ದಿನೇಶ್ ಗುಂಡೂರಾವ್ 
ರಾಜ್ಯ

ಬಿಜೆಪಿ ಸರ್ಕಾರ ಅವಧಿಯ ಕೊರೊನಾ ಹಗರಣದ ಬಗ್ಗೆ ತನಿಖೆ ನಡೆಸುವುದು ನಿಶ್ಚಿತ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಕಳೆದ ಬಿಜೆಪಿ ಸರ್ಕಾರ ಅವಧಿಯಲ್ಲಿ ಡಾ ಕೆ ಸುಧಾಕರ್ ಆರೋಗ್ಯ ಮಂತ್ರಿಯಾಗಿದ್ದಾಗ ಕೋವಿಡ್ ಹಗರಣ ಬಹಳ ದೊಡ್ಡ ಸುದ್ದಿ ಮಾಡಿತ್ತು. ಹಿಂದಿನ ಸರ್ಕಾರದಲ್ಲಿ ಕೋವಿಡ್ ಸೋಂಕಿನ ಸಂದರ್ಭದಲ್ಲಿ ಸಾರ್ವಜನಿಕ ಹಣ ದುರುಪಯೋಗದ ಆರೋಪ ಕೇಳಿಬಂದಿತ್ತು. ಅದೀಗ ಮತ್ತೆ ಸುದ್ದಿಯಲ್ಲಿದೆ.

ಬೆಂಗಳೂರು: ಕಳೆದ ಬಿಜೆಪಿ ಸರ್ಕಾರ ಅವಧಿಯಲ್ಲಿ ಡಾ ಕೆ ಸುಧಾಕರ್ ಆರೋಗ್ಯ ಮಂತ್ರಿಯಾಗಿದ್ದಾಗ ಕೋವಿಡ್ ಹಗರಣ ಬಹಳ ದೊಡ್ಡ ಸುದ್ದಿ ಮಾಡಿತ್ತು. ಹಿಂದಿನ ಸರ್ಕಾರದಲ್ಲಿ ಕೋವಿಡ್ ಸೋಂಕಿನ ಸಂದರ್ಭದಲ್ಲಿ ಸಾರ್ವಜನಿಕ ಹಣ ದುರುಪಯೋಗದ ಆರೋಪ ಕೇಳಿಬಂದಿತ್ತು. ಅದೀಗ ಮತ್ತೆ ಸುದ್ದಿಯಲ್ಲಿದೆ.

ಬಿಜೆಪಿ ಸರ್ಕಾರದ ಅವಧಿಯ ಕೋವಿಡ್ ಹಗರಣಗಳ ಬಗ್ಗೆ ತನಿಖೆ ನಡೆಸುವುದು ನಿಶ್ಚಿತ. ಕೋವಿಡ್ ಹಗರಣವನ್ನು ನ್ಯಾಯಾಂಗ ತನಿಖೆಗೆ ವಹಿಸುವ ಚಿಂತನೆ ಇದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಾ ತಿಳಿಸಿದ್ದಾರೆ.

ಕೊರೋನಾ ಹಗರಣ ಬಗ್ಗೆ ನ್ಯಾಯಾಂಗ ತನಿಖೆ ವಿಚಾರವನ್ನು ಸಿಎಂ ಮುಂದೆ ಪ್ರಸ್ತಾಪಿಸಿದ್ದೇವೆ. ಸಾರ್ವಜನಿಕರ ಹಣ ದುರುಪಯೋಗದ ಬಗ್ಗೆ ವರದಿ ಬಂದಿದೆ. ತನಿಖೆ ನಡೆಸುವುದು ನಿಶ್ಚಿತ ಎಂದಿದ್ದಾರೆ.

ಬೆಂಗಳೂರು ಸಿಟಿ ರೌಂಡ್ಸ್ ಹಾಕುತ್ತಿದ್ದ ವೇಳೆ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವರು, ನಾನು ಆಸ್ಪತ್ರೆಗೆ ಭೇಟಿ ಕೊಟ್ಟಿದ್ದೇನೆ. ಇಲ್ಲಿ ಸ್ವಚ್ಚತೆ, ಡಾಕ್ಟರ್​ಗಳ ಹಾಜರಾತಿ ಬಗ್ಗೆ ಸಾಮಾಜಿಕ ಕಾರ್ಯಕರ್ತನ ಮೂಲಕ ದೂರು ಬಂದಿತ್ತು. ವಿಧಾನಸಭೆಯಲ್ಲಿ ಜಯನಗರ ಆಸ್ಪತ್ರೆಗೆ ಭೇಟಿ ನೀಡುತ್ತೇನೆ ಎಂದಿದ್ದೆ. ಆದೇ ರೀತಿ ಇಂದು ಆಸ್ಪತ್ರೆಗೆ ಭೇಟಿ ನೀಡಿದ್ದೇನೆ. ಇನ್ನು ಆಸ್ಪತ್ರೆ ಪರಿಶೀಲನೆ ನಡೆಸುತ್ತಿದ್ದೇನೆ. ದಿಢೀರ್ ಭೇಟಿ ಕೊಡುವುದನ್ನು ಮುಂದಿನ ದಿನಗಳಲ್ಲಿ ಮಾಡುತ್ತೇನೆ. ಹೊರಗಿನಿಂದ ಬಂದು ಆಸ್ಪತ್ರೆಯಲ್ಲಿ ಹಸ್ತಕ್ಷೇಪ ಮಾಡುವುದು ತಪ್ಪು. ಏನೆಲ್ಲಾ ತೊಂದರೆ ಆಗುತ್ತಿದೆ ಅದಕ್ಕೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳದಲ್ಲಿ ಭೀಕರ ಪ್ರವಾಹ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇಶಿಯರು ಸೇರಿ 4,000ಕ್ಕೂ ಹೆಚ್ಚು ಮಂದಿ ಇನ್ನೂ ನಾಪತ್ತೆ!

ನೆರೆ ಸಂತ್ರಸ್ತರಿಗೆ ನೆರವು ಹೊತ್ತು ಹೋದವರಿಗೆ ಶಾಕ್: 'ಇಲ್ಲೇ ಖರೀದಿಸಿ' ಎಂದ ನೇಪಾಳ ಅಧಿಕಾರಿಗಳು! ಆಗಿದ್ದೇನು?

ಬಾಕ್ಸ್ ಆಫೀಸ್ ನಲ್ಲಿ ಮುಗ್ಗರಿಸಿದ 'Batwara 1947': ಸನ್ನಿ ಡಿಯೋಲ್ ಮುಸ್ಲಿಂ ಪಾತ್ರ ಜನರಿಗೆ ಇಷ್ಟವಾಗಲಿಲ್ಲವೇ! ಶಬಾನಾ ಆಜ್ಮಿ ಹೇಳಿದ್ದೇನು?

Hit And Run: ಪಾದಚಾರಿಗೂ ಜೀವಂತವಾಗಿ ರಸ್ತೆ ದಾಟುವ ಹಕ್ಕಿದೆ: ದೆಹಲಿ ಕೋರ್ಟ್

ರಾಹುಲ್ ಗಾಂಧಿಯನ್ನು ಪ್ರಧಾನಿ ಅಭ್ಯರ್ಥಿಯಾಗಿ ಒಪ್ಪದಿದ್ದರೆ TVK ಸಂಪುಟದಿಂದ ಕಾಂಗ್ರೆಸ್ ಹೊರಬರಲಿದೆ: ಸಚಿವ