೂರು: ಬೆಂಗಳೂರು ನಕಲಿ ನೋಟು ಚಲಾವಣೆ ಮಾಡುತ್ತಿದ್ದ ಮೂವರನ್ನು ಬಂಧಿಸುವ ಮೂಲಕ ಮೂಲಕ ಅಂತರರಾಜ್ಯ ನಕಲಿ ನೋಟು ಜಾಲವನ್ನು ಭೇದಿಸಿದ್ದಾರೆ ಮತ್ತು 6.53 ಲಕ್ಷ ಮೌಲ್ಯದ 500 ರೂಪಾಯಿ ಮುಖಬೆಲೆಯ 1,307 ನಕಲಿ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ.
ತಮ್ಮ ವ್ಯಾಪ್ತಿಯಲ್ಲಿ ಇಬ್ಬರು ವ್ಯಕ್ತಿಗಳು ನಕಲಿ ನೋಟುಗಳನ್ನು ಚಲಾವಣೆ ಮಾಡುತ್ತಿರುವ ಬಗ್ಗೆ ರಹಸ್ಯ ಮಾಹಿತಿ ಪಡೆದ ಕಾಟನ್‌ಪೇಟೆ ಪೊಲೀಸರು, ಅವರನ್ನು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ.
ಪೊಲೀಸರ ಪ್ರಕಾರ, ಬಂಧಿತ ಆರೋಪಿಗಳ ಪೈಕಿ ಇಬ್ಬರು ಕೇರಳ ಮೂಲದವರಾಗಿದ್ದು, ಬೆಂಗಳೂರಿನ ಸಿಟಿ ರೈಲ್ವೆ ನಿಲ್ದಾಣದ ಬಳಿ ಅವರು ಮೆಜೆಸ್ಟಿಕ್‌ನ ಜನನಿಬಿಡ ಪ್ರದೇಶದಲ್ಲಿ ಸಣ್ಣ ಪ್ರಮಾಣದಲ್ಲಿ ನಕಲಿ ನೋಟುಗಳನ್ನು ಸರಬರಾಜು ಮಾಡುತ್ತಿರುವುದು ಪತ್ತೆಯಾಗಿದೆ.
ಬಂಧಿತ ಇಬ್ಬರು ಆರೋಪಿಗಳು ನೀಡಿದ ಮಾಹಿತಿ ಆಧಾರದ ಮೇಲೆ, ತಮಿಳುನಾಡು ಮೂಲದ ಮೂರನೇ ಸಹಚರನನ್ನು ಹೊಸೂರಿನಲ್ಲಿ ಬಂಧಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿಚಾರಣೆಯ ಸಮಯದಲ್ಲಿ, ಹೊಸೂರಿನಿಂದ ಬಂಧಿಸಲ್ಪಟ್ಟ ಮೂರನೇ ಸಹಚರನು ಬಿಹಾರದ ಪಾಟ್ನಾ ಮೂಲದ ವ್ಯಕ್ತಿಯಿಂದ ನಕಲಿ ನೋಟುಗಳನ್ನು ಪಡೆದಿರುವುದಾಗಿ ಪೊಲೀಸರಿಗೆ ತಿಳಿಸಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.