ನೈತಿಕ ಪೊಲೀಸ್​ ಗಿರಿ (ಸಾಂದರ್ಭಿಕ ಚಿತ್ರ) 
ರಾಜ್ಯ

ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್​ ಗಿರಿ; ವರದಿಗಾರನ ಮೇಲೆ ಹಲ್ಲೆ ಯತ್ನ, ಇಬ್ಬರ ಬಂಧನ

ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ಘಟನೆ ವರದಿಯಾಗಿದ್ದು ಸ್ಥಳೀಯ ಖಾಸಗಿ ವೆಬ್​ಸೈಟ್ ಒಂದರ ವರದಿಗಾರನ ಮೇಲೆ ನಗರದ ಕಾವೂರಿನಲ್ಲಿ ಜುಲೈ 28ರ ರಾತ್ರಿ ಹಲ್ಲೆ ನಡೆದಿದ್ದು ಆರೋಪಿಗಳನ್ನು ಬಂಧಿಸಲಾಗಿದೆ.

ಮಂಗಳೂರು: ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ಘಟನೆ ವರದಿಯಾಗಿದ್ದು ಸ್ಥಳೀಯ ಖಾಸಗಿ ವೆಬ್​ಸೈಟ್ ಒಂದರ ವರದಿಗಾರನ ಮೇಲೆ ನಗರದ ಕಾವೂರಿನಲ್ಲಿ ಜುಲೈ 28ರ ರಾತ್ರಿ ಹಲ್ಲೆ ನಡೆದಿದ್ದು ಆರೋಪಿಗಳನ್ನು ಬಂಧಿಸಲಾಗಿದೆ.

ಕಾವೂರು ಬಳಿಯ ರೆಸ್ಟೋರೆಂಟ್​ಗೆ ಸ್ಥಳೀಯ ಖಾಸಗಿ ವೆಬ್​ಸೈಟ್ ವರದಿಗಾರ ಅಭಿಜಿತ್ ಎಂಬವರು ಸ್ನೇಹಿತೆ ಜೊತೆ ಊಟಕ್ಕೆ ತೆರಳಿದ್ದರು. ಊಟ ಮುಗಿಸಿ ವಾಪಾಸಾಗುತ್ತಿದ್ದ ವೇಳೆ ಕೆಲ ಯುವಕರು ಅವರನ್ನು ನೀನು ಮುಸ್ಲಿಂ ಅಲ್ಲವೇ ಎಂದು ಪ್ರಶ್ನಿಸಿ ಹಲ್ಲೆಗೆ ಮುಂದಾಗಿದ್ದರು. ಈ ಸಂಬಂಧ ಕಾವೂರು ಪೊಲೀಸ್ ಠಾಣೆಗೆ ಅಭಿಜಿತ್ ದೂರು ನೀಡಿದ್ದು, ಎಫ್ಐಆರ್ ದಾಖಲಿಸಲಾಗಿದೆ.

ಈ ಪ್ರಕರಣ ಸಂಬಂಧ ಕೋಟೇಕಾರು ನಿವಾಸಿ 37 ವರ್ಷದ ಚೇತನ್ ಹಾಗೂ ಯೆಯ್ಯಾಡಿ ನಿವಾಸಿ 43 ವರ್ಷದ ನವೀನ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು ನಗರ ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಆರ್ ಜೈನ್ ಅವರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಜುಲೈ 28 ರಂದು ಎಫ್ಐಆರ್ ದಾಖಲಿಸಲಾಗಿದೆ. ಆರೋಪಿಗಳ ವಿರುದ್ಧ ಸೆಕ್ಷನ್ 506 (ಕ್ರಿಮಿನಲ್ ಬೆದರಿಕೆ), 507 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'Gaza deal ಒಪ್ಕೊಳ್ಳಿ.. ಇಲ್ಲ ನರಕ ತೋರಿಸ್ತೀವಿ': Hamas ಗೆ ಡೊನಾಲ್ಡ್ ಟ್ರಂಪ್ ಅಂತಿಮ ಎಚ್ಚರಿಕೆ!

2 ವರ್ಷದೊಳಗಿನ ಮಕ್ಕಳಿಗೆ ಕೆಮ್ಮಿನ ಸಿರಪ್ ನೀಡಬೇಡಿ: 11 ಮಕ್ಕಳ ಸಾವಿನ ನಂತರ ಕೇಂದ್ರ ಎಚ್ಚರಿಕೆ

ಖ್ಯಾತ ಹಿರಿಯ ಪತ್ರಕರ್ತ, ಲೇಖಕ ಟಿಜೆಎಸ್ ಜಾರ್ಜ್ ನಿಧನ

ಕರೂರ್ ಕಾಲ್ತುಳಿತ ತನಿಖೆಗೆ SIT ರಚನೆ: ಸ್ಥಳದಿಂದ ಓಡಿ ಹೋದ ವಿಜಯ್​​ಗೆ ಮದ್ರಾಸ್ ಹೈಕೋರ್ಟ್ ತರಾಟೆ

'ಭೌಗೋಳಿಕ ನಕ್ಷೆಯಲ್ಲಿ ಕೂಡ ಇರದಂತೆ ಅಳಿಸಿ ಹಾಕುತ್ತೇವೆ': ಬಾಲ ಬಿಚ್ಚಿದ ಪಾಕಿಸ್ತಾನಕ್ಕೆ ಭಾರತೀಯ ಸೇನಾ ಮುಖ್ಯಸ್ಥ ದ್ವಿವೇದಿ ಎಚ್ಚರಿಕೆ! Video

SCROLL FOR NEXT