ಸಾಂದರ್ಭಿಕ ಚಿತ್ರ 
ರಾಜ್ಯ

ದಾವಣಗೆರೆ: ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆಗೈದ ಪಾಪಿ ತಂದೆ

ದಾವಣಗೆರೆಯಲ್ಲಿ ಪಾಪಿ ತಂದೆಯೊಬ್ಬ ತನ್ನ ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆಗೈದ ಅಮಾನವೀಯ ಘಟನೆ ನಡೆದಿದೆ. 

ದಾವಣಗೆರೆ: ದಾವಣಗೆರೆಯಲ್ಲಿ ಪಾಪಿ ತಂದೆಯೊಬ್ಬ ತನ್ನ ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆಗೈದ ಅಮಾನವೀಯ ಘಟನೆ ನಡೆದಿದೆ. 

ಮೃತ ಮಕ್ಕಳು ನಾಲ್ಕು ವರ್ಷದ ಅದ್ವೈತ್ ಮತ್ತು ಅನ್ವೀತ್ ಎಂದು ತಿಳಿದುಬಂದಿದೆ. ಇನ್ನು ತನ್ನ ಮಕ್ಕಳನ್ನು ತಂದೆ 35 ವರ್ಷದ ಅಮರ ಕಿತ್ತೂರು ಹತ್ಯೆ ಮಾಡಿದ್ದಾನೆ. ಅಮರ ಕಿತ್ತೂರು ಮೂಲತಃ ಗೋಕಾಕ ನಿವಾಸಿಯಾಗಿದ್ದು ದಾವಣಗೆರೆ ನಗರದ ಆಂಜನೇಯ ಮಿಲ್ ಬಡಾವಣೆಯಲ್ಲಿ ಕುಟುಂಬದೊಂದಿಗೆ ವಾಸವಾಗಿದ್ದನು.

ಅಮರ ಹರಿಹರದ ಕಾರ್ಗಿಲ್ ಪ್ಯಾಕ್ಟರಿಯಲ್ಲಿ ಕೆಮಿಕಲ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದು ತನ್ನ ಪತ್ನಿ ಜಯಲಕ್ಷ್ಮಿ ತವರು ಮನೆ ವಿಜಯಪುರಕ್ಕೆ ಹೋಗಿದ್ದಳು. ಇನ್ನು ಅಮರ ತನ್ನ ಮಕ್ಕಳನ್ನು ಹಾವೇರಿ ಜಿಲ್ಲೆಯ ರಾಣೆಬೆನ್ನೂರ ತಾಲೂಕಿನ ಚಳಗೆರೆ ಟೋಲ್ ಗೇಟ್ ಗೆ ಕಾರಿನಲ್ಲಿ ಕರೆದುಕೊಂಡು ಹೋಗಿ ಅಲ್ಲಿ ಇಬ್ಬರ ಬಾಯಿಗೂ ಟೇಪ್ ಅಂಟಿಸಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ.

ನಂತರ ಮಕ್ಕಳ ಶವವನ್ನು ಕಾರಿನಲ್ಲಿ ತಂದಿದ್ದನು. ಇನ್ನು ಮಕ್ಕಳ ಸಾವಿನ ಬಗ್ಗೆ ಸಂಶಯ ಬಂದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರ ತನಿಖೆಯ ವೇಳೆ ಮಕ್ಕಳನ್ನು ತಾನೇ ಕೊಲೆ ಮಾಡಿದ್ದಾಗಿ ಅಮರ ಒಪ್ಪಿಕೊಂಡಿದ್ದಾನೆ. ಈ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!

Nepal floods: ನೇಪಾಳ ಪ್ರವಾಹದ ಭೀಕರತೆ, 150 ಕಿ.ಮೀ ದೂರದ ಉತ್ತರ ಪ್ರದೇಶಕ್ಕೆ ಕೊಚ್ಚಿಕೊಂಡು ಬಂದ ಶವಗಳು!

Nepal Floods: ‘ಸಾವಿನ ಸಂಖ್ಯೆ ಊಹೆಗೂ ನಿಲುಕದಷ್ಟು ಏರಬಹುದು’; ಚೀನಾ ನಡೆ ಕುರಿತು ನೇಪಾಳ ಮಾಜಿ ಸಚಿವರ ಅನುಮಾನ!

ಮಣಿಪುರದಲ್ಲಿ ಉಗ್ರರ ಅಟ್ಟಹಾಸ: ನಾಲ್ವರ ಸಾವು, ಒಬ್ಬ ನಾಪತ್ತೆ

Nepal Floods: ಭೀಕರ ಪ್ರವಾಹದಲ್ಲಿ 30 ದೇಶಗಳ ನಾಗರೀಕರು ನಾಪತ್ತೆ, ಅಮೆರಿಕದವರೇ ಅತಿ ಹೆಚ್ಚು!